Yuvavahini

MAR 12, 2026 1.07 PM IST

ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ, ಯುವವಾಹಿನಿ (ರಿ.) ಕೊಲ್ಯ ಘಟಕದ ಆತಿಥ್ಯದಲ್ಲಿ

ಮಂಗಳೂರು: ಮಾರ್ಚ್ 14 ರಂದು ಪುರಭವನದಲ್ಲಿ “ಸಖೀ ಸಂವಾದ – 2026” ಕಾರ್ಯಾಗಾರ

​ಮಂಗಳೂರು: ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ, ಯುವವಾಹಿನಿ (ರಿ.) ಕೊಲ್ಯ ಘಟಕದ ಆತಿಥ್ಯದಲ್ಲಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ “ಸಖೀ ಸಂವಾದ – 2026” ಸಂವಾದ ಕಾರ್ಯಾಗಾರವು ಮಾರ್ಚ್ 14 ರಂದು ಬೆಳಿಗ್ಗೆ 9:30ರಿಂದ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ.

ಉದ್ಘಾಟನೆ ಮತ್ತು ಅತಿಥಿಗಳು
​ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್. ವಿ. ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
​ಮುಖ್ಯ ಅತಿಥಿಗಳಾಗಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ. ಪಿ. ಎಲ್. ಧರ್ಮ, ದ.ಕ. ಅಪರ ಜಿಲ್ಲಾಧಿಕಾರಿ ರಾಜು ಕೆ., ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಡಿ.ಜಿ.ಎಂ. ತೇಜಸ್ವಿನಿ ವಿ. ಸಿ., ಎಸ್‌.ಬಿ.ಐ. ನಿವೃತ್ತ ಮ್ಯಾನೇಜರ್ ಸಂಧ್ಯಾ ಸೋಮೇಶ್ವರ ಹಾಗೂ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಟ್ರಸ್ಟೀ ಕೃತಿನ್ ಅಮೀನ್ ಭಾಗವಹಿಸಲಿದ್ದಾರೆ.

ಸಂವಾದ ಮತ್ತು ಸಂಪನ್ಮೂಲ ವ್ಯಕ್ತಿಗಳು
​ಮಹಿಳೆಯರ ಕಾನೂನು, ನ್ಯಾಯ, ಶಿಕ್ಷಣ ಮತ್ತು ಮಾನಸಿಕ ಆರೋಗ್ಯದ ಕುರಿತು ನಡೆಯುವ ಈ ಸಂವಾದದಲ್ಲಿ ಈ ಕೆಳಗಿನ ತಜ್ಞರು ವಿಷಯ ಮಂಡಿಸಲಿದ್ದಾರೆ:
​ಸ್ತ್ರೀ ನ್ಯಾಯ: ಗೀತಾ ಕುಲಕರ್ಣಿ (ಸಹಾಯಕ ಪೊಲೀಸ್ ಕಮಿಷನರ್, ಮಂಗಳೂರು).
​ಸ್ತ್ರೀ ಕಾನೂನು: ಮೇಘರಾಣಿ ಮೂಡಬಿದ್ರಿ (ವಕೀಲರು).
​ಸ್ತ್ರೀ ಶಿಕ್ಷಣ: ಡಾ. ಬಿ. ಕೆ. ಸರೋಜಿನಿ (ಪ್ರಾಧ್ಯಾಪಕರು, ಏನೆಪೋಯ ಪರಿಗಣಿತ ವಿಶ್ವವಿದ್ಯಾಲಯ).
​ಸ್ತ್ರೀ ಮನದ ಆರೋಗ್ಯ: ಡಾ. ರೇಷ್ಮಾ ಎನ್. ಎಸ್. (ಸಹಾಯಕ ಪ್ರಾಧ್ಯಾಪಕರು, ಮನೋವೈದ್ಯಕೀಯ ವಿಭಾಗ, ಕೆ.ಎಂ.ಸಿ.).

ಸಮಾರೋಪ ಸಮಾರಂಭ
​ಅಪರಾಹ್ನ 12:30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಯುವವಾಹಿನಿ ಕೊಲ್ಯ ಘಟಕದ ಅಧ್ಯಕ್ಷ ನಿತಿನ್ ಕರ್ಕೇರಾ ಅಧ್ಯಕ್ಷತೆ ವಹಿಸಲಿದ್ದಾರೆ. ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ, ನಮ್ಮ ಕುಡ್ಲ ನ್ಯೂಸ್ ಚಾನಲ್ ಆಡಳಿತ ನಿರ್ದೇಶಕ ಲೀಲಾಕ್ಷ ಕರ್ಕೇರ, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಅನಿಲ್ ಕುಮಾರ್ ಹಾಗೂ ಉದ್ಯಮಿ ರಸಿಕಾ ಮೋಹನ್ ದಾಸ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು.

​ಈ ಕಾರ್ಯಾಗಾರದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಪದವಿ ವಿದ್ಯಾರ್ಥಿನಿಯರು ಹಾಗೂ ವಿವಿಧ ಮಹಿಳಾ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!