Yuvavahini

APR 19, 2026 10.00 AM IST

ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ

ಯುವವಾಹಿನಿ ಡೆನ್ನಾನ ಡೆನ್ನನ 2026 : ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಎಪ್ರಿಲ್ 19 ರಂದು ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್ ಇಲ್ಲಿ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026 ನಡೆಯಿತು.

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಇವರು ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿ ಮಾತನಾಡಿದರು. “ನಮ್ಮ ಪೂರ್ವಜರು ಉಳಿಸಿಕೊಟ್ಟ ಜಾನಪದ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ದಾಟಿಸುವ ಜವಾಬ್ದಾರಿ ಯುವಜನತೆಯ ಮೇಲಿದೆ. ಸ್ಪರ್ಧಾತ್ಮಕ ಮನೋಭಾವದ ಜೊತೆಗೆ ನಮ್ಮತನವನ್ನು ಉಳಿಸಿಕೊಳ್ಳುವ ಹಂಬಲ ಈ ಕಾರ್ಯಕ್ರಮದಲ್ಲಿ ಎದ್ದು ಕಾಣುತ್ತಿದೆ,” ಎಂದು ಅವರು ಆಶಯ ವ್ಯಕ್ತಪಡಿಸಿದರು.

ಡೆನ್ನಾನ’ ತುಳು ಸಂಸ್ಕೃತಿಯ ಪ್ರತಿಬಿಂಬ: ಹರಿಕೃಷ್ಣ ಬಂಟ್ವಾಳ್
​ ಯುವವಾಹಿನಿ ಆಯೋಜಿಸುವ ‘ಡೆನ್ನಾನ ಡೆನ್ನಾನ’ ಕಾರ್ಯಕ್ರಮವು ಕೇವಲ ಒಂದು ಸ್ಪರ್ಧೆಯಲ್ಲ, ಅದು ತುಳುನಾಡಿನ ಮಣ್ಣಿನ ಸಂಸ್ಕೃತಿಯನ್ನು ಜಗತ್ತಿಗೆ ಪರಿಚಯಿಸುವ ಒಂದು ಅದ್ಭುತ ವೇದಿಕೆಯಾಗಿದೆ ಎಂದು ಡೆನ್ನಾನ ಡೆನ್ನನ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದ ಪಡುಮಲೆ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್ ಅವರು ಅಭಿಪ್ರಾಯಪಟ್ಟರು.

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಧ್ವಜಾರೋಹಣ ಮಾಡಿದರು. ಯುವವಾಹಿನಿ (ರಿ.) ಬಂಟ್ವಾಳ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು

ಗೆಜ್ಜೆಗಿರಿ ನಂದನಬಿತ್ತ್‌ಲ್ ಕ್ಷೇತ್ರದ ಅಧ್ಯಕ್ಷರಾದ ಸಂಜೀವ ಪೂಜಾರಿ ಬಿರ್ವ, ಬೆಹರ್ರೈನ್ ಕನ್ಮಡ ಸಂಘದ ಅಧ್ಯಕ್ಷರಾದ ಅಜಿತ್ ಬಂಗೇರ, ಗುಜರಾತ್ ಬಿಲ್ಲವ ಸಂಘದ ನಿಕಟಪೂರ್ವ ಅಧ್ಯಕ್ಷರಾದ, ಕೌಡೋಡಿ ವಿಶ್ವನಾಥ ಪೂಜಾರಿ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಉಪಾಧ್ಯಕ್ಷ ಜಯಪ್ರಕಾಶ್ ಜೆ. ಎಸ್‌., ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ ರಾಗಿಣಿ ಮಾಧವ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು

900 ಕ್ಕೂ ಅಧಿಕ ಕಲಾವಿದರು, ಬೆಂಗಳೂರು, ಉಡುಪಿ ಸೇರಿದಂತೆ ಯುವವಾಹಿನಿ ಸಂಸ್ಥೆಯ 17 ಘಟಕಗಳು ಈ ಸಾಂಸ್ಕೃತಿಕ ಹಬ್ಬದಲ್ಲಿ ಭಾಗವಹಿಸಿದ್ದರು

ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್, ಸಾಂಸ್ಕೃತಿಕ ನಿರ್ದೇಶಕ ದಿನೇಶ್ ಸುವರ್ಣ ರಾಯಿ, ಯುವವಾಹಿನಿ ಬಂಟ್ವಾಳ ಘಟಕದ ಕಾರ್ಯದರ್ಶಿ ಮಧುಸೂದನ್ ಮದ್ವ, ಸಾಂಸ್ಕೃತಿಕ ನಿರ್ದೇಶಕ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ, ಕಾರ್ಯಕ್ರಮದ ಪ್ರಧಾನ ಸಂಚಾಲಕ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಸಂಚಾಲಕರಾದ ಗೀತಾ ಜಗದೀಶ್, ಉದಯ ಪೂಜಾರಿ ಮೇನಾಡು ಉಪಸ್ಥಿತರಿದ್ದರು

ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು ಸ್ವಾಗತಿಸಿದರು, ಕಾರ್ಯದರ್ಶಿ ಮಧುಸೂದನ್ ಮದ್ವ ಧನ್ಯವಾದ ನೀಡಿದರು ರೇಣುಕಾ ಕಣಿಯೂರು ಕಾರ್ಯಕ್ರಮ ನಿರೂಪಿಸಿದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!