Yuvavahini

MAY 23, 2026 4.00 PM IST

ಯುವವಾಹಿನಿ ಮಹಿಳಾ ಘಟಕದಿಂದ ‘ಉಪನಿಬಂಧನೆ (ಬೈಲಾ) ಮಾಹಿತಿ ಕಾರ್ಯಾಗಾರ’

ಸಂಘಟನೆಯ ಯಶಸ್ಸಿಗೆ ಉಪನಿಬಂಧನೆಗಳ ಅರಿವು ಅಗತ್ಯ: ವಿದ್ಯಾ ರಾಕೇಶ್

ಮಂಗಳೂರು: ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಸದಸ್ಯೆಯರಿಗಾಗಿ ಆಯೋಜಿಸಲಾಗಿದ್ದ “ಉಪನಿಬಂಧನೆ (ಬೈಲಾ) ಮಾಹಿತಿ ಕಾರ್ಯಾಗಾರವು ಮೇ 23ರಂದು ಸಂಜೆ ಯುವವಾಹಿನಿ ಸಭಾಂಗಣದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು.
​ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಘಟಕದ ಅಧ್ಯಕ್ಷೆ ಕಸ್ತೂರಿ ಮಹೇಶ್ ಅವರು ಕಾರ್ಯಾಗಾರಕ್ಕೆ ಆಗಮಿಸಿದ್ದ ಸರ್ವರನ್ನೂ ಸ್ವಾಗತಿಸಿದರು. ಬಳಿಕ, ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಘಟಕದ ಮಾಜಿ ಅಧ್ಯಕ್ಷೆ ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷೆ ವಿದ್ಯಾ ರಾಕೇಶ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.

ಮಹಿಳಾ ಸಬಲೀಕರಣಕ್ಕೆ ಪೂರಕ ಚಿಂತನೆ: ವಿಷಯ ಮಂಡನೆ ಮಾಡಿ ಮಾತನಾಡಿದ ಸಂಪನ್ಮೂಲ ವ್ಯಕ್ತಿ ವಿಧ್ಯಾ ರಾಕೇಶ್ ಅವರು, “ಮಹಿಳೆಯರಿಗೆ ಸಂಘಟನೆಯಲ್ಲಿ ಸಮಾನ ಅವಕಾಶ ಕಲ್ಪಿಸಿದಾಗ ಮಾತ್ರ ಅವರ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂಬುದನ್ನು ಮನಗಂಡು, ಯುವವಾಹಿನಿ ಸಂಸ್ಥೆಯು ಮಹಿಳಾ ಘಟಕದ ಸ್ಥಾಪನೆಗೆ ಮುನ್ನುಡಿ ಬರೆದಿರುವುದು ಅತ್ಯಂತ ಶ್ಲಾಘನೀಯ ಬೆಳವಣಿಗೆಯಾಗಿದೆ” ಎಂದರು.
ಉಪನಿಬಂಧನೆಗಳ ವಿಸ್ತೃತ ಮಾಹಿತಿ: ತಮ್ಮ ಉಪನ್ಯಾಸದಲ್ಲಿ ಅವರು ಯುವವಾಹಿನಿಯ ಉಪನಿಬಂಧನೆಗಳ ವಿವಿಧ ಆಯಾಮಗಳನ್ನು ವಿಸ್ತೃತವಾಗಿ ವಿವರಿಸಿದರು. ಆಹ್ವಾನ ಪತ್ರಿಕೆಯ ವಿನ್ಯಾಸ, ಸದಸ್ಯರು ಹಾಗೂ ಕಾರ್ಯಕಾರಿ ಸಮಿತಿಯ ಜವಾಬ್ದಾರಿಗಳು, ಸಂಘಟನಾ ಬದ್ಧತೆ ಹಾಗೂ ಕಾರ್ಯಕ್ರಮಗಳಲ್ಲಿ ಅನುಸರಿಸಬೇಕಾದ ವೇದಿಕೆ ಆಸನ ವ್ಯವಸ್ಥೆಯ ನಿಯಮಗಳು ಸೇರಿದಂತೆ, ಸಂಸ್ಥೆಯ ಸುಸಂಘಟಿತ ಮತ್ತು ಶಿಸ್ತುಬದ್ಧ ಕಾರ್ಯನಿರ್ವಹಣೆಗೆ ಅಗತ್ಯವಿರುವ ಹಲವಾರು ಪ್ರಮುಖ ವಿಷಯಗಳ ಕುರಿತು ಉಪಯುಕ್ತ ಮಾಹಿತಿ ನೀಡಿದರು.
​ಇದೇ ಸಂದರ್ಭದಲ್ಲಿ ವಿದ್ಯಾ ರಾಕೇಶ್ ಅವರನ್ನು ಮಂಗಳೂರು ಮಹಿಳಾ ಘಟಕದ ವತಿಯಿಂದ ಗೌರವಿಸಲಾಯಿತು
​ಘಟಕದ ಕಾರ್ಯದರ್ಶಿ ಸೋನಿಯಾ ರಾಜ್ ಧನ್ಯವಾದ ಸಮರ್ಪಿಸಿದರು. ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದ ಮಹಿಳಾ ಘಟಕದ ಸದಸ್ಯೆಯರು ಸಕ್ರಿಯವಾಗಿ ಪಾಲ್ಗೊಂಡು, ಸಂಘಟನೆಯ ನಿಯಮಾವಳಿ ಹಾಗೂ ಉಪನಿಬಂಧನೆಗಳ ಕುರಿತು ಗರಿಷ್ಠ ಅರಿವು ಮತ್ತು ಮಾರ್ಗದರ್ಶನವನ್ನು ಪಡೆದುಕೊಂಡರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!