Yuvavahini

JUN 07, 2026 10.00 PM IST

ಯುವವಾಹಿನಿ (ರಿ.) ಮಂಗಳೂರು ಘಟಕದಿಂದ

ಕೊಟ್ಟಿಯೂರು ಪರಶಿವನ ಯಾತ್ರೆ

ಮಂಗಳೂರು: ವರ್ಷದಲ್ಲಿ ಕೇವಲ ಒಂದು ತಿಂಗಳ ಅವಧಿಗೆ ಮಾತ್ರ ನಡೆಯುವ ಕೊಟ್ಟಿಯೂರು ಪರಶಿವನ ಜಾತ್ರೆಯ ಅಂಗವಾಗಿ ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಜೂನ್ 6, 2026ರಂದು ವಿಶೇಷ ಕ್ಷೇತ್ರಯಾತ್ರೆಯನ್ನು ಆಯೋಜಿಸಲಾಯಿತು.

ರಾತ್ರಿ 8.30 ಗಂಟೆಗೆ ಮಂಗಳೂರಿನಿಂದ ಹೊರಟ ಯಾತ್ರಿಕರು ಮುಂಜಾನೆ ಸುಮಾರು 4 ಗಂಟೆಗೆ ಕೊಟ್ಟಿಯೂರು ಪುಣ್ಯಕ್ಷೇತ್ರವನ್ನು ತಲುಪಿದರು. ಪವಿತ್ರ ವಾವಲಿ ನದಿಯಲ್ಲಿ ಸ್ನಾನ ಮಾಡಿ, ಮಡಿ ಬಟ್ಟೆಯಲ್ಲಿ ಕ್ಷೇತ್ರ ಪ್ರದಕ್ಷಿಣೆ ಸಲ್ಲಿಸಿ, ಭಕ್ತಿಭಾವದಿಂದ ಪರಶಿವ ಮತ್ತು ಸತಿಯ ದರ್ಶನ ಪಡೆದರು.

ಕೊಟ್ಟಿಯೂರು ಕ್ಷೇತ್ರವು ತನ್ನ ವಿಶಿಷ್ಟ ಆಧ್ಯಾತ್ಮಿಕ ಹಾಗೂ ಪರಿಸರ ಸ್ನೇಹಿ ಪರಂಪರೆಯಿಂದ ಭಕ್ತರನ್ನು ಆಕರ್ಷಿಸುತ್ತದೆ. ಆಕಾಶ ಮತ್ತು ಮಳೆಗೆ ಸಂಪೂರ್ಣವಾಗಿ ತೆರೆದುಕೊಂಡಿರುವ ಸ್ವಯಂಭೂ ಶಿವಲಿಂಗ, ಸ್ಥಳೀಯ ಹಾಗೂ ವೈ ಅರ್ಹ ವಸ್ತುಗಳಿಂದ ನಿರ್ಮಿಸಲಾದ ದೇವಾಲಯದ ವಿನ್ಯಾಸ, ಪ್ರಕೃತಿ ಮತ್ತು ದೈವತ್ವದ ಅವಿನಾಭಾವ ಸಂಬಂಧವನ್ನು ಸಾರುತ್ತದೆ. ಸರಳತೆ, ಸುಸ್ಥಿರತೆ ಮತ್ತು ಪ್ರಕೃತಿಯೊಂದಿಗೆ ಹೊಂದಾಣಿಕೆಯ ಜೀವನಶೈಲಿಯ ಸಂದೇಶವನ್ನು ಈ ಕ್ಷೇತ್ರ ಭಕ್ತರಿಗೆ ನೀಡುತ್ತದೆ.

ಈ ಕ್ಷೇತ್ರವು ಶಿವ–ಸತಿಯ ಪೌರಾಣಿಕ ಕಥೆಯೊಂದಿಗೆ ನಿಕಟ ಸಂಬಂಧ ಹೊಂದಿದೆ. ದಕ್ಷನ ಅಹಂಕಾರದಿಂದ ಉಂಟಾದ ಅವಮಾನವನ್ನು ಸಹಿಸಲಾಗದೆ ಸತಿಯು ಯೋಗಾಗ್ನಿಯಲ್ಲಿ ಲೀನವಾದಳು ಎಂಬುದು ಪುರಾಣ ಪ್ರಸಿದ್ಧ ಕಥೆ. ತನ್ನ ಪ್ರಿಯತಮೆಯನ್ನು ಕಳೆದುಕೊಂಡ ಶಿವನ ಅಪಾರ ದುಃಖ ಮತ್ತು ಕೋಪವು ವೀರಭದ್ರನ ಅವತಾರಕ್ಕೆ ಕಾರಣವಾಗಿ, ದಕ್ಷಯಾಗದ ವಿನಾಶಕ್ಕೆ ದಾರಿ ಮಾಡಿಕೊಟ್ಟಿತು. ಈ ಕಥೆಯು ಅಹಂಕಾರದ ದುಷ್ಪರಿಣಾಮ ಹಾಗೂ ನಿಸ್ವಾರ್ಥ ಪ್ರೀತಿ ಮತ್ತು ಭಕ್ತಿಯ ಮಹತ್ವವನ್ನು ಸಾರುತ್ತದೆ.

ಈ ಮಹತ್ವದ ಪೌರಾಣಿಕ ಹಿನ್ನೆಲೆಯನ್ನು ಹೊಂದಿರುವ ಪುಣ್ಯಕ್ಷೇತ್ರದಲ್ಲಿ ದರ್ಶನ ಪಡೆಯುವ ಮೂಲಕ ಯಾತ್ರಿಕರು ಅಪೂರ್ವ ಆಧ್ಯಾತ್ಮಿಕ ಅನುಭವವನ್ನು ಪಡೆದರು.ಯಾತ್ರೆಯ ಅಂಗವಾಗಿ ಪರಸ್ಸಿನಿಕ್ಕಡವು ಶ್ರೀ ಮುತ್ತಪ್ಪನ್ ಕ್ಷೇತ್ರ ಹಾಗೂ ಮಡಾಯಿ ಕಾವು ಕ್ಷೇತ್ರಗಳಿಗೂ ಭೇಟಿ ನೀಡಿ ದರ್ಶನ ಪಡೆದರು.ಯಾತ್ರಾರ್ಥಿಗಳ ಸಂಪೂರ್ಣ ಸಹಕಾರದೊಂದಿಗೆ ಕ್ಷೇತ್ರಯಾತ್ರೆಯು ಯಶಸ್ವಿಯಾಗಿ ನೆರವೇರಿತು. ಯಾತ್ರೆಯಲ್ಲಿ ಘಟಕದ ಅಧ್ಯಕ್ಷರಾದ ಹರೀಶ್ ಕೆ. ಸುವರ್ಣ, ಪ್ರವಾಸ ಸಂಚಾಲಕರಾದ ಸದಾನಂದ ಪೂಜಾರಿ ಕುಳಾಯಿ, ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜುಲೈ 21 ಬೆಳಗ್ಗೆ ಗಂಟೆ 10.30ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಗಾಣದಪಡ್ಪು, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕ

ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!