ಶಕ್ತಿನಗರ : ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 14-06-2026ರಂದು ಶಕ್ತಿನಗರ ಹಿಂದೂ ರುದ್ರಭೂಮಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ವೃಕ್ಷೋತ್ಸವವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಂಗವಾಗಿ ಘಟಕದ ಸದಸ್ಯರು ರುದ್ರಭೂಮಿ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಸಿ, ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರಿದರು. ವಿಶ್ವ ಪರಿಸರ ದಿನದ ಪ್ರಯುಕ್ತ ಸದಸ್ಯರೆಲ್ಲರೂ ಒಟ್ಟಾಗಿ ಹಣ್ಣುಗಳ ಸಸಿಗಳನ್ನು ನೆಟ್ಟು ವೃಕ್ಷಾರೋಪಣಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಈ ಸಂದರ್ಭದಲ್ಲಿ ರುದ್ರಭೂಮಿಯ ವ್ಯವಸ್ಥಾಪಕರಾದ ಪದ್ಮನಾಭ ಅಂಚನ್ ಕಕ್ಕೆಬೆಟ್ಟು ಅವರು ಯುವವಾಹಿನಿಯ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿ, ಸಂಸ್ಥೆಯು ಸಮಾಜದ ಒಳಿತಿಗಾಗಿ ಕೈಗೊಳ್ಳುತ್ತಿರುವ ಸೇವಾ ಚಟುವಟಿಕೆಗಳು ನಿರಂತರವಾಗಿ ಮುಂದುವರಿಯಲಿ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ನಿಕಟಪೂರ್ವ ಸದಸ್ಯ ಕಿಶೋರ್ ಕೊಟ್ಟಾರಿ, ಬಿಲ್ಲವ ಮುಖಂಡ ಶರಣು ಸರಿಪಳ್ಳ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ, ಕುಂಟಲ್ಪಾಡಿ ಅಧ್ಯಕ್ಷ ತುಕಾರಾಂ ಪೂಜಾರಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಮಾಜ ಸೇವೆ, ಪರಿಸರ ಸಂರಕ್ಷಣೆ ಹಾಗೂ ಸಾರ್ವಜನಿಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಯುವವಾಹಿನಿ ಶಕ್ತಿನಗರ ಘಟಕವು ಹಮ್ಮಿಕೊಂಡ ಈ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.


