Yuvavahini

APR 13, 2026 11.00 AM IST

ಯುವವಾಹಿನಿ (ರಿ) ಮೂಡುಬಿದಿರೆ ಘಟಕ

ರಾಜ್ಯ ಪ್ರಥಮ ಸಾಧಕಿಗೆ ಗೌರವ ಸನ್ಮಾನ

ಮೂಡುಬಿದಿರೆ: ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ವತಿಯಿಂದ ಸಮಾಜ ಮಂದಿರದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ, ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಪೂರ್ಣಾಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಆಳ್ವಾಸ್ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ದಿಶಾ ಪೂಜಾರಿ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಗಿರೀಶ್ ಕೋಟ್ಯಾನ್ ಮಾರೂರು ವಹಿಸಿದ್ದರು. ಈ ಸಂದರ್ಭದಲ್ಲಿ ಸಾಧಕಿ ದಿಶಾ ಪೂಜಾರಿ ಅವರಿಗೆ ರೂ. 10,000 ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು. ಘಟಕದ ಗೌರವ ಸಲಹೆಗಾರರಾದ ಪದ್ಮನಾಭ ಸಾಲ್ಯಾನ್ ಮಾತನಾಡಿ, ದಿಶಾ ಅವರ ವಿದ್ಯಾಭ್ಯಾಸಕ್ಕೆ ಸಮಾಜದ ಸಹಕಾರ ದೊರೆತಿದ್ದು, ಅದಕ್ಕೆ ಪ್ರತಿಯಾಗಿ ಅವರು ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ಸಮಾಜಕ್ಕೆ ಹೆಮ್ಮೆ ತಂದಿದ್ದಾರೆ ಎಂದು ಅಭಿಪ್ರಾಯಪಟ್ಟರು. ಸನ್ಮಾನ ಸ್ವೀಕರಿಸಿದ ದಿಶಾ ಪೂಜಾರಿ ಅವರು ಮಾತನಾಡಿ, ತಮ್ಮ ವಿದ್ಯಾಭ್ಯಾಸಕ್ಕೆ ನಿರಂತರ ಪ್ರೋತ್ಸಾಹ ಮತ್ತು ಸಹಕಾರ ನೀಡಿದ ಹಿರಿಯರಿಗೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ. ಅವರು ದಿಶಾ ಅವರ ಸಾಧನೆಯನ್ನು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಘಟಕದ ಗೌರವ ಸಲಹೆಗಾರರಾದ ಡಾ. ಯೋಗೀಶ್ ಕೈರೋಡಿ, ಪ್ರೊ. ಹರೀಶ್, ಯುವಸ್ಪಂದನ ಯೋಜನೆಯ ಅಧ್ಯಕ್ಷರಾದ ನವಾನಂದ, ಮಾಜಿ ಅಧ್ಯಕ್ಷರಾದ ಶಂಕರ ಎ. ಕೋಟ್ಯಾನ್ ಹಾಗೂ ಸುಶಾಂತ್ ಕರ್ಕೇರ, ಉಪಾಧ್ಯಕ್ಷೆ ಜೀವಿತಾ ಶಂಕರ್, ಕಾರ್ಯದರ್ಶಿ ಅಶ್ವಿನ್ ಪೂಜಾರಿ, ಕೋಶಾಧಿಕಾರಿ ಜಯಶೀಲಾ ಎಸ್. ಪೂಜಾರಿ ಸೇರಿದಂತೆ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಗಿರೀಶ್ ಕೋಟ್ಯಾನ್ ಸ್ವಾಗತಿಸಿದರು. ಶಂಕರ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!