ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕ, ಕಂಪಾನಿಯೋ ಶ್ರೀದೇವಿ ವೆಲ್ನೆಸ್ ಸೆಂಟರ್, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಹಾಗೂ ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ) ಕೊಲ್ಯ, ಸೋಮೇಶ್ವರ ಇವರ ಸಹಕಾರದೊಂದಿಗೆ 15 ದಿನಗಳ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಉದ್ಘಾಟನಾ ಸಮಾರಂಭವು ಕೊಲ್ಯದ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ನೆರವೇರಿತು.
ಬಿಲ್ಲವ ಸೇವಾ ಸಮಾಜ (ರಿ) ಕೊಲ್ಯ ಇದರ ಅಧ್ಯಕ್ಷರಾದ ಗೋಪಾಲ್ ಕೊಂಡಾಣ ಅವರು ಉದ್ಘಾಟಿಸಿ, ಇಂತಹ ಉಚಿತ ಆರೋಗ್ಯ ಶಿಬಿರಗಳ ಸದುಪಯೋಗವನ್ನು ಸಾರ್ವಜನಿಕರು ಪಡೆಯಬೇಕೆಂದು ಕರೆ ನೀಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ) ಕೊಲ್ಯ ಇದರ ಅಧ್ಯಕ್ಷರಾದ ವೇಣುಗೋಪಾಲ ಕೊಲ್ಯ ಅವರು, “ಆರೋಗ್ಯವೇ ಜೀವನದ ಮೂಲ ಆಧಾರ. ಉತ್ತಮ ಆರೋಗ್ಯದಿಂದಲೇ ಜೀವನದಲ್ಲಿ ಶಾಂತಿ ಮತ್ತು ನೆಮ್ಮದಿ ದೊರಕುತ್ತದೆ. ಆದ್ದರಿಂದ ಇಂತಹ ಶಿಬಿರಗಳಲ್ಲಿ ಭಾಗವಹಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು” ಎಂದು ತಿಳಿಸಿದರು. ಕಂಪಾನಿಯೋ ಶ್ರೀದೇವಿ ವೆಲ್ನೆಸ್ ಸೆಂಟರ್ ಮಂಗಳೂರು ವಿಭಾಗದ ನಿರ್ದೇಶಕರಾದ ಶ್ರೀಧರ್ ಪೂಜಾರಿ ಅವರು ಫೂಟ್ ಪಲ್ಸ್ ಥೆರಪಿ ಶಿಬಿರದ ಮಹತ್ವ ಮತ್ತು ಪ್ರಯೋಜನಗಳ ಕುರಿತು ವಿವರಿಸಿದರು.
ಯುವವಾಹಿನಿ (ರಿ) ಕೊಲ್ಯ ಘಟಕದ ಅಧ್ಯಕ್ಷರಾದ ನಿತಿನ್ ಕರ್ಕೇರ ಅವರು ಪ್ರಸ್ತಾವನೆ ನೀಡಿ ಅತಿಥಿಗಳನ್ನು ಸ್ವಾಗತಿಸಿದರು. ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಮಹಿಳಾ ಸಂಘಟನಾ ನಿರ್ದೇಶಕರಾದ ಸುಧಾ ಸುರೇಶ್ ಹಾಗೂ ನಾರಾಯಣ ಗುರು ಮಹಿಳಾ ಮಂಡಳಿ ಕೊಲ್ಯ ಇದರ ಅಧ್ಯಕ್ಷರಾದ ತ್ರಿವೇಣಿ ಉದಯ ಕುಂಪಲ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಯುವವಾಹಿನಿ ಕೊಲ್ಯ ಘಟಕದ ಆರೋಗ್ಯ ನಿರ್ದೇಶಕರಾದ ಯಶಸ್ವಿನಿ ಕುಂಪಲ ಧನ್ಯವಾದ ಸಲ್ಲಿಸಿದರು. ಘಟಕದ ಮಾಜಿ ಕಾರ್ಯದರ್ಶಿ ಜಗಜೀವನ್ ಕೊಲ್ಯ ಅವರು ಕಾರ್ಯಕ್ರಮ ನಿರೂಪಿಸಿದರು.
ಈ ಶಿಬಿರವು 15 ದಿನಗಳ ಕಾಲ ಉಚಿತವಾಗಿ ನಡೆಯಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯುವಂತೆ ತಿಳಿಸಲಾಯಿತು.


