ಬಜಪೆ : ಶನೀಶ್ವರ ಜಯಂತಿ ಪ್ರಯುಕ್ತ ದಿನಾಂಕ 16.05.2026 ರಂದು ಶ್ರೀ ಶನೀಶ್ವರ ದೇವಸ್ಥಾನದಲ್ಲಿ ವಿಶೇಷ ಭಜನಾ ಸಂಕೀರ್ತನೆ ಹಾಗೂ ಸ್ವಯಂಸೇವಾ ಕಾರ್ಯಕ್ರಮಗಳು ಅತ್ಯಂತ ಭಕ್ತಿ-ಭಾವದಿಂದ ಜರಗಿದವು. ಬೆಳಿಗ್ಗೆ 6.30 ರಿಂದ 8.00 ಗಂಟೆಯವರೆಗೆ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಹಾಗೂ ಯುವವಾಹಿನಿ ಬಜಪೆ ಘಟಕದ ಸದಸ್ಯರ ಜಂಟಿ ಆಶ್ರಯದಲ್ಲಿ ಸುಶ್ರಾವ್ಯ ಭಜನಾ ಸಂಕೀರ್ತನೆ ಭಕ್ತಿಪೂರ್ವಕವಾಗಿ ನೆರವೇರಿತು. ಸ್ವಯಂಸೇವೆಯಲ್ಲಿ ತೊಡಗಿಸಿಕೊಂಡ ಸದಸ್ಯರು ಕ್ಷೇತ್ರದಲ್ಲಿ ಮುಂಜಾನೆಯಿಂದ ಸಂಜೆಯವರೆಗೆ ವಿವಿಧ ಧಾರ್ಮಿಕ ವಿಧಿವಿಧಾನಗಳು ಹಾಗೂ ವಿಶೇಷ ಪೂಜಾ ಸೇವೆಗಳು ನಡೆದವು. ಈ ಸಂದರ್ಭದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಎರಡೂ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು ದೇವಸ್ಥಾನದ ಸ್ವಯಂಸೇವೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದರು.



