Yuvavahini

MAR 08, 2026 2.00 PM IST

ಯುವವಾಹಿನಿ (ರಿ.) ಬಜಪೆ ಘಟಕದ

12ನೇ ವರ್ಷದ ಪದಗ್ರಹಣ ಸಮಾರಂಭ

ಬಜಪೆ : ಯುವವಾಹಿನಿ (ರಿ.) ಬಜಪೆ ಘಟಕದ 12ನೇ ವರ್ಷದ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ಮಾರ್ಚ್ 8, 2026 ರಂದು ಬಜಪೆಯ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ನಡೆಯಿತು

ಕಾರ್ಯಕ್ರಮವು ಬ್ರಹ್ಮಶ್ರೀ ನಾರಾಯಣಗುರುಗಳ ಪೂಜೆಯೊಂದಿಗೆ ಆರಂಭಗೊಂಡು . ಘಟಕದ 11ನೇ ವರ್ಷದ ಸವಿ ನೆನಪಿಗಾಗಿ ಸಭಾಭವನಕ್ಕೆ ಕೊಡುಗೆಯಾಗಿ ನೀಡಲಾದ ಶುದ್ಧ ಬಿಸಿ ಮತ್ತು ತಂಪು ನೀರಿನ ಘಟಕವನ್ನು ಎಲ್.ವಿ. ಅಮೀನ್ ಉದ್ಘಾಟಿಸಿದರು.
ಸಭಾ ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭಗೊಂಡು, ಕಾರ್ಯದರ್ಶಿ ಶರ್ಮಿಳಾ ಚಂದ್ರಶೇಖರ್ ಅವರು ಘಟಕದ ಕಳೆದ ಒಂದು ವರ್ಷದ ಸಮಾಜಮುಖಿ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಸಮಗ್ರ ವರದಿಯನ್ನು ಮಂಡಿಸಿದರು.

ಕಾರ್ಯಕ್ರಮವನ್ನು ರವೀಂದ್ರ ಕೆಂಜಾರ್ ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಯಾದ ಡಾ. ಶೇಷಪ್ಪ ಅಮೀನ್ ಅವರು ಮಾತನಾಡಿ, ಘಟಕದ 11 ವರ್ಷಗಳ ಸೇವಾ ಪಯಣವನ್ನು ಶ್ಲಾಘಿಸಿ ಯುವಜನರ ಸಮಾಜಮುಖಿ ಚಟುವಟಿಕೆಗಳ ಅಗತ್ಯತೆಯನ್ನು ಒತ್ತಿಹೇಳಿದರು.
ಈ ಸಂದರ್ಭದಲ್ಲಿ ಆರೋಗ್ಯ ಸಹಾಯ ನಿಧಿಯನ್ನು ಲಲಿತಾ ಪೂಜಾರ್ತಿ ಹಾಗೂ ಪರಮಾನಂದ ಸಾಲ್ಯಾನ್ ಅವರಿಗೆ ವಿತರಿಸಲಾಯಿತು. ಜೊತೆಗೆ ಯುವವಾಹಿನಿ ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಅವರನ್ನು ಸನ್ಮಾನಿಸಲಾಯಿತು.
ಪದಗ್ರಹಣ ಸಮಾರಂಭದಲ್ಲಿ ಆಯ್ಕೆ ಸಮಿತಿಯ ಸಂಚಾಲಕರಾದ ನಿರಂಜನ್ ಪೂಜಾರಿ ನೂತನ ಕಾರ್ಯಕಾರಿ ಸಮಿತಿ ಸದಸ್ಯರನ್ನು ಸಭೆಗೆ ಪರಿಚಯಿಸಿದರು

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಅವರು ನೂತನ ಕಾರ್ಯಕಾರಿ ಸಮಿತಿ ಸದಸ್ಯರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ರೋಹಿತ್ ಪೂಜಾರಿ ಅವರು ಘಟಕದ ನೂತನ ಅಧ್ಯಕ್ಷರಾಗಿ ಹಾಗೂ ಸುಚಿತಾ ದೇವರಾಜ್ ಅವರು ಕಾರ್ಯದರ್ಶಿಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಅಶೋಕ್ ಕುಮಾರ್ ಪಡ್ಪು ಅವರು ನೂತನ ತಂಡಕ್ಕೆ ಶುಭ ಹಾರೈಸಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವಂತೆ ಕರೆ ನೀಡಿದರು. ಎಲ್.ವಿ. ಅಮೀನ್ ಅವರು ಘಟಕದ ಸಮಾಜಮುಖಿ ಕಾರ್ಯಗಳನ್ನು ಮೆಚ್ಚಿದರು.
ಈ ಸಂದರ್ಭದಲ್ಲಿ ಘಟಕದ ಸಾಧನೆಗೆ ಯುವವಾಹಿನಿ ಕೇಂದ್ರ ಸಮಿತಿಯಿಂದ ದೊರೆತ “ಅತ್ಯುತ್ತಮ ಕ್ರಿಯಾಶೀಲ ಘಟಕ ಪ್ರಶಸ್ತಿ”ಯನ್ನು ವಿಶೇಷವಾಗಿ ಪ್ರಸ್ತಾಪಿಸಲಾಯಿತು. ಡಾ. ಅಪೂರ್ವ ಪೊರ್ಕೋಡಿ ಅವರನ್ನು ಪಿಎಚ್‌ಡಿ ಸಾಧನೆಗಾಗಿ ಸನ್ಮಾನಿಸಲಾಯಿತು.


ನೂತನ ಅಧ್ಯಕ್ಷ ರೋಹಿತ್ ಪೂಜಾರಿ ಅವರು ಎಲ್ಲರ ಸಹಕಾರ ಕೋರಿದರು. ಅಧ್ಯಕ್ಷೆಯಾಗಿದ್ದ ರೇಣುಕಾ ಶೇಖರ್ ಅವರು ತಮ್ಮ ಅವಧಿಯ ಸಾಧನೆಗಳನ್ನು ಸ್ಮರಿಸಿ ತಂಡದ ಪರಿಶ್ರಮವನ್ನು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರು, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಮಕ್ಕಳು ಹಾಗೂ ಘಟಕದ ಸದಸ್ಯರನ್ನು ಗೌರವಿಸಲಾಯಿತು. ಸುಚಿತಾ ದೇವರಾಜ್ ಧನ್ಯವಾದ ಸಮರ್ಪಿಸಿದರು. ಸಂಧ್ಯಾ ಕುಳಾಯಿ ಮತ್ತು ಸಾನ್ವಿ ಕಾರ್ಯಕ್ರಮವನ್ನು ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026 ಎಪ್ರಿಲ್ 19
ಸ್ಥಳ : ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ

ದಿನಾಂಕ : 2026 ಎಪ್ರಿಲ್ 19
ಸ್ಥಳ : ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಡೆನ್ನಾನ ಡೆನ್ನನ 2026

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!