ಮೂಡುಬಿದಿರೆ: ಯುವವಾಹಿನಿ (ರಿ.) ಮೂಡುಬಿದಿರೆ ಘಟಕ ಮತ್ತು ಆಳ್ವಾಸ್ ಶಿಕ್ಷಣ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಶಿಬಿರವು ದಿನಾಂಕ 21-04-2026 ರಂದು ಆಳ್ವಾಸ್ ಕಚೇರಿಯಲ್ಲಿ ಯಶಸ್ವಿಯಾಗಿ ನಡೆಯಿತು.

ಈ ಶಿಬಿರದಲ್ಲಿ ಎಸ್.ಎಸ್.ಎಲ್.ಸಿ ವಿಭಾಗದ 18 ಹಾಗೂ ಪಿಯುಸಿ ವಿಭಾಗದ 8 ವಿದ್ಯಾರ್ಥಿಗಳು ಸೇರಿ ಒಟ್ಟು 26 ವಿದ್ಯಾರ್ಥಿಗಳು ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ಅವರು ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸ ಹಾಗೂ ಭವಿಷ್ಯದ ಆಯ್ಕೆಗಳ ಬಗ್ಗೆ ಸಮಗ್ರವಾಗಿ ಹಾಗೂ ಸ್ಪಷ್ಟವಾಗಿ ಮಾರ್ಗದರ್ಶನ ನೀಡಿದರು. ಜೊತೆಗೆ, ತಮ್ಮ ವಿದ್ಯಾಸಂಸ್ಥೆಯಲ್ಲಿ ಲಭ್ಯವಿರುವ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ನೀಡಿ, ವಿದ್ಯಾರ್ಥಿಗಳಿಗೆ ಅಗತ್ಯವಾದ ನೆರವು ನೀಡುವುದಾಗಿ ಭರವಸೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಸುಮಾರು 20 ಮಂದಿ ವಿದ್ಯಾರ್ಥಿಗಳ ಪೋಷಕರು ಸಹ ಉಪಸ್ಥಿತರಿದ್ದು, ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.
ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ಅಧ್ಯಕ್ಷರಾದ ಗಿರೀಶ್ ಕೋಟ್ಯಾನ್, ಮಾಜಿ ಅಧ್ಯಕ್ಷರಾದ ಜಗದೀಶ್ಚಂದ್ರ ಡಿ.ಕೆ. ಹಾಗೂ ಶಂಕರ್ ಕೋಟ್ಯಾನ್, ಉಪಾಧ್ಯಕ್ಷರಾದ ಜೀವಿತಾ ಶಂಕರ್, ಪ್ರಚಾರ ನಿರ್ದೇಶಕರಾದ ಪ್ರಶಾಂತ್ ಮತ್ತು ಸಂಘಟನಾ ಕಾರ್ಯದರ್ಶಿ ಅಶೋಕ್ ಕೇಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.


