ಮಾಣಿ : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ “ಮರದ ನೆರಳು – ಬದುಕಿಗೆ ನೆರಳು” ಎಂಬ ಧ್ಯೇಯವಾಕ್ಯದೊಂದಿಗೆ ಹಮ್ಮಿಕೊಂಡಿರುವ ಯುವ ವೃಕ್ಷೋತ್ಸವ ಕಾರ್ಯಕ್ರಮಕ್ಕೆ ದಿನಾಂಕ 05.06.2026ರಂದುನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಸಭಾಭವನದ ವಠಾರದಲ್ಲಿ ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ನಾರಾಯಣಗುರು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ನಾರಾಯಣ ಸಾಲಿಯಾನ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷರಾದ ಗಣೇಶ್ ಸಾಯಿ ಕೊಡಾಜೆ, ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಕಾರ್ಯದರ್ಶಿ ರಮೇಶ್ ಪೂಜಾರಿ ಮುಜಲ, ಸಿಇಒ ಪಲ್ಲವಿ ಲೋಕೇಶ್, ಪ್ರಚಾರ ನಿರ್ದೇಶಕ ಚರಣ್, ಗೀತಾ ಹಾಗೂ ಸಂಘದ ಮ್ಯಾನೇಜರ್ ಜನಾರ್ಧನ ಪೂಜಾರಿ ಉಪಸ್ಥಿತರಿದ್ದರು. ಬಳಿಕ ಈ ಅಭಿಯಾನದ ಅಂಗವಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾಬನಕಟ್ಟೆ ಹಾಗೂ ಗ್ರಾಮ ಪಂಚಾಯಿತಿ ಅನಂತಾಡಿಯಲ್ಲಿ ಯುವ ವೃಕ್ಷೋತ್ಸವ ಕಾರ್ಯಕ್ರಮವನ್ನು ನಡೆಸಲಾಯಿತು.

ಈ ಕುರಿತು ಮಾತನಾಡಿದ ಘಟಕದ ಅಧ್ಯಕ್ಷ ಗಣೇಶ್ ಸಾಯಿ ಕೊಡಾಜೆ ಅವರು, ಇದೇ ರೀತಿಯ ವೃಕ್ಷಾರೋಪಣಾ ಅಭಿಯಾನವು ಸರ್ಕಾರಿ ಶಾಲೆಗಳು, ಆಸ್ಪತ್ರೆಗಳು, ಗ್ರಾಮ ಪಂಚಾಯಿತಿಗಳು ಹಾಗೂ ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ಒಂದು ತಿಂಗಳ ಕಾಲ ನಿರಂತರವಾಗಿ ನಡೆಯಲಿದ್ದು, ಪರಿಸರ ಸಂರಕ್ಷಣೆಯ ಬಗ್ಗೆ ಜನಜಾಗೃತಿ ಮೂಡಿಸುವ ಉದ್ದೇಶ ಹೊಂದಿದೆ ಎಂದು ತಿಳಿಸಿದರು. “ಒಂದು ಗಿಡ – ಒಂದು ಜೀವ” ಎಂಬ ಸಂದೇಶದೊಂದಿಗೆ ಯುವವಾಹಿನಿಯ ಈ ಪರಿಸರ ಸ್ನೇಹಿ ಅಭಿಯಾನವು ಎಲ್ಲರ ಪ್ರಶಂಸೆಗೆ ಪಾತ್ರವಾಯಿತು.


