Yuvavahini

MAY 17, 2026 7.00 PM IST

ಯುವವಾಹಿನಿ ಬಂಟ್ವಾಳ ಘಟಕದ ವತಿಯಿಂದ

ತಣ್ಣೀರುಬಾವಿ ಟ್ರೀ ಪಾರ್ಕ್‌ನಲ್ಲಿ ‘ಸ್ನೇಹ ಮಿಲನ’

ಬಂಟ್ವಾಳ: ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ ಮೇ 17, 2026ರಂದು ಮಂಗಳೂರಿನ ತಣ್ಣೀರುಬಾವಿ ಟ್ರೀ ಪಾರ್ಕ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಯುವವಾಹಿನಿ ಕುಟುಂಬದ ‘ಸ್ನೇಹ ಮಿಲನ’ ಕಾರ್ಯಕ್ರಮವು ಅತ್ಯಂತ ಸಡಗರ-ಸಂಭ್ರಮದಿಂದ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಬಂಟ್ವಾಳ ಘಟಕದ ಅಧ್ಯಕ್ಷರಾದ ನಾಗೇಶ್ ಪೂಜಾರಿ ನೈಬೆಲು ಅವರು ಆಗಮಿಸಿದ ಸರ್ವರನ್ನೂ ಆತ್ಮೀಯವಾಗಿ ಸ್ವಾಗತಿಸಿದರು. ಬಂಟ್ವಾಳ ಘಟಕದ ಯುವವಾಹಿನಿ ಕುಟುಂಬದ ಒಟ್ಟು 94 ಸದಸ್ಯರು ಈ ಪ್ರಕೃತಿಯ ಮಡಿಲಲ್ಲಿ ನಡೆದ ಸ್ನೇಹಕೂಟದಲ್ಲಿ ಭಾಗವಹಿಸಿ ಸಂಭ್ರಮಿಸಿದರು.

ಸಂಭ್ರಮದ ಆಟೋಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು
ಬೆಳಗಿನ ಉಪಹಾರದ ನಂತರ ಸದಸ್ಯರಿಗಾಗಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಗಳನ್ನು ಲಕ್ಷಿತ ಪೂಜಾರಿ ಕದ್ರಿ ಅವರು ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟರು. ಮಧ್ಯಾಹ್ನ ಸವಿಯಾದ ಭೋಜನದ ಬಳಿಕವೂ ಆಟೋಟ ಸ್ಪರ್ಧೆಗಳು ಮತ್ತಷ್ಟು ಉತ್ಸಾಹದಿಂದ ಮುಂದುವರಿದವು. ಇದೇ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ರಾಜೇಶ್ ಬಿ.ಅವರು ಸುಮಧುರ ಗೀತ ಗಾಯನದ ಮೂಲಕ ಎಲ್ಲರ ಮನ ಗೆದ್ದರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪುಅವರು ಮಾತನಾಡಿ, ಘಟಕದ ಒಗ್ಗಟ್ಟು ಮತ್ತು ಸೌಹಾರ್ದತೆಯನ್ನು ಶ್ಲಾಘಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಜತೆ ಕಾರ್ಯದರ್ಶಿ ಹರೀಶ್ ಕೋಟ್ಯಾನ್ ಕುದನೆ ಯುವ ಸಿಂಚನ ಕಾರ್ಯನಿರ್ವಾಹಕ ಸಂಪಾದಕರಾದ ಹರೀಶ್ ಪಚ್ಚನಾಡಿ , ಪ್ರಚಾರ ನಿರ್ದೇಶಕ ಶಿವಪ್ರಸಾದ್ ನೂಚಿಲ, ಸಾಮಾಜಿಕ ಜಾಲತಾಣದ ಸಂಪಾದಕಾರದ ರಾಜೇಶ್ ಸುವರ್ಣ ಮಾಜಿ ಬಂಟ್ವಾಳ ಘಟಕದ ನಿಕಟಪೂರ್ವ ಅಧ್ಯಕ್ಷರಾದ ದಿನೇಶ್ ಸುವರ್ಣ ರಾಯಿ, ಮಾಜಿ ಅಧ್ಯಕ್ಷರಾದ ಪ್ರೇಮನಾಥ ಕರ್ಕೇರ, ಪ್ರಥಮ ಉಪಾಧ್ಯಕ್ಷರಾದ ಕಿರಣ್ ಪೂಂಜೆರಕೋಡಿ, ದ್ವಿತೀಯ ಉಪಾಧ್ಯಕ್ಷರಾದ ನಿಕೇಶ್ ಕೋಟ್ಯಾನ್, ಕೋಶಾಧಿಕಾರಿ ನವೀನ್ ಪೂಜಾರಿ ಲೊರೆಟ್ಟೊ ಮತ್ತಿತರರು ಉಪಸ್ಥಿತರಿದ್ದರು ಮಹೇಶ್ ಬೊಳ್ಳಾಯಿ ಮತ್ತು ಸರಿತಾ ಇವರ ಸಂಚಾಲಕತ್ವದಲ್ಲಿ ಸ್ನೇಹ ಮಿಲನ ಯಶಸ್ವಿಯಾಗಿ ಸಂಪನ್ನಗೊಂಡಿತು ಕಾರ್ಯದರ್ಶಿ ಮಧುಸೂದನ್ ಮದ್ವ ಧನ್ಯವಾದ ನೀಡಿದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!