Yuvavahini

MAY 10, 2026 7.00 PM IST

ಯುವವಾಹಿನಿ ಕುಪ್ಪೆಪದವು ಎಡಪದವು ಘಟಕದ ವತಿಯಿಂದ ವಿದ್ಯಾನಿಧಿ ಸಹಾಯಾರ್ಥ ಕ್ರಿಕೆಟ್ ಪಂದ್ಯಕೂಟ

ಸಮಾಜಸೇವೆಯಲ್ಲಿ ಯುವವಾಹಿನಿಯ ನಡೆ ಶ್ಲಾಘನೀಯ : ವೈ ಭರತ್ ಶೆಟ್ಟಿ

ಕುಪ್ಪೆಪದವು : “ನಾರಾಯಣ ಗುರುಗಳ ತತ್ವದಂತೆ ‘ವಿದ್ಯೆ–ಉದ್ಯೋಗ–ಸಂಪರ್ಕ’ ಎಂಬ ಧ್ಯೇಯೋದ್ದೇಶದೊಂದಿಗೆ ರಾಜ್ಯವ್ಯಾಪಿ ಬೆಳೆಯುತ್ತಿರುವ ಯುವವಾಹಿನಿ ಸಂಸ್ಥೆಯು, ಯುವಶಕ್ತಿಯನ್ನು ಸಮಾಜಸೇವೆಯತ್ತ ಕೊಂಡೊಯ್ಯುತ್ತಿರುವುದು ಹೆಮ್ಮೆಯ ವಿಚಾರ,” ಎಂದು ಶಾಸಕರಾದ ವೈ ಭರತ್ ಶೆಟ್ಟಿ ಅಭಿಪ್ರಾಯಪಟ್ಟರು.

ಅವರು ಯುವವಾಹಿನಿ (ರಿ.) ಕುಪ್ಪೆಪದವು-ಎಡಪದವು ಘಟಕದ ವತಿಯಿಂದ ವಿದ್ಯಾನಿಧಿ ಸಹಾಯಾರ್ಥವಾಗಿ ಕಿಲೆಂಜಾರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಕ್ರಿಕೆಟ್ ಪಂದ್ಯಕೂಟದ ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತಿದ್ದರು. ಘಟಕವು ಯುವಜನರನ್ನು ಒಗ್ಗೂಡಿಸಿ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಮಾದರಿ ಸಂಘಟನೆಯಾಗಿ ಗುರುತಿಸಿಕೊಂಡಿದೆ ಎಂದು ಅವರು ಶ್ಲಾಘಿಸಿದರು.

ಪಂದ್ಯಕೂಟವನ್ನು ಕಿಲೆಂಜಾರು ಅರಮನೆ ಮುಖ್ಯಸ್ಥ ದಿನೇಶ್ ಕುಮಾರ್ ಬಲ್ಲಾಳ್ ಉದ್ಘಾಟಿಸಿದರು. ಘಟಕದ ಅಧ್ಯಕ್ಷ ಶ್ರೀಧರ್ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಮುತ್ತೂರು ಗ್ರಾಮ ಪಂಚಾಯತ್‌ನ ನಿಕಟಪೂರ್ವ ಅಧ್ಯಕ್ಷ ಪ್ರವೀಣ್ ಗುಂಡ್ಯ ಹಾಗೂ ವರಾಹ ಫೌಂಡೇಶನ್ ಅಧ್ಯಕ್ಷ ಗಿರೀಶ್ ಆಳ್ವ ಭಾಗವಹಿಸಿ ಶುಭ ಹಾರೈಸಿದರು.
ರೋಚಕವಾಗಿ ನಡೆದ ಕ್ರೀಡಾಕೂಟದಲ್ಲಿ ಕ್ರೀಡಾಸ್ಫೂರ್ತಿಯ ಪ್ರದರ್ಶನ ಕಂಡುಬಂದಿತು: ಪ್ರಥಮ ಬಹುಮಾನ: ಯೆನ್.ಎಫ್.ಸಿ (N.F.C) ಕುಪ್ಪೆಪದವು ತಂಡ. ದ್ವಿತೀಯ ಬಹುಮಾನ:ಸೆಮಿ ಲೂಸಾರ್ಸ್ ತಂಡ.

ವೇದಿಕೆಯಲ್ಲಿ ಕ್ರೀಡಾ ನಿರ್ದೇಶಕಿ ಸರಿತಾ ಸುವರ್ಣ, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಅಕ್ಷಿತ್ ಕುಮಾರ್, ಮಾಜಿ ಅಧ್ಯಕ್ಷರಾದ ಅಜಯ್ ಅಮೀನ್ ನಾಗಂಧಡಿ ಹಾಗೂ ಜಗದೀಶ್ ದುರ್ಗಾಕೋಡಿ ಉಪಸ್ಥಿತರಿದ್ದರು. ಘಟಕದ ಕಾರ್ಯದರ್ಶಿ ಅಕ್ಷತಾ, ಪ್ರಮುಖರಾದ ಸುಕುಮಾರ್ ಅಮೀನ್ ಸೇರಿದಂತೆ ಪದಾಧಿಕಾರಿಗಳು ಮತ್ತು ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಅಕ್ಷಿತ್ ಕುಮಾರ್ ಸ್ವಾಗತಿಸಿ, ಸಂತೋಷ್ ಬೋಳಿಯ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!