Yuvavahini

MAY 29, 2026 9.00 AM IST

ಯುವವಾಹಿನಿ ಕೇಂದ್ರ ಸಮಿತಿಯ ವತಿಯಿಂದ

ಶಿವಗಿರಿ ಅಧ್ಯಯನ ಪ್ರವಾಸ

ಮಂಗಳೂರು : ಗುರುಗಳ ಆದರ್ಶಗಳನ್ನು ಅರಿಯಲು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ನೇತೃತ್ವದಲ್ಲಿ ಮೇ 26ರಿಂದ 29ರವರೆಗೆ ಕೇರಳದ ಶಿವಗಿರಿ, ಮರತ್ವಮಲೆ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳು ಸ್ಥಾಪಿಸಿದ ವಿವಿಧ ಪವಿತ್ರ ಕ್ಷೇತ್ರಗಳಿಗೆ ಭೇಟಿ ನೀಡಿ ವಿಶೇಷ ಅಧ್ಯಯನ ಪ್ರವಾಸವನ್ನು ಕೈಗೊಳ್ಳಲಾಯಿತು.


ಈ ಅಧ್ಯಯನ ಪ್ರವಾಸದ ಮುಖ್ಯ ಉದ್ದೇಶ ಬ್ರಹ್ಮಶ್ರೀ ನಾರಾಯಣ ಗುರುಗಳ ದಿವ್ಯ ಜೀವನ, ಶ್ರೇಷ್ಠ ತತ್ವದರ್ಶನಗಳು, ಸಾಮಾಜಿಕ ಸುಧಾರಣಾ ಕ್ರಾಂತಿ ಹಾಗೂ ಅವರು ವಿಶ್ವಕ್ಕೆ ನೀಡಿದ ಮಾನವತಾವಾದಿ ಸಂದೇಶಗಳ ಕುರಿತು ಆಳವಾದ ಅಧ್ಯಯನ ನಡೆಸುವುದಾಗಿತ್ತು. ಕೊಲ್ಯ ಘಟಕದ ಮಾಜಿ ಅಧ್ಯಕ್ಷರಾದ ಮೋಹನ್ ಮಾಡೂರು ಅವರು ಈ ಪ್ರವಾಸದ ಮಾರ್ಗದರ್ಶಕರಾಗಿ ಜವಾಬ್ದಾರಿ ನಿರ್ವಹಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರಾದ ಲೋಹಿತ್ ರೆಂಜಾಳ ಅವರು ಪ್ರವಾಸದ ನೇತೃತ್ವವನ್ನು ವಹಿಸಿದ್ದರು.

ಈ ಅಧ್ಯಯನ ಪ್ರವಾಸದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು, ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್, ಉಪಾಧ್ಯಕ್ಷ ಸುರೇಶ್ ಪೂಜಾರಿ, ಕೋಶಾಧಿಕಾರಿ ಸತೀಶ್ ಕಿಲ್ಪಾಡಿ, ಕೇಂದ್ರ ಸಮಿತಿಯ ಸಮಾಜ ಸೇವಾ ನಿರ್ದೇಶಕ ನಿತೀಶ್ ಕುಮಾರ್, ಆರೋಗ್ಯ ನಿರ್ದೇಶಕ ರಾಕೇಶ್ ಮೂಡುಕೋಡಿ, ಪ್ರಚಾರ ನಿರ್ದೇಶಕ ಶಿವಪ್ರಸಾದ್ ನೂಚಿಲ, ಸಾಮಾಜಿಕ ಜಾಲತಾಣ ಸಂಪಾದಕ ರಾಜೇಶ್ ಸುವರ್ಣ, ಸಂಘಟನಾ ಕಾರ್ಯದರ್ಶಿ ಸುಂದರ ಪೂಜಾರಿ ಕಡಬ, ನಾಗೇಶ್ ಪೂಜಾರಿ ಮಾಣಿ, ಶುಭಕರ ಪೂಜಾರಿ ವೇಣೂರು, ಪುತ್ತೂರು ಘಟಕದ ಅಧ್ಯಕ್ಷ ಸುಮಿತ್, ವೇಣೂರು ಘಟಕದ ಮಾಜಿ ಅಧ್ಯಕ್ಷ ಅರುಣ್ ಹಾಗೂ ಕೊಲ್ಯ ಘಟಕದ ನಂದನ್ ಸೇರಿದಂತೆ ಯುವವಾಹಿನಿಯ ಕುಟುಂಬಿಕರು ಭಾಗವಹಿಸಿದ್ದರು.

“ಈ ಅಧ್ಯಯನ ಪ್ರವಾಸವು ನಾರಾಯಣ ಗುರುಗಳ ಆದರ್ಶ ಹಾಗೂ ಚಿಂತನೆಗಳನ್ನು ಮತ್ತಷ್ಟು ಆಳವಾಗಿ ಅರಿಯಲು ನಮಗೆ ಅಪೂರ್ವ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಮುಂದಿನ ದಿನಗಳಲ್ಲಿ ನಮ್ಮ ಸಮಾಜಮುಖಿ ಚಟುವಟಿಕೆಗಳಿಗೆ ಮತ್ತು ಸಂಘಟನಾತ್ಮಕ ಕಾರ್ಯಗಳಿಗೆ ಇದು ಹೊಸ ಚೇತನ ಹಾಗೂ ಮಹತ್ತರ ಪ್ರೇರಣೆ ನೀಡುವಲ್ಲಿ ಅತ್ಯಂತ ಸಹಕಾರಿಯಾಗಿದೆ.” ಎಂದು ಪ್ರವಾಸದಲ್ಲಿ ಪಾಲ್ಗೊಂಡ 49 ಸದಸ್ಯರು ತಮ್ಮ ಅನಿಸಿಕೆಯನ್ನು ಹಂಚಿಕೊಂಡರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!