Yuvavahini

JUN 07, 2026 11.00 AM IST

ಯುವವಾಹಿನಿ(ರಿ) ಬಂಟ್ವಾಳ ಘಟಕ

ಅಧ್ಯಕ್ಷರಾಗಿ ಕಿರಣ್‌ರಾಜ್ ಪೂಂಜರೆಕೋಡಿ ಆಯ್ಕೆ

ಬಂಟ್ವಾಳ : ಯುವವಾಹಿನಿ(ರಿ) ಬಂಟ್ವಾಳ ಘಟಕದ 2026-27ನೇ ಸಾಲಿನ ಅಧ್ಯಕ್ಷರಾಗಿ ಕಿರಣ್‌ರಾಜ್ ಪೂಂಜರೆಕೋಡಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷರು : ಕಿರಣ್‌ರಾಜ್ ಪೂಂಜರೆಕೋಡಿ

ಜೂನ್ 7ರಂದು ಬಿ.ಸಿ.ರೋಡ್‌ನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ಘಟಕದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ನಿಕಟಪೂರ್ವ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಅವರು ನೂತನ ಕಾರ್ಯಕಾರಿ ಸಮಿತಿಯ ಸದಸ್ಯರ ಪಟ್ಟಿಯನ್ನು ಪ್ರಕಟಿಸಿದರು.

2026-27ನೇ ಸಾಲಿನ ಕಾರ್ಯಕಾರಿ ಸಮಿತಿಗೆ ಪ್ರಥಮ ಉಪಾಧ್ಯಕ್ಷರಾಗಿ ನಿಕೇಶ್ ಕೋಟ್ಯಾನ್, ದ್ವಿತೀಯ ಉಪಾಧ್ಯಕ್ಷರಾಗಿ ಹರೀಶ್ ಸಾಲ್ಯಾನ್ ಅಜೆಕಲ, ಕಾರ್ಯದರ್ಶಿಯಾಗಿ ಗೀತಾ ಜಗದೀಶ್, ಜತೆ ಕಾರ್ಯದರ್ಶಿಯಾಗಿ ಧನುಷ್ ಮಧ್ವ ಹಾಗೂ ಕೋಶಾಧಿಕಾರಿಯಾಗಿ ಪ್ರಜಿತ್ ಅಮೀನ್ ಏರಮಲೆ ಪದಾಧಿಕಾರಿಗಳಾಗಿ ಆಯ್ಕೆಯಾದರು.

ಆಂತರಿಕ ಲೆಕ್ಕ ಪರಿಶೋಧಕರಾಗಿ ನವೀನ್ ಪೂಜಾರಿ ಲೊರೆಟ್ಟೊ, ವಿದ್ಯಾನಿಧಿ ನಿರ್ದೇಶಕರಾಗಿ ಯೋಗೀಶ್ ಪೂಜಾರಿ ಕಲ್ಲಡ್ಕ, ನಾರಾಯಣಗುರು ತತ್ವ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕರಾಗಿ ಮಹೇಶ್ ಪೂಜಾರಿ ಬೊಳ್ಳಾಯಿ, ಕ್ರೀಡಾ ನಿರ್ದೇಶಕರಾಗಿ ವಿಕ್ರಮ್ ಶಾಂತಿ ಕೆರೆಕೋಡಿಗುತ್ತು, ಸಾಂಸ್ಕೃತಿಕ ನಿರ್ದೇಶಕರಾಗಿ ನವೀನ್ ಕುಡ್ಮೇರ್, ಪ್ರಚಾರ ನಿರ್ದೇಶಕರಾಗಿ ಬ್ರಿಜೇಶ್ ಕಂಜತ್ತೂರು, ಆರೋಗ್ಯ ನಿರ್ದೇಶಕರಾಗಿ ಶೇಖರ ಪೂಜಾರಿ ಅಗಲ್ದೋಡಿ, ಸಮಾಜ ಸೇವಾ ನಿರ್ದೇಶಕರಾಗಿ ಚಿನ್ನಾ ಕಲ್ಲಡ್ಕ, ಕಲೆ ಮತ್ತು ಸಾಹಿತ್ಯ ನಿರ್ದೇಶಕರಾಗಿ ಅಶ್ವಿನ್ ಅಮೀನ್, ವ್ಯಕ್ತಿತ್ವ ವಿಕಸನ ನಿರ್ದೇಶಕರಾಗಿ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ, ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾಗಿ ನವೀನ್ ಪೂಜಾರಿ ಕಾರಾಜೆ, ವಿದ್ಯಾರ್ಥಿ ಸಂಘಟನಾ ನಿರ್ದೇಶಕರಾಗಿ ಕಾವ್ಯಾ ಸೋರ್ನಾಡು ಹಾಗೂ ಮಹಿಳಾ ಸಂಘಟನೆ ನಿರ್ದೇಶಕರಾಗಿ ಸ್ನೇಹಾ ಸುರೇಶ್ ಆಯ್ಕೆಯಾದರು.

ಸಂಘಟನಾ ಕಾರ್ಯದರ್ಶಿಗಳಾಗಿ ಸರಿತಾ, ಜಗನ್ನಾಥ್ ಕಲ್ಲಡ್ಕ, ಚಿಂತನ್ ರಾಜ್, ಸುನೀತಾ ಮಾರ್ನಬೈಲು, ದೀರಜ್ ಕೋಟ್ಯಾನ್ ಜಕ್ರಿಬೆಟ್ಟು, ಮಲ್ಲಿಕಾ ಜ್ಯೋತಿಗುಡ್ಡೆ, ಮನ್ವಿತ್ ಕಾಂಜಿರಕೋಡಿ ಹಾಗೂ ನಿತಿನ್ ಕೆಮ್ಮಟೆಗುಡ್ಡೆ ಆಯ್ಕೆಯಾದರು.

ಕಾರ್ಯದರ್ಶಿ : ಗೀತಾ ಜಗದೀಶ್

ಆಯ್ಕೆ ಸಮಿತಿಯ ಸದಸ್ಯರಾದ ರಾಮಚಂದ್ರ ಸುವರ್ಣ, ಪ್ರೇಮನಾಥ್ ಕೆ., ನಾಗೇಶ್ ಪೊನ್ನೋಡಿ, ರಾಜೇಶ್ ಸುವರ್ಣ ಹಾಗೂ ನಾಗೇಶ್ ಪೂಜಾರಿ ನೈಬೇಲು ಅವರು ಆಯ್ಕೆ ಪ್ರಕ್ರಿಯೆಗೆ ಸಹಕಾರ ನೀಡಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜುಲೈ 21 ಬೆಳಗ್ಗೆ ಗಂಟೆ 10.30ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಗಾಣದಪಡ್ಪು, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!