ಕೊಣಾಜೆ: ಯುವವಾಹಿನಿ (ರಿ.) ಗ್ರಾಮ ಚಾವಡಿ ಕೊಣಾಜೆ ಘಟಕದ ಆಶ್ರಯದಲ್ಲಿ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಇದರ ಸಹಯೋಗದಲ್ಲಿ ದಿನಾಂಕ 17-03-2026 ರಂದು ವಿಶ್ವ ಮಹಿಳಾ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಬಾಬು ಬಂಗೇರ ವಹಿಸಿಕೊಂಡಿದ್ದು, ಕೊಣಾಜೆ ಬ್ರಹ್ಮಶ್ರೀ ನಾರಾಯಣಗುರು ಸಂಘದ ಅಧ್ಯಕ್ಷರಾದ ವಿಜೇತ್ ಪಜೀರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಯುವವಾಹಿನಿ ಕೇಂದ್ರ ಸಮಿತಿ (ರಿ.) ಮಂಗಳೂರು ಇದರ ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ವೇದಿಕೆಯಲ್ಲಿ ಘಟಕದ ಕಾರ್ಯದರ್ಶಿ ಮಿಥುನ್ ಪಜೀರು, ಕೋಶಾಧಿಕಾರಿ ಅಜಿತ್ ತಾರೀಪಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು
ಈ ಸಂದರ್ಭದಲ್ಲಿ ಓಂ ಶ್ರೀ ಗಣೇಶ ಯುವಕ ಮಂಡಲ ಪಾನೇಲದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಉತ್ತಮವಾಗಿ ನಾಟಕ ಪ್ರದರ್ಶನ ನೀಡಿದ ಘಟಕದ ಸದಸ್ಯರನ್ನು ಅಭಿನಂದಿಸಲಾಯಿತು. ಮಹಿಳಾ ಸದಸ್ಯರಿಗಾಗಿ ವಿವಿಧ ಮನರಂಜನಾ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಅಮೂಲ್ಯ ಪ್ರಾರ್ಥಿಸಿದರು, ಮಹಿಳಾ ಸಂಘಟನಾ ನಿರ್ದೇಶಕಿ ರೇಖಾ ಬೊಳ್ಳೂರು ಸ್ವಾಗತಿಸಿದರು, ಉಪಾಧ್ಯಕ್ಷ ಅಜಿತ್ ಪಜೀರು ಕಾರ್ಯಕ್ರಮ ನಿರ್ವಹಣೆ ಮಾಡಿದರು
ಘಟಕದ ಕಾರ್ಯದರ್ಶಿ ಮಿಥುನ್ ಪಜೀರು ಧನ್ಯವಾದ ನೀಡಿದರು


