Yuvavahini

AUG 10, 2016 7.42 AM IST

ಯುವವಾಹಿನಿ(ರಿ) ಮೂಲ್ಕಿ ಘಟಕ

ಮೂಲ್ಕಿ ಘಟಕದಿಂದ 14ನೇ ’ಆಟಿಡೊಂಜಿ ದಿನ’ ಕಾರ್ಯಕ್ರಮ

ಆಟಿ ತಿಂಗಳ ಆಚರಣೆಯು ಪರಿಪೂರ್ಣವಾದ ವೈಜ್ಞಾನಿಕ ವಿಷಯಗಳಿಂದ ಕೂಡಿದ್ದು, ಇದರ ಬಗ್ಗೆ ಜನರಲ್ಲಿರುವ ಮೌಢ್ಯವನ್ನು ಸೂಕ್ತ ತಿಳಿವಳಿಕೆ ನೀಡುವ ಮೂಲಕ ನಿವಾರಿಸ ಬೇಕು. ಅದರಲ್ಲಿರುವ ಉತ್ತಮ ಅಂಶಗಳನ್ನು ಬೆಳೆಸಿಕೊಂಡು ಬರುವುದು ಒಳಿತು ಎಂದು ಹಿರಿಯ ಶಿಕ್ಷಕ ಹಾಗೂ ಪತ್ರಕರ್ತ ವಾಮನ ಇಡ್ಯಾ ಹೇಳಿದರು.

ಅವರು ಮೂಲ್ಕಿ ಯುವವಾಹಿನಿ ಘಟಕದ ಆಶ್ರಯದಲ್ಲಿ ಜರಗಿದ 14 ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು.

ಆಚರಣೆಯಲ್ಲಿ ಅಡಗಿರುವ ಮೌಢ್ಯಗಳ ಅಂಶಗಳನ್ನು ಸರಿಪಡಿಸಿಕೊಂಡು ಮುಖ್ಯವಾಗಿ ಯುವಜನರಲ್ಲಿ ತಿಳುವಳಿಕೆಯನ್ನು ಮೂಡಿಸಿ ತುಳು ಭಾಷೆಯೊಂದಿಗೆ ತುಳು ಸಂಸ್ಕೃತಿಯನ್ನು ಬೆಳೆಸುವ ಕೆಲಸ ಮತ್ತಷ್ಟು ಆಗಬೇಕಾಗಿದೆ ಎಂದು ಅವರು ಹೇಳಿದರು.

ಆಟಿ ತಿಂಗಳಲ್ಲಿ ತುಳುನಾಡಿನ ಪುರಾತನ ಸಂಸ್ಕಾರಗಳಲ್ಲಿ ಒಂದಾದ (ಮಾರಿ ಓಡಿಸುವ) ಕಾರ್ಯಕ್ರಮದ ವಿಧಿವಿಧಾನಗಳ ಮೂಲಕ ಈ ಬಾರಿಯ ’ಆಟಿಡೊಂಜಿ ದಿನ’ವನ್ನು ವಿಶಿಷ್ಟ ರೀತಿಯಲ್ಲಿ ಭಾರತ್ ಕೋ-ಅಪರೇಟಿವ್ ಬ್ಯಾಂಕಿನ ಚೇರ್‌ಮ್ಯಾನ್ ಜಯ ಸಿ. ಸುವರ್ಣ ಉದ್ಘಾಟಿಸಿದರು.

ತುಳುನಾಡಿನ ಪರಂಪರೆಯನ್ನು ಉಳಿಸಿಕೊಂಡು ಬರುವಲ್ಲಿ ಮೂಲ್ಕಿ ಯುವವಾಹಿನಿ ನಡೆಸುತ್ತಿರುವ ಪ್ರತಿಯೊಂದು ಕಾರ್ಯಕ್ರಮಗಳು ಇತರ ಸಂಸ್ಥೆಗಳಿಗೆ ಆದರ್ಶವೆಂಬಂತೆ ನಡೆಸುತ್ತಿದೆ. ಇದು ಮುಂಬಯಿಯ ತುಳು ಕಾರ್ಯಕ್ರಮಗಳಲ್ಲಿ ಅಳವಡಿಸಿಕೊಳ್ಳಲು ಪ್ರೇರಣೆಯಾಗಿದೆ ಎಂದು ಜಯ ಸಿ. ಸುವರ್ಣ ಹೇಳಿದರು.
ಘಟಕದ ಅಧ್ಯಕ್ಷ ಚೇತನ್ ಕುಮಾರ್ ಸ್ವಾಗತಿಸಿದರು. ಮಾಜಿ ಅಧ್ಯಕ್ಷ ವಿಜಯಕುಮಾರ್ ಕುಬೆವೂರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಮೂಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ಹರಿಶ್ಚಂದ್ರ ಪಿ. ಸಾಲ್ಯಾನ್, ಕಿನ್ನಿಗೋಳಿ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಅಧ್ಯಕ್ಷ ಚಾವಡಿ ಮನೆ ಜಗನ್ನಾಥ ಶೆಟ್ಟಿ ಮತ್ತು ಮುಂಬಯಿ ಬಿಲ್ಲವರ ಅಸೋಸಿಯೇಶನ್‌ನ ಅಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್ ಅತಿಥಿಗಳಾಗಿದ್ದರು.

ಮುಂಬಯಿ, ಗುಜರಾತ್ ಮತ್ತು ಕತಾರ್ ಮುಂತಾದೆಡೆಗಳಿಂದ ಬಂದ ಅತಿಥಿಗಳನ್ನು ಗೌರವಿಸಲಾಯಿತು.

ಕಲಾವಿದರ ಹಾಗೂ ಕಲಾ ನಿರ್ದೇಶಕ ತಮ್ಮ ಲಕ್ಷ್ಮಣ ಅವರಿಗೆ ’ಆಟಿದ ತಮ್ಮನ’ ಗೌರವ ನೀಡಿ ಸಮ್ಮಾನಿಸಲಾಯಿತು.

ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ನಿರ್ದೇಶಕರಾದ ದೀಕ್ಷಾ ಸುವರ್ಣ ಮತ್ತು ದಿವಾಕರ್ ಕೋಟ್ಯಾನ್ ವೇದಿಕೆಯಲ್ಲಿದ್ದರು.

ಕಾರ್ಯದರ್ಶಿ ಸತೀಶ್ ಕಿಲ್ಪಾಡಿ ವಂದಿಸಿದರು. ಉದಯ ಅಮೀನ್ ಮಟ್ಟು ಮತ್ತು ವಿಜಯಕುಮಾರ್ ಕುಬೆವೂರು ಕಾರ್ಯಕ್ರಮ ನಿರ್ವಹಿಸಿದರು.

ಡೋಲು ತಂಡದ ದುನಿಪು ಹಾಗೂ ಇತರ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಆಟಿ ತಿಂಗಳ ವಿವಿಧ ಖಾದ್ಯಗಳು ಕಾರ್ಯಕ್ರಮದಲ್ಲಿ ವಿಶೇಷ ಆಕರ್ಷಣೆಯಾಗಿದ್ದವು.

One thought on “ಮೂಲ್ಕಿ ಘಟಕದಿಂದ 14ನೇ ’ಆಟಿಡೊಂಜಿ ದಿನ’ ಕಾರ್ಯಕ್ರಮ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!