ಕೊಲ್ಯ : ಮಾನವ ಸೇವೆಯೇ ಮಾಧವ ಸೇವೆ ಎಂಬ ಧ್ಯೇಯದೊಂದಿಗೆ, ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ.) ಕೊಲ್ಯ ಸೋಮೇಶ್ವರ ಮತ್ತು ಯುವವಾಹಿನಿ (ರಿ.) ಕೊಲ್ಯ ಘಟಕದ ಜಂಟಿ ಆಶ್ರಯದಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ಎರಡು ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಮೂಲಕ “ಸಹಾಯ ಹಸ್ತ” ಚಟುವಟಿಕೆಯನ್ನು ಹಮ್ಮಿಕೊಳ್ಳಲಾಯಿತು.

ದಿನಾಂಕ 17-05-2026 ರಂದು ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ತಾಯಂದಿರ ವೈದ್ಯಕೀಯ ಚಿಕಿತ್ಸಾ ವೆಚ್ಚಕ್ಕಾಗಿ ಧನಸಹಾಯ ಹಸ್ತಾಂತರಿಸಲಾಯಿತು: ಸೋಮೇಶ್ವರ ನಿವಾಸಿ ದಾಮೋದರ ಪೂಜಾರಿ ಇವರ ಧರ್ಮಪತ್ನಿಯವರ ಚಿಕಿತ್ಸಾ ವೆಚ್ಚಕ್ಕಾಗಿ. ರೂ. 10,000/- ಹಾಗೂ ಕೊಲ್ಯ ಕಾಸಿಂಬೆಟ್ಟು ನಿವಾಸಿ ಚಂದ್ರಶೇಖರ್ ಪೂಜಾರಿ ಇವರ ಧರ್ಮಪತ್ನಿಯವರ ಚಿಕಿತ್ಸಾ ವೆಚ್ಚಕ್ಕಾಗಿ ರೂ 10,000/- ಹೀಗೆ ಒಟ್ಟು ರೂ. 20,000/- ಆರ್ಥಿಕ ಸಹಾಯವನ್ನು ಸಂಕಷ್ಟದಲ್ಲಿರುವ ಕುಟುಂಬಗಳಿಗೆ ತಲುಪಿಸಿ, ಸಂಸ್ಥೆಯು ತನ್ನ ಸಾಮಾಜಿಕ ಬದ್ಧತೆಯನ್ನು ಮೆರೆದಿದೆ.
ಈ ಸಂದರ್ಭದಲ್ಲಿ ಜಂಟಿ ಸಂಸ್ಥೆಗಳ ಗೌರವಾನ್ವಿತ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಪ್ರಮುಖ ಸದಸ್ಯರು ಉಪಸ್ಥಿತರಿದ್ದು, ಸಂತ್ರಸ್ತ ಕುಟುಂಬಗಳಿಗೆ ಧೈರ್ಯ ತುಂಬಿದರು.






