Yuvavahini

MAR 17, 2026 9.00 PM IST

ಯುವವಾಹಿನಿ (ರಿ) ಹೆಜಮಾಡಿ ಘಟಕದಿಂದ ಸ್ತ್ರೀ ಸ್ಪೂರ್ತಿ 2026

ಮಹಿಳೆಯರು ಸವಾಲುಗಳನ್ನು ಧೈರ್ಯದಿಂದ ಎದುರಿಸಬೇಕು: ಶ್ವೇತಾ ಪಳ್ಳಿ

ಹೆಜಮಾಡಿ: ಯುವವಾಹಿನಿ (ರಿ.) ಹೆಜಮಾಡಿ ಘಟಕದ ಆಶ್ರಯದಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ “ಸ್ತ್ರೀ ಸ್ಪೂರ್ತಿ–2026” ಕಾರ್ಯಕ್ರಮವು ಮಾರ್ಚ್ 17 ರಂದು ಹೆಜಮಾಡಿ ಬಿಲ್ಲವರ ಸಂಘದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ವೇತ ಪಳ್ಳಿ ಮಾತನಾಡಿ, “ಮಹಿಳೆಯರು ಜೀವನದ ಸವಾಲುಗಳನ್ನು ಧೈರ್ಯದಿಂದ ಎದುರಿಸಿ ಸಮಾಜದಲ್ಲಿ ತಮ್ಮದೇ ಆದ ಸ್ಥಾನವನ್ನು ನಿರ್ಮಿಸಿಕೊಳ್ಳಬೇಕು. ಅದಕ್ಕಾಗಿ ದೃಢ ಮನೋಬಲ ಅತ್ಯಂತ ಅಗತ್ಯ” ಎಂದು ಅಭಿಪ್ರಾಯಪಟ್ಟರು. “ನನ್ನ ಸಾಧನೆಗೆ ಯುವವಾಹಿನಿಯೇ ಸ್ಪೂರ್ತಿ. ಯುವಜನತೆ ಇಂತಹ ಕಾರ್ಯಕ್ರಮಗಳಲ್ಲಿ ಹೆಚ್ಚು ಸಕ್ರಿಯವಾಗಿ ಭಾಗವಹಿಸಬೇಕು” ಎಂದೂ ಅವರು ತಿಳಿಸಿದರು.


ಕಾರ್ಯಕ್ರಮವು ಹೆಜಮಾಡಿ ಬಿಲ್ಲವರ ಸಂಘದ ಸಹಯೋಗದಲ್ಲಿ ಯುವವಾಹಿನಿ (ರಿ.) ಹೆಜಮಾಡಿ ಘಟಕ, ಮಹಿಳಾ ಮಂಡಳಿ ಬಿಲ್ಲವರ ಸಂಘ ಹಾಗೂ ಬಿರುವೆರ್ ಬ್ರದರ್ಸ್ ಹೆಜಮಾಡಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಲ್ಲವರ ಸಂಘದ ಅಧ್ಯಕ್ಷರಾದ ಮೋಹನ್ ದಾಸ್ ಹೆಜಮಾಡಿ ವಹಿಸಿದ್ದರು. ವೇದಿಕೆಯಲ್ಲಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮುಕ್ತೇಸರರಾದ ದಯಾನಂದ ಹೆಜಮಾಡಿ, ಯುವವಾಹಿನಿ ಕೇಂದ್ರ ಸಮಿತಿಯ ದ್ವಿತೀಯ ಉಪಾಧ್ಯಕ್ಷರಾದ ಸುರೇಶ್ ಪೂಜಾರಿ, ಘಟಕದ ಅಧ್ಯಕ್ಷರಾದ ನಿಶಾಂಕ್ ಎಸ್. ಕೋಟ್ಯಾನ್, ಮಹಿಳಾ ಮಂಡಳಿ ಅಧ್ಯಕ್ಷರಾದ ಲಾವಣ್ಯ ಪ್ರಬೋಧ್ ಚಂದ್ರ ಹಾಗೂ ಬಿರುವೆರ್ ಬ್ರದರ್ಸ್ ಅಧ್ಯಕ್ಷರಾದ ಮನೋಜ್ ಸುವರ್ಣ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಧನಲಕ್ಷ್ಮಿ ಪೂಜಾರಿ ಅವರಿಗೆ “ಸ್ತ್ರೀ ಸ್ಪೂರ್ತಿ” ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಜೊತೆಗೆ ಬಿಲ್ಲವರ ಸಂಘದ ನಾಲ್ಕು ಕರೆಯ ನಾಲ್ವರು ಹಿರಿಯ ಮಹಿಳೆಯರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ನಳಿನಿ ಉಷಾನಂದ ಅವರು ಪ್ರಸ್ತಾವನೆ ಮಾಡಿದರು. ಲಾವಣ್ಯ ಪ್ರಬೋಧ್ ಚಂದ್ರ ಸ್ವಾಗತಿಸಿದರು. ಧೀರಜ್ ಕಾರ್ಯಕ್ರಮವನ್ನು ನಿರೂಪಿಸಿದರು. ಪ್ರಾಪ್ತಿ ಆರ್. ಸುವರ್ಣ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026 ಎಪ್ರಿಲ್ 19
ಸ್ಥಳ : ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ

ದಿನಾಂಕ : 2026 ಎಪ್ರಿಲ್ 19
ಸ್ಥಳ : ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಡೆನ್ನಾನ ಡೆನ್ನನ 2026

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!