Yuvavahini

MAR 22, 2026 9.00 PM IST

ಯುವವಾಹಿನಿ (ರಿ.) ಉಡುಪಿ ಘಟಕದ ಪದಗ್ರಹಣ ಸಮಾರಂಭ

ಉಡುಪಿ, ಮಾ.22: ಯುವವಾಹಿನಿ (ರಿ.) ಉಡುಪಿ ಘಟಕದ ಪದಗ್ರಹಣ ಸಮಾರಂಭವು ಮಾರ್ಚ್ 22, 2026ರಂದು ಉಡುಪಿ ಘಟಕದ ಸಭಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮವು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ನಮಸ್ಕರಿಸಿ ದೀಪ ಪ್ರಜ್ವಲಿಸುವ ಮೂಲಕ ಪ್ರಾರಂಭವಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ದಯಾನಂದ ಕರ್ಕೇರ ವಹಿಸಿದ್ದರು. ಕಾರ್ಯದರ್ಶಿ ಮಹೇಶ್ ಮಲ್ಪೆ ರಜತ ವರ್ಷದ ವರದಿಯನ್ನು ವಾಚಿಸಿದರು. ಆಯ್ಕೆ ಸಮಿತಿಯ ಸಂಚಾಲಕರು, ನಿಕಟಪೂರ್ವ ಅಧ್ಯಕ್ಷೆ ಅಮಿತಾಂಜಲಿ ಕಿರಣ್ ನೂತನ ಕಾರ್ಯಕಾರಿ ಸಮಿತಿಯನ್ನು ಪರಿಚಯವನ್ನು ಸಭೆಯ ಮುಂದೆ ಪ್ರಸ್ತುತಪಡಿಸಿದರು. ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ನೂತನ ಕಾರ್ಯಕಾರಿ ಸಮಿತಿಗೆ ಪ್ರತಿಜ್ಞಾ ವಿಧಿ ಬೋಧಿಸಿ, ಉಡುಪಿ ಘಟಕವು ಮಾದರಿ ಘಟಕವಾಗಿ ರಜತ ಸಂಭ್ರಮವನ್ನು ಯಶಸ್ವಿಯಾಗಿ ಆಚರಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ನೂತನ ತಂಡಕ್ಕೆ ಶುಭ ಹಾರೈಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಡಾ. ಸಂಜಿತ್ ಎಸ್ ಅಂಚನ್, ಸಹಾಯಕ ಪ್ರಾಧ್ಯಾಪಕರು, ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್, ಮೈಸೂರು, ಸಭೆಯನ್ನುದ್ದೇಶಿಸಿ ಮಾತನಾಡಿ ತಾನೂ ಯುವವಾಹಿನಿಯ ಸದಸ್ಯನಾಗಿದ್ದು ಯುವಕರಿಗೆ ಸ್ಪೂರ್ತಿದಾಯಕ ಸಂದೇಶ ನೀಡಿದರು ಹಾಗೂ ಸಮಾಜಕ್ಕೆ ತಮ್ಮಿಂದಾಗುವ ಸಹಕಾರವನ್ನು ಸೂಚಿಸಿದರು.

ಮುಖ್ಯ ಅತಿಥಿಗಳಾಗಿ ಯೋಗಿಶ್ ಕೋಟ್ಯಾನ್, ಅಧ್ಯಕ್ಷರು, ಬಿಲ್ಲವ ಮಹಾಜನ ಸಂಘ ಉದ್ಯಾವರ ಹಾಗೂ ಶಿವರಾಮ್ ಜಿ ಅಮೀನ್, ಸಂಘಟನಾ ಕಾರ್ಯದರ್ಶಿ, ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಉಪಸ್ಥಿತರಿದ್ದು ಯುವವಾಹಿನಿಯ ಸಮಾಜಮುಖಿ ಚಟುವಟಿಕೆಗಳನ್ನು ಶ್ಲಾಘಿಸಿ ನೂತನ ತಂಡಕ್ಕೆ ಶುಭಾಶಯ ಕೋರಿದರು.

ನೂತನ ಅಧ್ಯಕ್ಷ ವಿನೋದ್ ಮಂಚಿ ಮಾತನಾಡಿ ಯುವವಾಹಿನಿಯ ಮುನ್ನಡೆಗೆ ಎಲ್ಲರ ಸಹಕಾರ ಕೋರಿದರು. ವೇದಿಕೆಯಲ್ಲಿ ರಜತ ಸಂಭ್ರಮದ ಸಂಚಾಲಕ ರಘುನಾಥ ಮಾಬಿಯನ್, ಗೌರವ ಸಲಹೆಗಾರ ಶಂಕರ್ ಪೂಜಾರಿ (ದ್ವಾರಕ) ಹಾಗೂ ಕಾರ್ಯದರ್ಶಿ ಮಹೇಶ್ ಮಲ್ಪೆ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನಿರ್ಗಮನ ಅಧ್ಯಕ್ಷ ದಯಾನಂದ ಕರ್ಕೇರ, ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಹಾಗೂ ರಜತ ಸಂಭ್ರಮದ ಸಂಚಾಲಕ ರಘುನಾಥ ಮಾಬಿಯನ್ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳನ್ನು ಘಟಕದ ವತಿಯಿಂದ ಗೌರವಿಸಲಾಯಿತು. ನಿರ್ಗಮನ ಅಧ್ಯಕ್ಷ ದಯಾನಂದ ಕರ್ಕೇರ ಕೃತಜ್ಞತೆ ಸಲ್ಲಿಸಿದರು. ನೂತನ ಕಾರ್ಯದರ್ಶಿ ವೀಕ್ಷಿತ್ ಕೆಮ್ತೂರು ಧನ್ಯವಾದ ವಂದಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷರು, ಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ತೇಜೇಶ್ ಬಂಗೇರ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!