ಮಂಗಳೂರು: ದಿನಾಂಕ 21/04/2026 ರಂದು ನಡೆದ ಯುವವಾಹಿನಿಯ ಕಟ್ಟಡ ಸಮಿತಿಯ ಸಭೆಯಲ್ಲಿ, ಯುವವಾಹಿನಿ (ರಿ.) ಕೇಂದ್ರ ಸಮಿತಿಯ ನೂತನ ಆಡಳಿತ ಕಚೇರಿ ನಿರ್ಮಾಣಕ್ಕಾಗಿ ಸಂಗ್ರಹಿಸಿದ ರೂ. 76,500/- ದೇಣಿಗೆಯನ್ನು ಮಂಗಳೂರು ಘಟಕದ ವತಿಯಿಂದ ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಮಂಗಳೂರು ಘಟಕದ ಹಾಗೂ ಕೇಂದ್ರ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಕಟ್ಟಡ ಸಮಿತಿಯ ಸಂಚಾಲಕರು, ಕಾರ್ಯದರ್ಶಿಗಳು, ಕೋಶಾಧಿಕಾರಿಗಳು ಮತ್ತು ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.


