ಪುತ್ತೂರು: ಯುವವಾಹಿನಿ (ರಿ.) ಪುತ್ತೂರು ಘಟಕದ ವತಿಯಿಂದ ಭಾನುವಾರ, ದಿನಾಂಕ 08-03-2026 ರಂದು ಬಿರಮಲೆ ಪ್ರಜ್ಞಾ ಆಶ್ರಮದ ನಿವಾಸಿಗಳ ಸೌಕರ್ಯಕ್ಕಾಗಿ ಅಗತ್ಯವಿರುವ ಬಿಸಿ ನೀರಿನ ಗೀಸರ್ ಅನ್ನು ಕೊಡುಗೆಯಾಗಿ ನೀಡಲಾಯಿತು.

ಪುತ್ತೂರಿನ ಪ್ರಜ್ಞಾ ಆಶ್ರಮದಲ್ಲಿ ನಡೆದ ಸರಳ ಸಮಾರಂಭದಲ್ಲಿ ಘಟಕದ ವತಿಯಿಂದ ಈ ಉಪಕರಣವನ್ನು ಹಸ್ತಾಂತರಿಸಲಾಯಿತು.ಸಮಾಜದ ದೀನದಲಿತರ ಮತ್ತು ಅಶಕ್ತರ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ ಯುವವಾಹಿನಿ ಸಂಸ್ಥೆಯು, ಆಶ್ರಮದ ನಿವಾಸಿಗಳಿಗೆ ದೈನಂದಿನ ಬಳಕೆಗೆ ಅನುಕೂಲವಾಗುವಂತೆ ಈ ಗೀಸರ್ ಅನ್ನು ಅಳವಡಿಸಿಕೊಡುವ ಮೂಲಕ ಮಾನವೀಯತೆ ಮೆರೆದಿದೆ.ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ನಿರ್ದೇಶಕರುಗಳು, ಮಾಜಿ ಅಧ್ಯಕ್ಷರುಗಳು ಹಾಗೂ ಘಟಕದ ಸದಸ್ಯರು ಉಪಸ್ಥಿತರಿದ್ದರು.


