ಸುರತ್ಕಲ್: ಸತ್ಯಧರ್ಮದ ತವರೂರು, ದೇಯಿ ಬೈದ್ಯೆತಿ ಹಾಗೂ ಕೋಟಿ-ಚೆನ್ನಯರ ಮೂಲಸ್ಥಾನವಾದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ದಿನಾಂಕ 27-02-2026ರಂದು ನಡೆದ ವಾರ್ಷಿಕ ಜಾತ್ರಾ ಮಹೋತ್ಸವದಲ್ಲಿ ಯುವವಾಹಿನಿ (ರಿ.) ಸುರತ್ಕಲ್ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದರು.

ಈ ಪುಣ್ಯ ಸಂದರ್ಭದಲ್ಲಿ ಸುರತ್ಕಲ್ ಘಟಕದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಘಟಕದ ಸದಸ್ಯರು ಒಟ್ಟಾಗಿ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ, ದೈವ-ದೇವರುಗಳ ದರ್ಶನ ಪಡೆದರು. ಕ್ಷೇತ್ರದ ವತಿಯಿಂದ ನೀಡಲಾದ ಬ್ರಹ್ಮ ಬೈದರುಗಳ ಗಂಧ ಪ್ರಸಾದವನ್ನು ಸ್ವೀಕರಿಸಿ ಧನ್ಯತೆ ಮೆರೆದರು. ವಾರ್ಷಿಕ ಜಾತ್ರೆಯ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡ ಘಟಕದ ತಂಡವು ಕ್ಷೇತ್ರದ ಅಭಿವೃದ್ಧಿ ಹಾಗೂ ಭಕ್ತಾದಿಗಳ ಸೇವೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿತು.


