Yuvavahini

MAR 08, 2026 8.00 PM IST

ಯುವವಾಹಿನಿ (ರಿ.) ಪಡುಬಿದ್ರಿ ಘಟಕ

ಮಹಿಳಾ ದಿನಾಚರಣೆ ಹಾಗೂ ಸಂತೋಷ ಕೂಟ

ಪಡುಬಿದ್ರಿ : ದಿನಾಂಕ 08/03/2026 ರಂದು ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ಮಹಿಳಾ ದಿನಾಚರಣೆ ಹಾಗೂ ಸಂತೋಷ ಕೂಟವನ್ನು ಮುಲ್ಕಿಯ ಚೆನ್ನಯ ಕುದುರುದಲ್ಲಿರುವ ರಿವರ್ ಶೈನ್ ಕಯಾಕಿಂಗ್ ಮತ್ತು ಅಡ್ವೆಂಚರ್‌ನಲ್ಲಿ ಆಯೋಜಿಸಲಾಯಿತು.
ಗುರುಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ವಿಧಿತ್ ಪೂಜಾರಿ ಕರ್ನಿರೆ ವಹಿಸಿ ಎಲ್ಲರನ್ನು ಸ್ವಾಗತಿಸಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಮಾಜಿ ಅಧ್ಯಕ್ಷರಾದ ಉದಯ್ ಅಮೀನ್ ಮಟ್ಟು ಉಪಸ್ಥಿತರಿದ್ದರು. ಗೌರವ ಉಪಸ್ಥಿತಿಯಾಗಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಮಮತಾ ಅಂಚನ್, ಘಟಕದ ಕಾರ್ಯದರ್ಶಿ ಭಾಸ್ಕರ್ ಎನ್. ಅಂಚನ್, ಕೋಶಾಧಿಕಾರಿ ತುಳಸಿ ಕರುಣಾಕರ್, ಮಹಿಳಾ ನಿರ್ದೇಶಕರಾದ ಲತಾ ವಸಂತ್ ಹಾಗೂ ನಾರಾಯಣಗುರು ಮಹಿಳಾ ಮಂಡಳಿ ಪಡುಬಿದ್ರಿ ಇದರ ಅಧ್ಯಕ್ಷರಾದ ಸುಜಾತಾ ಹರೀಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಘಟಕದ ಮಾಜಿ ಅಧ್ಯಕ್ಷರು ಹಾಗೂ ನಿವೃತ್ತ ಮುಖ್ಯೋಪಾಧ್ಯಾಯಿನಿ ಚಿತ್ರಾಕ್ಷಿ ಕೆ. ಕೋಟ್ಯಾನ್ ಅವರು ಮಹಿಳಾ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿ, ಮಹಿಳೆಯರ ಸಾಧನೆಗಳನ್ನು ಸಮಾಜ ಗುರುತಿಸಬೇಕು ಹಾಗೂ ಮಹಿಳೆಯರಲ್ಲಿ ಮತ್ತಷ್ಟು ಆತ್ಮವಿಶ್ವಾಸ ಮತ್ತು ಸ್ಪೂರ್ತಿ ಮೂಡಿಸುವ ಕೆಲಸ ನಮ್ಮಿಂದಾಗಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೆ ಘಟಕದ ಸದಸ್ಯರಿಗಾಗಿ ವಿವಿಧ ಸ್ಪರ್ಧೆಗಳು ಆಯೋಜಿಸಲಾಯಿತು. ಕೆಲವು ಸದಸ್ಯರು ದೋಣಿ ವಿಹಾರ ಹಾಗೂ ಕಾಯಕಿಂಗ್‌ನಲ್ಲಿ ಉತ್ಸಾಹದಿಂದ ಭಾಗವಹಿಸಿದರು. ಆಹ್ಲಾದಕರವಾದ ಶಾಂಭವಿ ನದಿ ತೀರದ ರಮಣೀಯ ಸೌಂದರ್ಯವನ್ನು ಸವಿಯುತ್ತಾ ಮಧ್ಯಾಹ್ನ ಶುಚಿರುಚಿಯಾದ ಸಹಭೋಜನವನ್ನು ಸವಿದರು. ಮಧ್ಯೆ ಮಧ್ಯೆ ತಂಪು ಪಾನೀಯಗಳು ಸದಸ್ಯರ ಆಟ–ಪಾಟ ಮತ್ತು ಸ್ಪರ್ಧೆಗಳಿಗೆ ಮತ್ತಷ್ಟು ಚೈತನ್ಯ ತುಂಬಿದವು.
ಸ್ಪರ್ಧೆಗಳಲ್ಲಿ ವಿಜೇತರಾದ ಸದಸ್ಯರಿಗೆ ಸಮಾರೋಪ ಸಮಾರಂಭದಲ್ಲಿ ಬಹುಮಾನಗಳನ್ನು ವಿತರಿಸಲಾಯಿತು. ಕಾರ್ಯಕ್ರಮವನ್ನು ಹರೀಶ್ ಕೋಟ್ಯಾನ್ ಉಳ್ಳೂರು ಹಾಗೂ ರವಿರಾಜ್ ಎನ್. ಕೋಟ್ಯಾನ್ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!