Yuvavahini

MAR 18, 2026 8.00 PM IST

ಯುವವಾಹಿನಿ ಕೂಳೂರು ಘಟಕದ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ

ಶಿಕ್ಷಣ, ವಿಜ್ಞಾನ, ಕ್ರೀಡೆ, ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರ ಸಾಧನೆ -ಅಗಣ್ಯ

ಕುಳೂರು : ಮಹಿಳೆಯರು ಕೇವಲ ಸಾಂಸಾರಿಕ ಜೀವನದಲ್ಲಿ ಮಾತ್ರ ಸೀಮಿತವಾಗದೆ ಅಸೀಮಿತ ವಲಯದಲ್ಲಿ ಸಾಧನೆಗೆ ಹುಮ್ಮಸ್ಸು ತೋರಬೇಕು ,ಕನಸು ಕಟ್ಟಿ ಧೈರ್ಯದಿಂದ ನಿಮ್ಮ ಕ್ಷೇತ್ರದಲ್ಲಿ ಮುನ್ನುಗ್ಗಿದ್ದರೆ ಸಮಾಜ ತಾನಾಗೇ ಗುರುತಿಸಲಿದೆ ಎಂದು ಪಣಂಬೂರು ಪೊಲೀಸ್ ಠಾಣೆಯ ಪೊಲೀಸ್ ಉಪ ಪರಿಶೋಧಕರಾದ ಶ್ರೀಕಲಾ ಕೆ.ಟಿ ತಿಳಿಸಿದರು.

ಅವರು ಯುವವಾಹಿನಿ ಕೂಳೂರು ಘಟಕದ ಆಶ್ರಯದಲ್ಲಿ ಮಾರ್ಚ್ 18 ರಂದು ಕೂಳೂರಿನ ಫಲ್ಗುಣಿ ಸಭಾಂಗಣದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು. ಹೆಣ್ಣು ಮಕ್ಕಳನ್ನು ಬಹಳ ಸೂಕ್ಷ್ಮವಾಗಿ ನೋಡಿಕೊಳ್ಳಬೇಕು. ಪೋಷಕರು ಹೆಣ್ಣುಮಕ್ಕಳ ಬಗ್ಗೆ ಅತ್ಯಂತ ಜಾಗರೂಕತೆ ವಹಿಸಿಕೊಳ್ಳಬೇಕು. ಪ್ರಸ್ತುತ ಕಾಲಘಟ್ಟದ ಗಂಭೀರ ಸಮಸ್ಯೆಗಳಾದ ಸಾಮಾಜಿಕ ಜಾಲತಾಣದಿಂದ ಉಂಟಾಗುವ ವಿಲೋಮ ಪರಿಸ್ಥಿತಿ, ಅಮಲು ಪದಾರ್ಥ ಸೇವನೆ ಮುಕ್ತ ಸಮಾಜ ನಿರ್ಮಾಣಕ್ಕೆ ಮಹಿಳೆಯರು ದಿಟ್ಟ ಹೆಜ್ಜೆ ಇಡುವಲ್ಲಿ ಸಂಕಲ್ಪ ತೊಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಗೀತಾ ವಸಂತ ವಹಿಸಿದ್ದರು.
ಮುಖ್ಯ ಅತಿಥಿಯಾದ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಮಹಿಳಾ ಸಂಘಟನಾ ನಿರ್ದೇಶಕರಾದ ಸುಧಾ ಸುರೇಶ್ ರವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕೇವಲ ಒಂದು ದಿನದ ಆಚರಣೆಗೆ ಸೀಮಿತವಾಗಬಾರದು, 20ನೇ ಶತಮಾನದಿಂದ ಆಚರಿಸಲು ಪ್ರಾರಂಭವಾದ ಮಾರ್ಚ್ 8 ರ ವಿಶ್ವ ಮಹಿಳಾ ದಿನ ಪ್ರತಿಯೊಬ್ಬ ಮಹಿಳೆಯರು ಪ್ರತಿದಿನ ಹೆಮ್ಮೆಯಿಂದ ಆಚರಿಸಬೇಕು ಎಂದರು.ಮುಂದುವರಿದು ಮಾತನಾಡಿ ನಮ್ಮ ಸಮಾಜದ ಮಕ್ಕಳನ್ನು ನಾಗರಿಕ ಸೇವೆ IAS IPS ಮಾಡಿಸಬೇಕು ಇದಕ್ಕಾಗಿ ಪ್ರೌಢಶಾಲೆಯಲ್ಲಿ ಅವರಿಗೆ ತರಬೇತಿ ನೀಡಿ ತಿಳುವಳಿಕೆ ಒದಗಿಸಬೇಕು -ಇದು ತನ್ನ ಕನಸಿನ ಕೂಸು ಎಂದು ನುಡಿದರು.

ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್ ,ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರುಗಳು ,ಕಾರ್ಯಕ್ರಮದಲ್ಲಿ ಮಾತೃ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.
ಯುವವಾಹಿನಿ ಕೂಳೂರು ಘಟಕದ ಕಾರ್ಯದರ್ಶಿ ವಂದಿಪ್.ಕೆ. ಸುವರ್ಣ, ಸಂಚಾಲಕರಾದ ಶೋಭಾ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ಘಟಕದ ಸದಸ್ಯರಾದ ದೇವಿ ಪ್ರಸಾದ್ ರವರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಮಹಿಳಾ ದಿನಾಚರಣೆ ಅಂಗವಾಗಿ ಏರ್ಪಡಿಸಲಾದ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದ ನಿರೂಪಣೆಯನ್ನು ಮಾಜಿ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ನಿರ್ವಹಿಸಿದರು. ಸಂಚಾಲಕರಾದ ಶೋಭಾ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026 ಎಪ್ರಿಲ್ 19
ಸ್ಥಳ : ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ

ದಿನಾಂಕ : 2026 ಎಪ್ರಿಲ್ 19
ಸ್ಥಳ : ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಡೆನ್ನಾನ ಡೆನ್ನನ 2026

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!