ಕೊಲ್ಯ : ಬ್ರಹ್ಮಶ್ರೀ ನಾರಾಯಣಗುರು ಧ್ಯಾನ ಮಂದಿರದಲ್ಲಿ, ಯುವವಾಹಿನಿ (ರಿ.) ಕೊಲ್ಯ ಘಟಕದ ವತಿಯಿಂದ ವಿಶೇಷ ‘ಗುರು ಪೂಜೆ’ ಹಾಗೂ ಭಜನಾ ಕಾರ್ಯಕ್ರಮವು ಅತ್ಯಂತ ಶ್ರದ್ಧಾಭಕ್ತಿ ಮತ್ತು ಸಂಭ್ರಮದೊಂದಿಗೆ 17.05.2026ರಂದು ಜರುಗಿತು.

ಘಟಕದ ನೇತೃತ್ವದಲ್ಲಿ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡ ಸತತ ಎರಡನೇ ವರ್ಷದ “ಶಿವಗಿರಿ ಯಾತ್ರೆ” ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ, ಕೊಲ್ಯ ಘಟಕದ ಆತಿಥ್ಯದಲ್ಲಿ ಅತ್ಯಂತ ಯಶಸ್ವಿಯಾಗಿ ಮೂಡಿಬಂದ ಮಹಿಳಾ ಸಬಲೀಕರಣದ ಮಹತ್ವಾಕಾಂಕ್ಷಿ “ಸಖೀ ಸಂವಾದ – 2026” ಕಾರ್ಯಕ್ರಮಗಳ ಯಶಸ್ಸಿನ ಕೃತಜ್ಞತಾ ರೂಪವಾಗಿ ಈ ವಿಶೇಷ ಪೂಜೆಯನ್ನು ಆಯೋಜಿಸಲಾಗಿತ್ತು.

ಸಂಜೆ 6 ಗಂಟೆಯಿಂದ ಘಟಕದ ಸದಸ್ಯರು ಹಾಗೂ ಸಾರ್ವಜನಿಕರಿಂದ ಸುಮಧುರ ‘ಗುರು ಭಜನೆ’ ಕಾರ್ಯಕ್ರಮ ನಡೆಯಿತು. ತದನಂತರ ರಾತ್ರಿ 7 ಗಂಟೆಗೆ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರಿಗೆ ಮಹಾಮಂಗಳಾರತಿ ನೆರವೇರಿ, ತೀರ್ಥ ಪ್ರಸಾದ ವಿತರಿಸಲಾಯಿತು.
ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಯುವವಾಹಿನಿ ಕೊಲ್ಯ ಘಟಕದ ಪದಾಧಿಕಾರಿಗಳು, ಸರ್ವ ಸದಸ್ಯರು ಹಾಗೂ ಭಕ್ತಾಭಿಮಾನಿಗಳು ಸಕ್ರಿಯವಾಗಿ ಪಾಲ್ಗೊಂಡು ಗುರು ಕೃಪೆಗೆ ಪಾತ್ರರಾದರು.


