ಮಂಗಳೂರು/ಪುಣಚ: ಪುಣಚ ಸಮೀಪದ ಬಳಂತಿಮೊಗರು ಶ್ರೀ ಬ್ರಹ್ಮಬೈದರ್ಕಳ ಗರಡಿ (ರಿ.) ಇಲ್ಲಿ ಫೆಬ್ರವರಿ 26ರಂದು ಜರುಗಿದ ನೂತನ ಪ್ರತಿಷ್ಠಾ ಬ್ರಹ್ಮಕಲಸೋತ್ಸವದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಯುವವಾಹಿನಿ (ರಿ.) ಮಂಗಳೂರು ಘಟಕದ ಪದಾಧಿಕಾರಿಗಳು ಭಾಗವಹಿಸಿದರು.

ಶ್ರೀ ಕ್ಷೇತ್ರದಲ್ಲಿ ನಡೆದ ವೈಭವದ ಬ್ರಹ್ಮಕಲಸೋತ್ಸವ ಹಾಗೂ ಧಾರ್ಮಿಕ ಸಭೆಯಲ್ಲಿ ಮಂಗಳೂರು ಘಟಕದ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದು, ಬ್ರಹ್ಮ ಬೈದರುಗಳ ದರ್ಶನ ಪಡೆದರು. ಈ ಪವಿತ್ರ ಸಂದರ್ಭದಲ್ಲಿ ಕ್ಷೇತ್ರದ ಗಂಧ ಪ್ರಸಾದವನ್ನು ಸ್ವೀಕರಿಸಿ ಧನ್ಯತೆ ಅನುಭವಿಸಿದರು. ಈ ಸಂದರ್ಭದಲ್ಲಿ ಘಟಕದ ಸದಸ್ಯರು ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು


