Yuvavahini

MAY 14, 2026 8.00 PM IST

ಯುವವಾಹಿನಿ ಉಡುಪಿ ಘಟಕದಿಂದ

ಗುರು ಸತ್ಸಂಗ ಹಾಗೂ ಬನ್ನಂಜೆ ಬಾಬು ಅಮೀನ್ ಪ್ರಶಸ್ತಿ ಪ್ರದಾನ ಆಮಂತ್ರಣ ಬಿಡುಗಡೆ

ಉಡುಪಿ: ಯುವವಾಹಿನಿ (ರಿ.) ಉಡುಪಿ ಘಟಕದ ವತಿಯಿಂದ ‘ಗುರು ಸತ್ಸಂಗ’ ಕಾರ್ಯಕ್ರಮವು ಬಲಯಿಪಾದೆಯ ಶ್ರೀ ನಾರಾಯಣ ಗುರು ಯುವ ವೇದಿಕೆ (ರಿ.) ಯಲ್ಲಿ ಘಟಕದ ಪ್ರಥಮ ಉಪಾಧ್ಯಕ್ಷರಾದ ಸುಪ್ರೀತ್ ಅವರ ನೇತೃತ್ವದಲ್ಲಿ ಅತ್ಯಂತ ಶ್ರದ್ಧಾಭಕ್ತಿಗಳಿಂದ ಜರುಗಿತು.

ದೀಪ ಪ್ರಜ್ವಲನೆ ಮತ್ತು ಗುರು ಸಂದೇಶ:
ಶ್ರೀ ನಾರಾಯಣ ಗುರು ಯುವ ವೇದಿಕೆಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷರಾದ ವಿನೋದ್ ಮಂಚಿ ಅವರು ಜಂಟಿಯಾಗಿ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಭಕ್ತಿಪೂರ್ವಕ ‘ಗುರು ಸತ್ಸಂಗ ಭಜನಾ’ ಕಾರ್ಯಕ್ರಮ ನೆರವೇರಿತು.
ಇದೇ ಸಂದರ್ಭದಲ್ಲಿ ಖ್ಯಾತ ವಾಗ್ಮಿ ಹಾಗೂ ಸಂಶೋಧನಾ ವಿದ್ಯಾರ್ಥಿ ಶ್ರೇಯಸ್ ಕೋಟ್ಯಾನ್ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ದಿವ್ಯ ಸಂದೇಶವನ್ನು ಉಲ್ಲೇಖಿಸಿ ದಿಕ್ಸೂಚಿ ಭಾಷಣ ಮಾಡಿದರು. ಗುರುಗಳ ಆದರ್ಶಗಳನ್ನು ಇಂದಿನ ಯುವ ಪೀಳಿಗೆ ಹೇಗೆ ಅಳವಡಿಸಿಕೊಳ್ಳಬೇಕು ಎಂಬುದನ್ನು ಅವರು ಮನಮುಟ್ಟುವಂತೆ ವಿವರಿಸಿದರು.
ಮಹಾಪೂಜೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ:
ಯುವವಾಹಿನಿಯ ಮಾಜಿ ಅಧ್ಯಕ್ಷರಾದ ಭಾಸ್ಕರ್ ಸುವರ್ಣ ಅವರು ಗುರುಗಳಿಗೆ ಮಹಾಪೂಜೆ ನೆರವೇರಿಸಿ, ನೆರೆದಿದ್ದ ಭಕ್ತಾದಿಗಳಿಗೆ ಪ್ರಸಾದ ವಿತರಿಸಿ ಲೋಕಕಲ್ಯಾಣಕ್ಕಾಗಿ ಪ್ರಾರ್ಥಿಸಿದರು. ಇದೇ ಸುಸಂದರ್ಭದಲ್ಲಿ ಮುಂಬರಲಿರುವ ಪ್ರತಿಷ್ಠಿತ ಬನ್ನಂಜೆ ಬಾಬು ಅಮೀನ್ ಪ್ರಶಸ್ತಿ ಪ್ರದಾನ’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ, ನೆರೆದಿದ್ದ ಸರ್ವರಿಗೂ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆತ್ಮೀಯವಾಗಿ ಆಮಂತ್ರಿಸಲಾಯಿತು.
ಈ ಸಂದರ್ಭದಲ್ಲಿ ಘಟಕದ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಪ್ರಮುಖ ಸದಸ್ಯರು ಉಪಸ್ಥಿತರಿದ್ದರು.
ಘಟಕದ ಪ್ರಧಾನ ಕಾರ್ಯದರ್ಶಿ ವೀಕ್ಷಿತ್ ಅವರು ಕಾರ್ಯಕ್ರಮಕ್ಕೆ ಸಹಕರಿಸಿದ ಹಾಗೂ ಆಗಮಿಸಿದ ಸರ್ವರಿಗೂ ಧನ್ಯವಾದ ಸಮರ್ಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!