ಸಾಮಾಜಿಕ ಸ್ಥಾನಮಾನ ಇಲ್ಲದ ವರ್ಗದವರಿಗೆ ಶಕ್ತಿ ತುಂಬುವ ಕಾರ್ಯವನ್ನು ಬ್ರಹ್ಮಶ್ರೀ ನಾರಾಯಣಗುರು ಮಾಡಿದ್ದಾರೆ. ಅವರ ತತ್ವ ಸಂದೇಶವನ್ನು ಯುವಕರು ಪಾಲಿಸಬೇಕು ಹಾಗೂ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಕಳೆದ 25 ವರ್ಷಗಳ ಸಾಧನೆ ಶ್ಲಾಘನೀಯವಾದುದು ಎಂದು ಕೇಂದ್ರ ಸರಕಾರದ ಮಾಜಿ ವಿತ್ತ ಸಚಿವ ಬಿ. ಜನಾರ್ದನ ಪೂಜಾರಿ ತಿಳಿಸಿದರು.
ಅವರು ದಿನಾಂಕ 19.01.2014ನೇ ಆದಿತ್ಯವಾರ ಬಿ.ಸಿ.ರೋಡ್ ಗಾಣದಪಡ್ಪು ನಾರಾಯಣಗುರು ನಗರದ ಕಾಂತಬಾರೆ ಬೂದಬಾರೆ ಸಭಾಂಗಣದ ಕೋಟಿ ಚೆನ್ನಯ ವೇದಿಕೆಯಲ್ಲಿ ಜರುಗಿದ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ರಜತ ಸಂಭ್ರಮ ಉದ್ಘಾಟಿಸಿ ಮಾತನಾಡಿದರು.
ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ರಜತ ವರ್ಷದ ಅದ್ಯಕ್ಷ ಭುವನೇಶ್ ಪಚ್ಚಿನಡ್ಕ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೇರಳ ವರ್ಕಳದ ಶಿವಗಿರಿ ಮಠಾಧೀಶರಾದ ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಿದರು.
ಕರ್ನಾಟಕ ಸರಕಾರದ ನಗರಾಭಿವೃದ್ದಿ ಸಚಿವರಾದ ವಿನಯ ಕುಮಾರ್ ಸೊರಕೆ, ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ದಿನೇಶ್ ಅಮೀನ್ ಮಟ್ಟು,ರಾಷ್ರೀಯ ಬಿಲ್ಲವರ ಮಹಾ ಮಂಡಲದ ಅದ್ಯಕ್ಷ ಜಯ ಸಿ ಸುವರ್ಣ, ಕರ್ನಾಟಕ ಪ್ರದೇಶ ಆರ್ಯ ಈಡಿಗ ಸಂಘದ ಅದ್ಯಕ್ಷ ಜೆ.ಪಿ.ನಾರಾಯಣ ಸ್ವಾಮಿ, ಸೊರಬ ಶಾಸಕರಾದ ಮಧು ಬಂಗಾರಪ್ಪ, ಉದ್ಯಮಿ ರಮೇಶ್ ಕುಮಾರ್, ಉದ್ಯಮಿ ಸೀತಾರಾಮ ಪೂಜಾರಿ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ.ಸೇಸಪ್ಪ ಕೋಟ್ಯಾನ್, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕಾರ್ಯದರ್ಶಿ ನಾಗೇಶ್ ಪೂಜಾರಿ ಎಲಬೆ, ಸಂಚಾಲಕರಾದ ಟಿ.ಶಂಕರ ಸುವರ್ಣ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರಜತ ಸಂಭ್ರಮ ಸಂಚಾಲಕರಾದ ಜಿತೇಂದ್ರ ಜೆ.ಸುವರ್ಣ ಸ್ವಾಗತಿಸಿದರು, ಉಪಾಧ್ಯಕ್ಷ ರಾಜೇಶ್ ಸುವರ್ಣ ಪ್ರಾಸ್ತಾವಿಕ ಮಾತನಾಡಿದರು, ಬಿ.ಶ್ರೀಧರ ಅಮೀನ್ ಧನ್ಯವಾದ ನೀಡಿದರು.