Yuvavahini

MAR 27, 2026 9.30 AM IST

ಯುವವಾಹಿನಿ ಡೆನ್ನಾನ ಡೆನ್ನನ 2026 – ಟೈಟಲ್ ಸಾಂಗ್ ಬಿಡುಗಡೆ

ಪೊಳಲಿ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19 ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿರುವ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ “ಡೆನ್ನಾನ ಡೆನ್ನನ 2026”ರ ಟೈಟಲ್ ಸಾಂಗ್‌ನ್ನು ಮಾರ್ಚ್ 27ರಂದು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.
ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕ ಅವರು ಈ ಟೈಟಲ್ ಸಾಂಗ್ ಬಿಡುಗಡೆಗೊಳಿಸಿ ಮಾತನಾಡಿ, “ಯುವವಾಹಿನಿಯ ಡೆನ್ನಾನ ಕಾರ್ಯಕ್ರಮ ಅದ್ಭುತ ಯಶಸ್ಸು ಸಾಧಿಸಲಿದೆ. ಸದಸ್ಯರ ಅವಿರತ ಶ್ರಮಕ್ಕೆ ತಕ್ಕ ಫಲ ದೊರೆಯಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಯುವವಾಹಿನಿಯ 35 ಘಟಕಗಳಲ್ಲಿ ಪ್ರತಿಷ್ಠಿತ ಘಟಕವಾಗಿ ಗುರುತಿಸಿಕೊಂಡಿರುವ ಬಂಟ್ವಾಳ ಘಟಕವು ಸೃಜನಶೀಲತೆ, ಕ್ರಿಯಾಶೀಲತೆ ಹಾಗೂ ಹೊಸತನದಲ್ಲಿ ಎಲ್ಲರಿಗೂ ಮಾದರಿಯಾಗಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಶ್ಲಾಘಿಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾದ ನಾಗೇಶ್ ಪೂಜಾರಿ ನೈಬೇಲು ವಹಿಸಿದ್ದರು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಹಾಗೂ ಡೆನ್ನಾನ ಸಂಚಾಲಕರಾದ ಶ್ರೀನಿವಾಸ ಪೂಜಾರಿ ಮೆಲ್ಕಾರ್, ರಕ್ತೇಶ್ವರೀ ದೇವಿ ದೇವಸ್ಥಾನದ ಟ್ರಸ್ಟೀ ವಿಶ್ವಾನಾಥ ಬಿ, ಬಂಟ್ವಾಳ ಉಪ ತಹಶಿಲ್ದಾರರಾದ ನವೀನ್ ಕುಮಾರ್, ವಕೀಲರು ಚಿದಾನಂದ ಕಡೇಶಿವಾಲಯ, ತುಂಬೆ ಬಿಲ್ಲವ ಸಂಘದ ಅಧ್ಯಕ್ಷರಾದ ಗಣೇಶ್ ಸುವರ್ಣ ತುಂಬೆ, ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಸುರೇಶ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್, ಜತೆ ಕಾರ್ಯದರ್ಶಿ ಹರೀಶ್ ಕೋಟ್ಯಾನ್ ಕುದನೆ, ಸಾಂಸ್ಕೃತಿಕ ನಿರ್ದೇಶಕರಾದ ದಿನೇಶ್ ಸುವರ್ಣ ರಾಯಿ, ಪ್ರಚಾರ ನಿರ್ದೇಶಕ ಶಿವಪ್ರಸಾದ್ ನೂಚಿಲ, ಸಾಮಾಜಿಕ ಜಾಲತಾಣ ಸಂಪಾದಕ‌ ಮಂಡಳಿ ಸದಸ್ಯರಾದ ಭವಾನಿ ಕೆ, ಸಂಘಟನಾ ಕಾರ್ಯದರ್ಶಿ ನಾಗೇಶ್ ಪೂಜಾರಿ ಮಾಣಿ, ನಿರಂಜನ್ ಬಜಪೆ ನಾಮ ನಿರ್ದೇಶನ ಸದಸ್ಯರಾದ ನವೀನ್ ಕಾರಾಜೆ, ಬಂಟ್ವಾಳ ಘಟಕದ ಕಾರ್ಯದರ್ಶಿ ಮಧುಸೂದನ್ ಮದ್ವ, ಜೊತೆ ಕಾರ್ಯದರ್ಶಿ ಲೋಹಿತ್ ಕನಪಾದೆ, ಉಪಾಧ್ಯಕ್ಷರಾದ ನಿಕೇಶ್ ಕೋಟ್ಯಾನ್, ಸಾಂಸ್ಕೃತಿಕ ನಿರ್ದೇಶಕರಾದ ಶೈಲೇಶ್ ಕುಚ್ಚಿಗುಡ್ಡೆ, ಡೆನ್ನಾನ ಸಹ ಸಂಚಾಲಕರಾದ ಸತೀಶ್ ಬಾಯಿಲ, ಉದಯ ಮೇನಾಡು, ಮಲ್ಲಿಕಾ ಪಚ್ಚಿನಡ್ಕ, ಸತೀಶ್ ಪೂಜಾರಿ ಕೊಪ್ಪರಿಗೆ ಮಾಜಿ ಅಧ್ಯಕ್ಷರಾದ ಬಿ ಶ್ರೀಧರ್ ಅಮೀನ್ ಹಾಗೂ ಸದಸ್ಯರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!