Yuvavahini

MAR 29, 2026 11.00 PM IST

ಯುವವಾಹಿನಿ( ರಿ.) ಮಾಣಿ ಘಟಕದ ಪದಗ್ರಹಣ ಸಮಾರಂಭ

ಪಾಶ್ಚಿಮಾತ್ಯ ಸಂಸ್ಕೃತಿಯಿಂದ ದಿಕ್ಕು ತಪ್ಪಿದ ಯುವಕರನ್ನು ಸರಿದಾರಿಗೆ ತರಬೇಕು.. ಕುಮಾರಚಂದ್ರ

ಮಾಣಿ: ಯುವ ಜನತೆ ಪಾಶ್ಚಿಮಾತ್ಯ ಸಂಸ್ಕೃತಿಯಿಂದಾಗಿ ದಿಕ್ಕು ತಪ್ಪಿದ್ದು, ಅಂಥವರನ್ನು ಸರಿ ಮಾಡುವ ಉತ್ತಮ ಕೆಲಸ ಯುವವಾಹಿನಿ ಸಂಘಟನೆಯ ಮೂಲಕ ಆಗಬೇಕು ಎಂದು ಕುಮಾರಚಂದ್ರ, ಪೊಲೀಸ್ ಅಧೀಕ್ಷಕರು ಕರ್ನಾಟಕ ಲೋಕಾಯುಕ್ತ ಕಾರವಾರ ಹೇಳಿದರು.
ಅವರು ಮಾರ್ಚ್ 29 ರವಿವಾರ ಮಾಣಿ ಕೊಡಾಜೆಯ ನಕ್ಷತ್ರ ಅಡಿಟೋರಿಯಂನಲ್ಲಿ ನಡೆದ ಯುವವಾಹಿನಿ( ರಿ.) ಮಾಣಿ ಘಟಕದ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷ ಶಿವರಾಜ್ ಪಿ ಆರ್ ವಹಿಸಿದ್ದರು.
ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ರವರು ಗಣೇಶ್ ಪೂಜಾರಿ ಕೊಡಾಜೆ ನೇತೃತ್ವದ ನೂತನ ಕಾರ್ಯಕಾರಿ ಸಮಿತಿಗೆ ಪ್ರತಿಜ್ಞಾವಿಧಿ ಬೋಧಿಸಿ ಶುಭ ಹಾರೈಸಿದರು. ಹೆಚ್ಚುವರಿ ಅಡ್ವೋಕೇಟ್ ಜನರಲ್,ಕರ್ನಾಟಕ. ತಾರನಾಥ ಪೂಜಾರಿ ಇರುವೈಲ್ ರವರು ಡಾ. ತ್ರಿವೇಣಿ ರಮೇಶ್ ಸಂಪಾದಕದಲ್ಲಿ ಮೂಡಿಬಂದ ಮಾಣಿಕ್ಯ ವಾರ್ಷಿಕ ವಿಶೇಷಾಂಕವನ್ನು ಬಿಡುಗಡೆಗೊಳಿಸಿದರು.

ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಪೂಜಾರಿ ಜೈ ತುಳುನಾಡು (ರಿ.) ಬಂಟ್ವಾಳ ಎಗ್ಗೆಗೆ ಯುವವಾಹಿನಿ ಮಾಣಿ ಘಟಕದ “ಸಾಧನ ಪುರಸ್ಕಾರ ” ಪ್ರದಾನ ಮಾಡಿ ಶುಭ ಹಾರೈಸಿದರು. ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು ಹಾಗೂ ಪದನಿಮಿತ್ತ ಭೂ ದಾಖಲೆಗಳ ಉಪನಿರ್ದೇಶಕರಾದ ಪುಷ್ಪರಾಜ್ ಪೂಜಾರಿ ವಿದ್ಯಾರ್ಥಿ ವೇತನ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಯುವ ವಾಹಿನಿ ಮಾಣಿ ಘಟಕದ ವೃತ್ತಿ ನಿರತ ಶಿಕ್ಷಕ ಸದಸ್ಯರಿಗೆ “ಅಕ್ಷರ ಪುರಸ್ಕಾರ” ಪ್ರದಾನ ಮಾಡಲಾಯಿತು

ಘಟಕದ ಅಧ್ಯಕ್ಷ ಶಿವರಾಜ್ ಪಿಆರ್ ತನ್ನ ಅಧ್ಯಕ್ಷತೆ ಅವಧಿಯಲ್ಲಿ ಸಹಕರಿಸಿದ ಕಾರ್ಯಕಾರಿ ಸಮಿತಿಯ ಸದಸ್ಯರುಗಳನ್ನು ಗೌರವಿಸಿದರು. ಕರ್ನಾಟಕ ಕಿಕ್ ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸಿಯೇಷನ್ ರಾಜ್ಯಾಧ್ಯಕ್ಷರಾದ ಸತ್ಯಜಿತ್ ಸುರತ್ಕಲ್, ಐ ಎಂ ಎ ಮಂಗಳೂರು ಅಧ್ಯಕ್ಷ ಡಾ ಸದಾನಂದ ಪೂಜಾರಿ, ವಕೀಲ ರಂಜಿತ್ ಪೂಜಾರಿ ಮೈರ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸೋಮ ಸುಂದರ್ ಸಾಲಿಯಾನ್, ಮಾಣಿ ಘಟಕದ ಕಾರ್ಯದರ್ಶಿ ದೀಪಕ್ ಪೆರಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೇಯ ಸಿಂಧು ಸೃಷ್ಟಿ ಪ್ರಾರ್ಥಿಸಿ, ಸಚಿನ್ ಪೆರಾಜೆ ಸ್ವಾಗತಿಸಿದರು, ದೀಪಕ್ ಪೆರಾಜೆ ವಾರ್ಷಿಕ ವರದಿ ವಾಚಿಸಿ, ನಾಗೇಶ್ ಕೊಂಕಣಪದವು ನೂತನ ಕಾರ್ಯಕಾರಿ ಸಮಿತಿಯನ್ನು ಸಭೆಗೆ ಪರಿಚಯಿಸಿದರು ವಿಶ್ವನಾಥ ಊರ್ದಿಲ ವಂದಿಸಿದರು. ರಾಜೇಶ್ ಬಲ್ಯ ಹಾಗೂ ರೇಣುಕಾ ಕಣಿಯೂರು ಕಾರ್ಯಕ್ರಮ ನಿರೂಪಿಸಿದರು.
ಪದಗ್ರಹಣ ಕಾರ್ಯಕ್ರಮದ ಮೊದಲು ತ್ರಿನೇತ್ರ ಕಲಾವಿದರು ಕುಡ್ಲ ಇವರಿಂದ ಬ್ರಹ್ಮರಕ್ಕಸೆ ತುಳು ನಾಟಕ ಪ್ರದರ್ಶನಗೊಂಡಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!