Yuvavahini

APR 19, 2026 2.00 PM IST

ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ ದಿಶಾ ಪೂಜಾರಿ ಅವರನ್ನು ಯುವವಾಹಿನಿ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.

ಯುವಸಿಂಚನ ಪತ್ರಿಕೆ ಬಿಡುಗಡೆ
ಇದೇ ಸಂದರ್ಭದಲ್ಲಿ ಯುವವಾಹಿನಿ ಮುಖವಾಣಿ ‘ಯುವಸಿಂಚನ’ ಪತ್ರಿಕೆಯನ್ನು ಬಿಡುಗಡೆಗೊಳಿಸಿದ ದಕ್ಷಿಣ ಕನ್ನಡ ಸಂಸದರಾದ ಬ್ರಿಜೇಶ್ ಚೌಟ ಅವರು, ದೇಶದ ಸಾಂಸ್ಕೃತಿಕ ವೈಭವದ ಮಹತ್ವವನ್ನು ಒತ್ತಿ ಹೇಳಿ, ಯುವಜನತೆ ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕೆಂದು ಕರೆ ನೀಡಿದರು. ಯುವವಾಹಿನಿ ಸಂಸ್ಥೆಯು ಈ ನಿಟ್ಟಿನಲ್ಲಿ ಕೈಗೊಂಡಿರುವ ಸಾಂಸ್ಕೃತಿಕ ಚಟುವಟಿಕೆಗಳು ಶ್ಲಾಘನೀಯವಾಗಿದ್ದು, ಸಮಾಜದಲ್ಲಿ ಉತ್ತಮ ಮೌ

ಲ್ಯಗಳನ್ನು ಬಿತ್ತುವಲ್ಲಿ ಮಹತ್ವದ ಕೊಡುಗೆಯನ್ನು ನೀಡುತ್ತಿದೆ ಎಂದು ಅವರು ಪ್ರಶಂಸಿಸಿದರು. ಈ ಸಂದರ್ಭದಲ್ಲಿ ಯುವಸಿಂಚನ ಪತ್ರಿಕೆಯ ಸಂಪಾದಕ ಹರೀಶ್ ವಿ ಪಚ್ಚನಾಡಿ ಹಾಗೂ ಸಂಪಾದಕ ಮಂಡಳಿ ಸದಸ್ಯರು ಉಪಸ್ಥಿತರಿದ್ದರು

​ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಸಮಾಜ ಸಂಘಟನೆ ಶ್ಲಾಘನೀಯ: ಶಾಸಕ ರಾಜೇಶ್ ನಾಯ್ಕ್
​ ಯುವವಾಹಿನಿ ಸಂಸ್ಥೆಯು ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಸಮಾಜವನ್ನು ಒಂದುಗೂಡಿಸುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಿರುವುದು ಅತ್ಯಂತ ಶ್ಲಾಘನೀಯವಾಗಿದೆ ಎಂದು ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಯು. ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಅಭಿಪ್ರಾಯಪಟ್ಟರು

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವರಾದ ಬಿ ರಮಾನಾಥ ರೈ ಅವರು, “ಬಿಲ್ಲವ ಸಮಾಜದ ಹೆಮ್ಮೆಯ ಪುತ್ರಿಯಾಗಿ ದಿಶಾ ಪೂಜಾರಿ ಸಾಧನೆ ಸಮಸ್ತ ಸಮಾಜಕ್ಕೆ ಹೆಮ್ಮೆ ತರುವಂತಾಗಿದೆ,” ಎಂದು ಹೇಳಿದರು.
ಯುವವಾಹಿನಿ ಕೇಂದ್ರ ಸಮಿತಿಯು ದಿಶಾ ಪೂಜಾರಿ ಅವರಿಗೆ ₹25,000 ನಗದು ಪುರಸ್ಕಾರ ನೀಡಿ ಅಭಿನಂದಿಸಿತು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ವಹಿಸಿದ್ದರು.

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ಅಗ್ರಜ ಬಿಲ್ಡರ್ಸ ಮಾಲಕರಾದ ಸಂದೇಶ್ ಶೆಟ್ಟಿ, ಸೇವ್ ಲೈಫ್ ಚಾರಿಟಬಲ್ ಸಂಸ್ಥಾಪಕರಾದ ಅರ್ಜುನ್ ಭಂಡಾರ್ಕರ್
ಉದ್ಯಮಿಗಳಾದ ಪ್ರಿಯದರ್ಶಿನಿ ಸುನೀಲ್ ಬಜ್ಪೆ, ಮನೋಜ್ ಶರ್ಮ, ಗೋಪಾಲ್ ಮೂಲ್ಯ, ರಾಜಶೇಖರ್ ಕೋಟ್ಯಾನ್ ಪುತ್ತೂರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕ್ರೀಡಾ ನಿರ್ದೇಶಕರಾದ ಶಂಕರ್ ಕೋಟ್ಯಾನ್ ಅವರು ದಿಶಾ ಅವರ ಸಾಧನೆಯನ್ನು ಸಭೆಗೆ ಪರಿಚಯಿಸಿದರು.

ವೇದಿಕೆಯಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು, ಕಾರ್ಯದರ್ಶಿ ಮಧುಸೂದನ್ ಮದ್ವ, ಸಾಂಸ್ಕೃತಿಕ ನಿರ್ದೇಶಕ ಶೈಲೇಶ್ ಕುಚ್ಚಿಗುಡ್ಡೆ, ಹಾಗೂ ಕೇಂದ್ರ ಸಮಿತಿಯ ಸಾಂಸ್ಕೃತಿಕ ನಿರ್ದೇಶಕ ದಿನೇಶ್ ಸುವರ್ಣ ರಾಯಿ, ಪ್ರಧಾನ ಸಂಚಾಲಕರಾದ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಸಂಚಾಲಕರಾದ ಗೀತಾ ಜಗದೀಶ್, ಉದಯ ಮೇನಾಡು ಉಪಸ್ಥಿತರಿದ್ದರು.

ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್ ಧನ್ಯವಾದಗಳನ್ನು ಅರ್ಪಿಸಿದರು. ರೇಣುಕಾ ಕಣಿಯೂರು ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!