ಶಿರ್ತಾಡಿ : “ಹೋಮಿಯೋಪತಿ ಚಿಕಿತ್ಸೆಯು ಅಡ್ಡಪರಿಣಾಮಗಳಿಲ್ಲದ ಪರಿಣಾಮಕಾರಿ ಚಿಕಿತ್ಸಾ ಪದ್ಧತಿಯಾಗಿದೆ. ಕಳೆದ 13 ವರ್ಷಗಳಿಂದ ಆರೋಗ್ಯ ಸಮಸ್ಯೆಗಳು ಎದುರಾದಾಗ ನಾನು ಹೋಮಿಯೋಪತಿ ಚಿಕಿತ್ಸೆಯನ್ನೇ ಅನುಸರಿಸುತ್ತಿದ್ದು ಉತ್ತಮ ಫಲಿತಾಂಶ ಕಂಡಿದ್ದೇನೆ. ಸಾರ್ವಜನಿಕರು ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು” ಎಂದು ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ಅಧ್ಯಕ್ಷರಾದ ಗಿರೀಶ್ ಕೋಟ್ಯಾನ್ ತಿಳಿಸಿದರು

ಅವರು ದಿನಾಂಕ 31-05-2026ರಂದು ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ (ರಿ.) ಶಿರ್ತಾಡಿ ಹಾಗೂ ಆಳ್ವಾಸ್ ಹೋಮಿಯೋಪತಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸಹಯೋಗದಲ್ಲಿ ಶಿರ್ತಾಡಿಯ ಬ್ರಹ್ಮಶ್ರೀ ನಾರಾಯಣ ಗುರು ಸಭಾಂಗಣದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು
ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ (ರಿ.) ಶಿರ್ತಾಡಿ ಇದರ ಅಧ್ಯಕ್ಷರಾದ ಸೋಮನಾಥ ಶಾಂತಿ ಅವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಆಳ್ವಾಸ್ ಹೋಮಿಯೋಪತಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಧ್ಯಾಪಕರಾದ ಡಾ. ಭರತ್ ಅವರು ಹೋಮಿಯೋಪತಿಕ್ ಚಿಕಿತ್ಸಾ ಪದ್ಧತಿಯ ಕುರಿತು ವಿವರವಾದ ಮಾಹಿತಿ ನೀಡಿದರು. ಸಾರ್ವಜನಿಕರು ಉಚಿತ ಆರೋಗ್ಯ ತಪಾಸಣಾ ಶಿಬಿರಗಳ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು.
ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ (ರಿ.) ಶಿರ್ತಾಡಿಯ ಮಾಜಿ ಅಧ್ಯಕ್ಷರಾದ ಪಿ.ಕೆ. ರಾಜು ಪೂಜಾರಿ, ರುಕ್ಕಯ್ಯ ಪೂಜಾರಿ, ಆಳ್ವಾಸ್ ಹೋಮಿಯೋಪತಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯರಾದ ಡಾ. ಸುಶೀಕ್ಷಿತಾ ಹಾಗೂ ಡಾ. ಅಧೀರಾ ಕೃಷ್ಣನ್ ಉಪಸ್ಥಿತರಿದ್ದರು. ಶಿಬಿರದಲ್ಲಿ ಸ್ಥಳೀಯ ನಿವಾಸಿಗಳು ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯಕೀಯ ಸಲಹೆ ಹಾಗೂ ಚಿಕಿತ್ಸೆ ಕುರಿತು ಮಾಹಿತಿ ಪಡೆದುಕೊಂಡರು.


