Yuvavahini

FEB 28, 2026 9.00 PM IST

ಯುವವಾಹಿನಿ ಕಡಬ ಘಟಕದ ವತಿಯಿಂದ

ಬಳ್ಪದಲ್ಲಿ ‘ಗುರುಸ್ಫೂರ್ತಿ’ ಸಂಪನ್ನ

ಕಡಬ: ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ ಆದರ್ಶಗಳನ್ನು ಮನೆಮನಕ್ಕೆ ತಲುಪಿಸುವ ನಿಟ್ಟಿನಲ್ಲಿ ಯುವವಾಹಿನಿ (ರಿ.) ಕಡಬ ಘಟಕದ ಆಶ್ರಯದಲ್ಲಿ ಎರಡನೇ ಹಂತದ ‘ಗುರುಸ್ಫೂರ್ತಿ’ ಕಾರ್ಯಕ್ರಮವು ದಿನಾಂಕ 28-02-2026ರ ಶನಿವಾರದಂದು ಬಳ್ಪದ ತುಳಸಿ ನಾಗೇಶ್ ಪಡ್ಕಿಲಾಯ ಅವರ ನಿವಾಸದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು.

​ಬಳ್ಪ ಬಿಲ್ಲವ ಗ್ರಾಮ ಸಮಿತಿಯ ಅಧ್ಯಕ್ಷರಾದ ಚಿನ್ನಪ್ಪ ಪೂಜಾರಿ ಕೊರಪ್ಪಣೆ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಶಿಕ್ಷಕಿ ರೇಣುಕಾ ಕಣಿಯೂರು ಅವರು ಗುರುಗಳ ಜೀವನ ಸಂದೇಶ ಹಾಗೂ ತತ್ವಗಳ ಕುರಿತು ಸವಿಸ್ತಾರವಾಗಿ ಉಪನ್ಯಾಸ ನೀಡಿ, ಜಾಗೃತಿ ಮೂಡಿಸಿದರು.

​ಇದೇ ಸಂದರ್ಭದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಸೀತಾರಾಮ ಪೂಜಾರಿ ಪಡ್ಕಿಲಾಯ ಅವರನ್ನು ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಆತಿಥ್ಯ ವಹಿಸಿದ್ದ ತುಳಸಿ ನಾಗೇಶ್ ಪಡ್ಕಿಲಾಯ ದಂಪತಿಗಳನ್ನು ಗೌರವಿಸಿ, ಅತಿಥಿಗಳಿಗೆ ನೆನಪಿನ ಕಾಣಿಕೆ ನೀಡಲಾಯಿತು.
​ಘಟಕದ ಅಧ್ಯಕ್ಷರಾದ ಉಮೇಶ್ ಬಳ್ಪ ಅವರು ಅಧ್ಯಕ್ಷೀಯ ಭಾಷಣ ಮಾಡಿ, ಸಂಘಟನೆಯ ಮೂಲಕ ಸಮಾಜಮುಖಿ ಕಾರ್ಯಗಳ ಅಗತ್ಯತೆಯನ್ನು ತಿಳಿಸಿದರು. ಕಡಬ ಘಟಕದ ನಾರಾಯಣ ಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಜಯಪ್ರಕಾಶ್ ದೋಳ ಸ್ವಾಗತಿಸಿದರು. ಮಾಜಿ ಅಧ್ಯಕ್ಷ ಕೃಷ್ಣಪ್ಪ ಅಮೈ ಕಾರ್ಯಕ್ರಮ ನಿರೂಪಿಸಿದರು ನಿಕಟಪೂರ್ವ ಅಧ್ಯಕ್ಷ ಪ್ರಶಾಂತ್ ಎನ್.ಎಸ್. ಪ್ರಾರ್ಥಿಸಿದರು. ಕಾರ್ಯದರ್ಶಿ ಸತೀಶ್ ಬಳ್ಪ ವಂದನಾರ್ಪಣೆ ಮಾಡಿದರು.
​ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಪ್ರಚಾರ ನಿರ್ದೇಶಕ ಶಿವಪ್ರಸಾದ್ ನೂಚಿಲ, ಘಟಕದ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!