Yuvavahini

MAY 28, 2026 8.00 PM IST

ಯುವವಾಹಿನಿ ಬಂಟ್ವಾಳ ಘಟಕದ ಗುರುತತ್ವವಾಹಿನಿ–69

ಅಸ್ಪೃಶ್ಯತೆ, ಅಂಧಶ್ರದ್ಧೆಯ ವಿರುದ್ಧದ ತ್ರಿವಿಧ ಕ್ರಾಂತಿ ಇಂದಿಗೂ ಪ್ರಸ್ತುತ: ದಿನೇಶ್ ಸುವರ್ಣ ರಾಯಿ

ಕಲ್ಲಡ್ಕ: “ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಿಷ್ಠರಾಗಿ” ಎಂಬ ಸಂದೇಶದ ಮೂಲಕ ಸಂಸ್ಕಾರಯುತ ಶಿಕ್ಷಣ ಹಾಗೂ ಸಂಘಟಿತ ಸಮಾಜ ನಿರ್ಮಾಣಕ್ಕೆ ಒತ್ತು ನೀಡಿದ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಗಳು ಇಂದಿಗೂ ಸಮಾಜಕ್ಕೆ ಅತ್ಯಂತ ಪ್ರಸ್ತುತವಾಗಿವೆ ಎಂದು ಯುವವಾಹಿನಿ ಮಾಜಿ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಅಭಿಪ್ರಾಯಪಟ್ಟರು.


ಅವರು ಕಲ್ಲಡ್ಕ ಪೂರ್ಲಿಪಾಡಿಯ ಚಂದ್ರಶೇಖರ್ ಸಾಲಿಯಾನ್ ಅವರ ನಿವಾಸದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಇತ್ತೀಚೆಗೆ ನಡೆದ ‘ಗುರುತತ್ವವಾಹಿನಿ ಭಜನಾ ಸಂಕೀರ್ತನೆ–69’ ಕಾರ್ಯಕ್ರಮದಲ್ಲಿ ಗುರುಸಂದೇಶ ನೀಡುತ್ತಾ ಮಾತನಾಡಿದರು.
ಬ್ರಹ್ಮಶ್ರೀ ನಾರಾಯಣ ಗುರುಗಳು ಆಧ್ಯಾತ್ಮಿಕ ಚಿಂತನೆ, ಸಾಮಾಜಿಕ ಸಮಾನತೆ ಹಾಗೂ ಶೈಕ್ಷಣಿಕ ಪ್ರಗತಿಯ ಮೂಲಕ ಸಮಾಜದಲ್ಲಿ ಮಹತ್ತರ ಬದಲಾವಣೆ ತಂದ ಮಹಾನ್ ಸಮಾಜ ಸುಧಾರಕರಾಗಿದ್ದರು. “ಜಾತಿ ಒಂದೇ, ಮತ ಒಂದೇ, ದೇವರು ಒಬ್ಬನೇ” ಎಂಬ ಮಾನವತಾವಾದಿ ಸಂದೇಶದ ಮೂಲಕ ಅವರು ಸಮಾನತೆಯ ಸಮಾಜದ ಕನಸನ್ನು ಬಿತ್ತಿದರು. ಅಸ್ಪೃಶ್ಯತೆ, ಅಂಧಶ್ರದ್ಧೆ ಮತ್ತು ಸಾಮಾಜಿಕ ಅಸಮಾನತೆಗಳ ವಿರುದ್ಧ ಅವರು ನಡೆಸಿದ ತ್ರಿವಿಧ ಕ್ರಾಂತಿಯು ಇಂದಿಗೂ ಸಮಾಜದ ಏಳಿಗೆಗೆ ದಾರಿದೀಪವಾಗಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಮಂಡಲ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್, ಉದ್ಯಮಿ ಕಿಶೋರ್ ಕಟ್ಟೆಮಾರ್, ಪ್ರಮುಖರಾದ ಯಾದವ ಸಾಲಿಯಾನ್, ದಯಾನಂದ ಸಾಲಿಯಾನ್, ಜಯಪ್ರಕಾಶ್ ತೆಕ್ಕಿಪಾಡು ಹಾಗೂ ಜನಾರ್ದನ ವೀರಕಂಭ ಉಪಸ್ಥಿತರಿದ್ದರು.
ಯುವವಾಹಿನಿ ಬಂಟ್ವಾಳ ಘಟಕದ ಉಪಾಧ್ಯಕ್ಷ ಕಿರಣ್ ಪೂಂಜರಕೋಡಿ, ನಿಕೇಶ್ ಕೋಟ್ಯಾನ್, ನಿರ್ದೇಶಕರಾದ ಯಶೋಧರ ಕಡಂಬಳಿಕೆ, ಮಹೇಶ್ ಬೊಳ್ಳಾಯಿ, ಚಿನ್ನ ಕಲ್ಲಡ್ಕ, ಸದಸ್ಯರಾದ ಸತೀಶ್ ಬಾಯಿಲ, ಸುದೀಪ್ ಸಾಲಿಯಾನ್, ಜಗದೀಶ್ ಕಲ್ಲಡ್ಕ, ಭವಾನಿ ಅಮೀನ್, ಸುನೀತಾ ಮಾರ್ನಬೈಲು, ಯತೀಶ್ ಬೊಳ್ಳಾಯಿ ಹಾಗೂ ಮಾಜಿ ಅಧ್ಯಕ್ಷರಾದ ಪ್ರೇಮನಾಥ್ ಕೆ., ನಾಗೇಶ್ ಪೊನ್ನೋಡಿ, ಶಿವಾನಂದ ಎಂ., ಅರುಣ್ ಕುಮಾರ್ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು. ಕಾರ್ಯಕ್ರಮದ ಭಜನಾ ಸಂಕೀರ್ತನೆಯಲ್ಲಿ ಸಾತ್ವಿಕ್ ದೇರಾಜೆ ಮತ್ತು ಕಾರ್ತಿಕ್ ದೇರಾಜೆ ಸಂಗೀತ ಸೇವೆ ನೀಡಿದರು. ಆತಿಥ್ಯ ವಹಿಸಿದ್ದ ಚಂದ್ರಶೇಖರ್ ಸಾಲಿಯಾನ್ ದಂಪತಿಗಳು ಆಗಮಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು.
ಯುವವಾಹಿನಿ ಬಂಟ್ವಾಳ ಘಟಕದ ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಹರೀಶ್ ಸಾಲಿಯಾನ್ ಅಜೆಕಳ ಧನ್ಯವಾದ ಅರ್ಪಿಸಿದರು. ಸಮಾಜ ಸೇವಾ ನಿರ್ದೇಶಕ ಪ್ರಜಿತ್ ಅಮೀನ್ ಏರಮಲೆ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!