ಮೂಡುಬಿದಿರೆ: ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವು ದಿನಾಂಕ 05-04-2026 ರಂದು ಇಲ್ಲಿನ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಶೀನಪ್ಪ ಸಭಾಭವನದಲ್ಲಿ ಸಂಭ್ರಮದಿಂದ ಜರುಗಿತು. ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷರಾದ ಗಿರೀಶ್ ಕೋಟ್ಯಾನ್ ಮಾರೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಶಿಕ್ಷಣ ಮತ್ತು ಸಮಾಜ ಸೇವಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ರುಚಿಕಾ ರೋಶನ್ ಹಾಗೂ ತೆಂಕಮಿಜಾರು ಅಂಗನವಾಡಿ ಕೇಂದ್ರದ ಬಿ.ಎಲ್.ಒ. ಕವಿತಾ ಕೋಟ್ಯಾನ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಅಕ್ಷತಾ ಮತ್ತು ಪೂರ್ಣಿಮಾ ಕೋಟ್ಯಾನ್ ಅವರು ಸನ್ಮಾನಿತರ ಸನ್ಮಾನಪತ್ರ ವಾಚಿಸಿದರು.
ಯು.ಪಿ.ಎಸ್.ಸಿ. ಪರೀಕ್ಷಾರ್ಥಿಗಳಿಗೆ ನೆರವಿನ ಭರವಸೆ:
ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಯುವವಾಹಿನಿ ಕೇಂದ್ರ ಸಮಿತಿಯ ಮಹಿಳಾ ಸಂಘಟನೆಯ ನಿರ್ದೇಶಕಿ ಸುಧಾ ಸುರೇಶ್ ಅವರು ಮಾತನಾಡಿ, “ಸಮಾಜದ ಆಕಾಂಕ್ಷಿ ವಿದ್ಯಾರ್ಥಿಗಳು ಯು.ಪಿ.ಎಸ್.ಸಿ. ಯಂತಹ ಉನ್ನತ ಪರೀಕ್ಷೆಗಳನ್ನು ಎದುರಿಸಲು ಆಸಕ್ತಿ ಹೊಂದಿದ್ದರೆ, ಅಂತಹವರಿಗೆ ಯುವವಾಹಿನಿ ಕೇಂದ್ರ ಸಮಿತಿಯ ವತಿಯಿಂದ ಅಗತ್ಯ ನೆರವು ಮತ್ತು ಸೂಕ್ತ ಮಾರ್ಗದರ್ಶನ ನೀಡಲಾಗುವುದು,” ಎಂದು ಭರವಸೆ ನೀಡಿದರು.
ವೇದಿಕೆಯಲ್ಲಿ ಘಟಕದ ನಿಕಟಪೂರ್ವ ಅಧ್ಯಕ್ಷ ಮುರಳೀಧರ ಕೋಟ್ಯಾನ್, ಕಾರ್ಯದರ್ಶಿ ಅಶ್ವಿನ್ ಪೂಜಾರಿ, ಜಯಶೀಲಾ ಪೂಜಾರಿ ಹಾಗೂ ಜೀವಿತಾ ಶಂಕರ್ ಉಪಸ್ಥಿತರಿದ್ದರು. ಘಟಕದ ಮಾಜಿ ಅಧ್ಯಕ್ಷರಾದ ನವಾನಂದ, ಶಂಕರ ಎ. ಕೋಟ್ಯಾನ್ ಹಾಗೂ ಸದಸ್ಯರಾದ ಶುಭಲಕ್ಷ್ಮಿ ಮತ್ತು ಸತೀಶ್ ಬಂಗೇರ ಅವರು ಸಂಘಟನೆಯ ಮುಂದಿನ ಬೆಳವಣಿಗೆಯ ಕುರಿತು ಉಪಯುಕ್ತ ಸಲಹೆಗಳನ್ನು ನೀಡಿದರು.
ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಸ್ವಾಗತಿಸಿ, ಕಾರ್ಯದರ್ಶಿ ಅಶ್ವಿನ್ ಪೂಜಾರಿ ವಂದಿಸಿದರು. ಕಾರ್ಯಕ್ರಮದಲ್ಲಿ ಘಟಕದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.


