Yuvavahini

APR 05, 2026 1.00 PM IST

ಯುವವಾಹಿನಿ ಬಜಪೆ ಘಟಕದಲ್ಲಿ ಮಾಹಿತಿ ಕಾರ್ಯಾಗಾರ

ಕರ್ತವ್ಯ ತಿಳಿದು ಕಾರ್ಯನಿರ್ವಹಿಸಿದಾಗ ಸಂಘಟನೆ ಬಲಿಷ್ಠ : ವಿದ್ಯಾ ರಾಕೇಶ್

ಬಜಪೆ : ಯುವವಾಹಿನಿ ಸಂಸ್ಥೆಯ ಬೆಳವಣಿಗೆಗೆ ಬೈಲಾ (ಉಪನಿಬಂಧನೆ) ಮಹತ್ವದ ಆಧಾರವಾಗಿದ್ದು, ಪ್ರತಿಯೊಬ್ಬ ಸದಸ್ಯರೂ ತನ್ನ ಕರ್ತವ್ಯ ಹಾಗೂ ಜವಾಬ್ದಾರಿಗಳನ್ನು ಸ್ಪಷ್ಟವಾಗಿ ಅರಿತು ಕಾರ್ಯನಿರ್ವಹಿಸಿದಾಗ ಮಾತ್ರ ಸಂಘಟನೆ ಮತ್ತಷ್ಟು ಬಲಿಷ್ಠವಾಗುತ್ತದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷರಾದ ವಿದ್ಯಾ ರಾಕೇಶ್ ಹೇಳಿದರು.

ಅವರು ಯುವವಾಹಿನಿ ಬಜಪೆ ಘಟಕದ ನೂತನ ಕಾರ್ಯಕಾರಿ ಸಮಿತಿ ಸದಸ್ಯರಿಗೆ ನಡೆದ ಮಾಹಿತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಯುವವಾಹಿನಿ ಸಂಘಟನೆಯ ಹಿನ್ನೆಲೆ, ಅದರ ಉದ್ದೇಶಗಳು ಹಾಗೂ ಘಟಕದ ಪದಾಧಿಕಾರಿಗಳು, ನಿರ್ದೇಶಕರು ಮತ್ತು ಸಂಘಟನಾ ಕಾರ್ಯದರ್ಶಿಗಳ ಪಾತ್ರಗಳ ಕುರಿತು ಸವಿಸ್ತಾರವಾಗಿ ವಿವರಿಸಿದರು. ಸಂಘಟನೆಯಲ್ಲಿ ಸದಸ್ಯರ ಸಕ್ರಿಯ ಪಾಲ್ಗೊಳ್ಳುವಿಕೆ ಅತ್ಯಂತ ಮುಖ್ಯವಾಗಿದ್ದು, ಅದು ಸಂಘಟನೆಯ ಯಶಸ್ಸಿಗೆ ಬುನಾದಿಯಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಯುವವಾಹಿನಿ (ರಿ) ಮಂಗಳೂರು ಘಟಕದ ಮಾಜಿ ಅಧ್ಯಕ್ಷರಾದ ರಾಕೇಶ್ ಕುಮಾರ್ ಉಪಸ್ಥಿತರಿದ್ದರು
ಬಜಪೆ ಘಟಕದ ಸ್ಥಾಪಕ ಅಧ್ಯಕ್ಷರಾದ ವಿನೋಧರ ಪೂಜಾರಿ ಅವರು, ಘಟಕದ ಬೆಳವಣಿಗೆಯಲ್ಲಿ ಪ್ರತಿಯೊಬ್ಬ ಸದಸ್ಯರ ಸಹಕಾರ ಅವಶ್ಯಕವಾಗಿದ್ದು, ಈ ರೀತಿಯ ಕಾರ್ಯಾಗಾರಗಳು ಸಂಘಟನಾ ಚಟುವಟಿಕೆಗಳಿಗೆ ಹೊಸ ದಿಕ್ಕು ನೀಡುತ್ತವೆ ಎಂದರು.
ಬಜಪೆ ಘಟಕದ ಅಧ್ಯಕ್ಷರಾದ ರೋಹಿತ್ ಪೂಜಾರಿ ಸ್ವಾಗತಿಸಿ ಕಾರ್ಯದರ್ಶಿ ಸುಚಿತ ದೇವರಾಜ್ ಧನ್ಯವಾದಗೈದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!