Yuvavahini

APR 07, 2026 9.00 PM IST

ಯುವವಾಹಿನಿ ಮಂಗಳೂರು ಘಟಕದ ವತಿಯಿಂದ ಮಾಹಿತಿ ಕಾರ್ಯಾಗಾರ

ಸೈಬರ್ ಅಪರಾಧಗಳ ಬಗ್ಗೆ ಜಾಗೃತರಾಗಿರಿ: ವೇಣುಗೋಪಾಲ್

ಮಂಗಳೂರು: ಇಂದಿನ ಡಿಜಿಟಲ್ ಯುಗದಲ್ಲಿ ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ವಿದ್ಯಾವಂತರು ಅತ್ಯಂತ ಜಾಗರೂಕರಾಗಿ ಇರಬೇಕು ಎಂದು ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಉರ್ವ ಪೊಲೀಸ್ ಠಾಣೆಯ ಎ.ಎಸ್.ಐ ವೇಣುಗೋಪಾಲ್ ಅವರು ತಿಳಿಸಿದರು.

ಅವರು ಏಪ್ರಿಲ್ 7 ರಂದು ಉರ್ವಸ್ಟೋರ್‌ನ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಆಯೋಜಿಸಲಾಗಿದ್ದ ಸೈಬರ್ ಕ್ರೈಮ್ ಹಾಗೂ ಮಾದಕವಸ್ತುಗಳ ಕುರಿತು ಮಾಹಿತಿ ಕಾರ್ಯಾಗಾರ”ದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು.

ಜಾಗೃತಿಯೇ ರಕ್ಷಾಕವಚ:
ಸೈಬರ್ ಅಪರಾಧಗಳ ಜಾಲದ ಬಗ್ಗೆ ಸಮಗ್ರ ಮಾಹಿತಿ ನೀಡಿದ ವೇಣುಗೋಪಾಲ್ ಅವರು, ಪೋಲೀಸ್ ಇಲಾಖೆಯಲ್ಲಿ ಲಭ್ಯವಿರುವ ಹೆಲ್ಪ್‌ಲೈನ್ ಸಂಖ್ಯೆಗಳನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು. ಕುಟುಂಬದವರು ಮತ್ತು ಸ್ನೇಹಿತರು ಇಂತಹ ಮೋಸದ ಬಲೆಗೆ ಬೀಳದಂತೆ ಪರಸ್ಪರ ಎಚ್ಚರಿಸುತ್ತಿರಬೇಕು ಎಂದು ಸಲಹೆ ನೀಡಿದರು.
ನೈಜ ಘಟನೆಗಳ ಮೂಲಕ ಎಚ್ಚರಿಕೆ:
ಮತ್ತೊಬ್ಬ ಪೊಲೀಸ್ ಅಧಿಕಾರಿ ಪ್ರಮೋದ್ ಅವರು ಮಾತನಾಡಿ, “ಇತ್ತೀಚಿನ ದಿನಗಳಲ್ಲಿ ಹೆಚ್ಚು ಸಿರಿವಂತರು ಮತ್ತು ವಿದ್ಯಾವಂತರೇ ಸೈಬರ್ ವಂಚಕರ ಸುಲಭದ ತುತ್ತಾಗುತ್ತಿದ್ದಾರೆ. ಸೈಬರ್ ಅಪರಾಧಗಳು ಸಂಭವಿಸುವ ವಿವಿಧ ಹಂತಗಳು ಮತ್ತು ಅವುಗಳ ಗಂಭೀರ ಪರಿಣಾಮಗಳನ್ನು ನಾವು ನೈಜ ಘಟನೆಗಳ ಮೂಲಕ ಅರ್ಥಮಾಡಿಕೊಳ್ಳಬೇಕಿದೆ,” ಎಂದು ವಿವರಿಸಿದರು.

ಮಹಿಳಾ ಪೊಲೀಸ್ ಅಧಿಕಾರಿ ಕುಸುಮ ಅವರು ಪೊಲೀಸ್ ಇಲಾಖೆಯ ಪರವಾಗಿ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಸಂಯೋಜಿಸುವಲ್ಲಿ ಸಹಕರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷರಾದ ಹರೀಶ್ ಕೆ. ಸುವರ್ಣ ವಹಿಸಿ ಗಣ್ಯರನ್ನು ಸ್ವಾಗತಿಸಿದರು. ವೇದಿಕೆಯಲ್ಲಿ ಘಟಕದ ಕಾರ್ಯದರ್ಶಿ ಉಷಾ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಘಟಕದ ಸದಸ್ಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ಉಷಾ ಅವರು ವಂದನಾರ್ಪಣೆ ಮಾಡಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!