Yuvavahini

MAR 01, 2017 4.13 AM IST

ಯುವವಾಹಿನಿ(ರಿ) ಕೂಳೂರು ಘಟಕ

ಕಾನೂನು ಹಾಗೂ ಗಸ್ತು ವ್ಯವಸ್ಥೆಯ ಬಗ್ಗೆ ಮಾಹಿತಿ

ದಿನಾಂಕ 1-3-2017 ರಂದು ಶ್ರೀ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರದ ಸಭಾಂಗಣದಲ್ಲಿ ಯುವವಾಹಿನಿ (ರಿ) ಕೂಳೂರು ಘಟಕ ಮತ್ತು ಬ್ರಹ್ಮಶ್ರೀ ನಾರಾಯಣಗುರು ಮಂದಿರ ಇವುಗಳ ಜಂಟಿ ಆಶ್ರಯದಲ್ಲಿ ಕಾನೂನು ಹಾಗೂ ಗಸ್ತು ವ್ಯವಸ್ಥೆಯ ಬಗ್ಗೆ ಮಾಹಿತಿ ಕಾರ್ಯಾಗಾರ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೂಳೂರು ಘಟಕದ ಉಪಾಧ್ಯಕ್ಷ ಪುಷ್ಪರಾಜ್ ಕುಮಾರ್ ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕಾವೂರು ಪೊಲೀಸ್ ಠಾಣೆಯ ಪಿಎಸ್‌ಐ ಉಮೇಶ್ ಕುಮಾರ್ ಅವರು ಗಸ್ತು ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದರು.

ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷ ಸಂಜೀವ ಪೂಜಾರಿ, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ, ಘಟಕದ ಸಲಹೆಗಾರ ಜಿ. ಪರಮೇಶ್ವರ್ ಪೂಜಾರಿ, ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಅಧ್ಯಕ್ಷ ಜಯಾನಂದ ಅಮೀನ್, ಕಾವೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ರೋಸಮ್ಮ ಪಿ.ಪಿ., ಎ.ಎಸ್.ಐ.ಕೆ. ಉಮೇಶ್, ಶ್ರೀ ಗಣೇಶೋತ್ಸವ ಸಮಿತಿ ಕೂಳೂರು ಇದರ ಅಧ್ಯಕ್ಷ ಬಿ.ಕೆ. ಸುಜಿತ್, ಬ್ರಹ್ಮಶ್ರಿ ನಾರಾಯಣಗುರು ಮಂದಿರದ ಕಾರ್ಯದರ್ಶಿ ಹರೀಶ್ ಎಂ. ಅಮೀನ್, ಘಟಕದ ಕಾರ್ಯದರ್ಶಿ ದೀಕ್ಷಿತ್, ರಿಕ್ಷಾ ಚಾಲಕರು ಮತ್ತು ಮಾಲಕರ ಅಧ್ಯಕ್ಷರು ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಮಂದಿರದ ಕಾರ್ಯದರ್ಶಿ ಹರೀಶ್ ಎಂ. ಅಮೀನ್ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!