ಪುತ್ತೂರು : ಯುವವಾಹಿನಿ (ರಿ.) ಪುತ್ತೂರು ಘಟಕದ ವತಿಯಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನಕ್ಕೆ ತೆರಳುವ ಮಾರ್ಗವಾದ ಮಜಲುಮಾರು ದೇವಸ್ಥಾನದಿಂದ ಮುಖ್ಯ ದ್ವಾರವರೆಗೆ ಎಪ್ರಿಲ್ 12 ರಂದು ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ನಿವೃತ್ತ ಯೋಧರಾದ ವಿಶ್ವನಾಥ್ ಪೂಜಾರಿ ಹಾಗೂ ಉಮಾಮಹೇಶ್ವರಿ ದೇವಸ್ಥಾನದ ಸಮಿತಿ ಸದಸ್ಯರಾದ ಪದ್ಮನಾಭ ಪೂಜಾರಿ ಅವರು ತೆಂಗಿನಕಾಯಿ ಒಡೆಯುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ನಿವೃತ್ತ ಯೋಧ ವಿಶ್ವನಾಥ್ ಪೂಜಾರಿ ಅವರು, ಯುವವಾಹಿನಿ ಘಟಕವು ಕೈಗೊಂಡಿರುವ ಈ ಸೇವಾ ಕಾರ್ಯ ಶ್ಲಾಘನೀಯವಾಗಿದ್ದು, ಇಂತಹ ಉತ್ತಮ ಕಾರ್ಯಗಳು ಮುಂದುವರಿಯಲಿ ಎಂದು ಶುಭ ಹಾರೈಸಿದರು.
ವೇದಿಕೆಯಲ್ಲಿ ಘಟಕದ ಅಧ್ಯಕ್ಷರಾದ ಸಮಿತ್ ಪಿರ ಅವರು ಅತಿಥಿಗಳನ್ನು ಶಾಲು ಹೊದಿಸಿ ಆತ್ಮೀಯವಾಗಿ ಸ್ವಾಗತಿಸಿದರು. ಕಾರ್ಯದರ್ಶಿ ದೀಕ್ಷಿತ್ ಇರ್ದೆ ಉಪಸ್ಥಿತರಿದ್ದರು.
ಸ್ವಚ್ಛತಾ ಕಾರ್ಯಕ್ರಮದಲ್ಲಿ ಘಟಕದ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು, ನಿರ್ದೇಶಕರು ಹಾಗೂ ಸರ್ವ ಸದಸ್ಯರು ಸಕ್ರಿಯವಾಗಿ ಭಾಗವಹಿಸಿದರು.


