ಮೂಲ್ಕಿ: ಯುವವಾಹಿನಿ (ರಿ) ಮೂಲ್ಕಿ ಘಟಕದ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮವು ದಿನಾಂಕ 22/03/2026 ರಂದು ಸಂಜೆ 3:00 ಗಂಟೆಗೆ ಅತಿಕಾರಿ ಬೆಟ್ಟು ಗ್ರಾಮದ ಕಕ್ವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮವು ಶಾಂಭವಿ ಮಹಿಳಾ ಮಂಡಳಿ ಮಟ್ಟು ಹಾಗೂ ಬ್ರಾಮರಿ ಮಹಿಳಾ ಮಂಡಳಿ ಕಕ್ವ ಸದಸ್ಯರ ಸಹಭಾಗಿತ್ವದಲ್ಲಿ ವಿನಯ ಕುಮಾರ್ ಮಟ್ಟು ಅವರ ಅಧ್ಯಕ್ಷತೆಯಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಕಕ್ವ ಶಾಲೆಯ ಮುಖ್ಯೋಪಾಧ್ಯಾಯಿನಿ ನಿರ್ಮಲಾ ನಾರಾಯಣ ನಾಯ್ಕ ಅವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ರಾಜೀವ ಪೂಜಾರಿ, ಶಾಂಭವಿ ಮಹಿಳಾ ಮಂಡಳಿ ಅಧ್ಯಕ್ಷೆ ಸವಿತಾ, ಬ್ರಾಮರಿ ಮಹಿಳಾ ಮಂಡಳಿ ಅಧ್ಯಕ್ಷೆ ಗೀತಾ ಲೋಹಿತ್, ಮಹಿಳಾ ಸಂಘಟನಾ ನಿರ್ದೇಶಕಿ ಸವಿತಾ ಪ್ರಭಾಕರ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ಮಹಿಳಾ ಮಂಡಳಿ ಸದಸ್ಯರಿಗೆ ವಿವಿಧ ಸ್ಪರ್ಧೆಗಳು ಆಯೋಜಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿನಯ ಕುಮಾರ್ ಸ್ವಾಗತಿಸಿದರು. ಕಾರ್ಯದರ್ಶಿ ಪ್ರೇರಣಾ ಧನ್ಯವಾದ ಅರ್ಪಿಸಿದರು. ಜಾಹ್ನವಿ ಮೋಹನ್ ಕಾರ್ಯಕ್ರಮ ನಿರೂಪಿಸಿದರು.


