Yuvavahini

MAY 17, 2026 1.30 PM IST

ಯುವವಾಹಿನಿ ಮೂಡುಬಿದಿರೆ ಘಟಕದ ವತಿಯಿಂದ

ಮಲ್ಲಿಗೆ ಕೃಷಿಯ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಲು ಸಾಧ್ಯ: ಲತಾ ಹೆಗ್ಡೆ

ಮೂಡುಬಿದಿರೆ: ಯುವವಾಹಿನಿ (ರಿ.) ಮೂಡುಬಿದಿರೆ ಘಟಕ ಹಾಗೂ ವೀಚೀಸ್ ತರಬೇತಿ ಕೇಂದ್ರ ಇವರ ಜಂಟಿ ಆಶ್ರಯದಲ್ಲಿ “ಉಚಿತ ಮಲ್ಲಿಗೆ ಕೃಷಿ ಮಾಹಿತಿ ಶಿಬಿರವು ದಿನಾಂಕ 17/05/2026 ರಂದು ಇಲ್ಲಿನ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಭಾಂಗಣದಲ್ಲಿ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮವು ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಘಟಕದ ಅಧ್ಯಕ್ಷರಾದ ಗಿರೀಶ್ ಕೋಟ್ಯಾನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.


ಮಲ್ಲಿಗೆ ಕೃಷಿ ಮಾಹಿತಿ ಮತ್ತು ಪ್ರೇರಣೆ : ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಲತಾ ಹೆಗ್ಡೆ ಮೂಡುಕೊಣಾಜೆ ಅವರು ಮಲ್ಲಿಗೆ ಕೃಷಿಯ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು. ಮಲ್ಲಿಗೆ ಬೆಳೆಗೆ ಅಗತ್ಯವಾದ ಮಣ್ಣಿನ ಗುಣಮಟ್ಟ, ಗಿಡಗಳ ಆಯ್ಕೆ, ಗೊಬ್ಬರದ ಬಳಕೆ, ನೀರಾವರಿ ಪದ್ಧತಿ, ಕೀಟ ಮತ್ತು ರೋಗ ನಿರ್ವಹಣೆ, ಹೂಗಳ ಸಂಗ್ರಹಣೆ ಹಾಗೂ ಮಾರುಕಟ್ಟೆ ವ್ಯವಸ್ಥೆಯ ಬಗ್ಗೆ ತಮ್ಮ ಅನುಭವಗಳನ್ನು ಹಂಚಿಕೊಂಡರು. ಶ್ರಮ, ಆಸಕ್ತಿ ಹಾಗೂ ಸರಿಯಾದ ಮಾರ್ಗದರ್ಶನ ಇದ್ದರೆ ಕೃಷಿಯಲ್ಲಿಯೂ ಉತ್ತಮ ಭವಿಷ್ಯ ನಿರ್ಮಿಸಬಹುದು ಮತ್ತು ಗ್ರಾಮೀಣ ಕುಟುಂಬಗಳು ಆರ್ಥಿಕ ಸ್ವಾವಲಂಬನೆ ಸಾಧಿಸಬಹುದು ಎಂದು ಅವರು ಪ್ರೇರೇಪಿಸಿದರು. ಪೂರ್ಣಿಮಾ ಕೋಟ್ಯಾನ್ ಅವರು ಸಂಪನ್ಮೂಲ ವ್ಯಕ್ತಿಯ ಪರಿಚಯ ಮಾಡಿಕೊಟ್ಟರು. ಇದೇ ಸಂದರ್ಭದಲ್ಲಿ ಲತಾ ಹೆಗ್ಡೆ ಇವರನ್ನು ಘಟಕದ ವತಿಯಿಂದ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಕೃಷಿ ಮತ್ತು ಸ್ವ ಉದ್ಯೋಗ ಇಂದಿನ ಅಗತ್ಯ: ಮಾಜಿ ಅಧ್ಯಕ್ಷರ ಶ್ಲಾಘನೆ ಘಟಕದ ಮಾಜಿ ಅಧ್ಯಕ್ಷರಾದ ಜಗದೀಶ್ಚಂದ್ರ ಡಿ.ಕೆ., ನವಾನಂದ ಮೂಡುಬಿದಿರೆ ಹಾಗೂ ಶಂಕರ್ ಕೋಟ್ಯಾನ್ ಅವರು ಮಾತನಾಡಿ, ಸಮಾಜದ ಅಭಿವೃದ್ಧಿಗೆ ಪೂರಕವಾಗುವ ಇಂತಹ ಜನೋಪಯೋಗಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ಘಟಕದ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿದರು. ಗ್ರಾಮೀಣ ಭಾಗದ ಮಹಿಳೆಯರು ಹಾಗೂ ಯುವಜನತೆಗೆ ಕೃಷಿ ಮತ್ತು ಸ್ವ ಉದ್ಯೋಗದ ಕುರಿತು ಮಾರ್ಗದರ್ಶನ ನೀಡುವ ಕಾರ್ಯಕ್ರಮಗಳು ಇಂದಿನ ಅಗತ್ಯವಾಗಿದ್ದು, ಮುಂದಿನ ದಿನಗಳಲ್ಲಿಯೂ ತಮ್ಮ ಸಂಪೂರ್ಣ ಸಹಕಾರ ಇರಲಿದೆ ಎಂದು ಭರವಸೆ ನೀಡಿದರು.
ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕಿ ಶುಭಲಕ್ಷ್ಮಿ ಅವರು ಮಾತನಾಡಿ, ಮಲ್ಲಿಗೆ ಕೃಷಿ ಮಾಹಿತಿ ಶಿಬಿರದ ಉದ್ದೇಶ ಮತ್ತು ಪ್ರಯೋಜನಗಳ ಕುರಿತು ವಿವರಿಸಿದರು. ಕೃಷಿಯನ್ನು ಆಧುನಿಕ ತಂತ್ರಜ್ಞಾನಗಳೊಂದಿಗೆ ಅಳವಡಿಸಿಕೊಂಡರೆ ಉತ್ತಮ ಆದಾಯ ಗಳಿಸಲು ಸಾಧ್ಯವಿದ್ದು, ಮಹಿಳೆಯರು ಮನೆಮಟ್ಟದಲ್ಲಿಯೇ ಸ್ವ ಉದ್ಯೋಗ ಆರಂಭಿಸಿ ಆರ್ಥಿಕವಾಗಿ ಸ್ವಾವಲಂಬಿಗಳಾಗಬಹುದು ಎಂದು ತಿಳಿಸಿದರು.

ಅಧ್ಯಕ್ಷೀಯ ಭಾಷಣ ಮಾಡಿದ ಗಿರೀಶ್ ಕೋಟ್ಯಾನ್ ಅವರು, ಮಹಿಳೆಯರು ಹಾಗೂ ಸ್ವ ಉದ್ಯೋಗ ಆಸಕ್ತರಿಗೆ ಇಂತಹ ಮಾಹಿತಿ ಶಿಬಿರಗಳು ಅತ್ಯಂತ ಉಪಯುಕ್ತವಾಗಿವೆ ಎಂದರು. ಮುಂದಿನ ದಿನಗಳಲ್ಲಿ ಸಮಾಜಮುಖಿ ಕಾರ್ಯಕ್ರಮಗಳು ಮತ್ತು ಸ್ವ ಉದ್ಯೋಗಕ್ಕೆ ಪ್ರೋತ್ಸಾಹ ನೀಡುವ ಇನ್ನೂ ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದ ಅವರು, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ಅರ್ಪಿಸಿದರು. ಕಾರ್ಯಕ್ರಮದಲ್ಲಿ ಘಟಕದ ಪದಾಧಿಕಾರಿಗಳು, ಸದಸ್ಯರು, ಮಹಿಳೆಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಕೊನೆಯಲ್ಲಿ ಶುಭಲಕ್ಷ್ಮಿ ಅವರು ಧನ್ಯವಾದ ಸಮರ್ಪಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವು ಮುಕ್ತಾಯಗೊಂಡಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!