Yuvavahini

JUN 14, 2026 1.00 PM IST

ಯುವವಾಹಿನಿ (ರಿ.) ಸುಳ್ಯ ಘಟಕ

ಕುಟುಂಬ ಸಮ್ಮಿಲನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಸುಳ್ಯ : ಯುವವಾಹಿನಿ (ರಿ.) ಸುಳ್ಯ ಘಟಕದ ವತಿಯಿಂದ ಕುಟುಂಬ ಸಮ್ಮಿಲನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಘಟಕದ ಕೋಶಾಧಿಕಾರಿ ಹರೀಶ್ ದೋಳ ಅವರ ನಿವಾಸದಲ್ಲಿ ಸಂಭ್ರಮದಿಂದ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಘಟಕದ ಸದಸ್ಯರು ಹಾಗೂ ಅವರ ಕುಟುಂಬದವರಿಗಾಗಿ ವಿವಿಧ ಮೋಜಿನ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕುಟುಂಬ ಸದಸ್ಯರ ಪರಸ್ಪರ ಒಡನಾಟ ಮತ್ತು ಸೌಹಾರ್ದತೆಯನ್ನು ವೃದ್ಧಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇಕಡ 85 ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿದ ಘಟಕದ ಸಕ್ರಿಯ ಸದಸ್ಯರ ಮಕ್ಕಳನ್ನು ಗುರುತಿಸಿ ಸನ್ಮಾನಿಸಲಾಯಿತು. ಒಟ್ಟು 12 ಪ್ರತಿಭಾವಂತ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರವನ್ನು ಸ್ವೀಕರಿಸಿದರು.

ಇದೇ ಸಂದರ್ಭದಲ್ಲಿ ಶಿವಗಿರಿ ಯಾತ್ರೆಯಲ್ಲಿ ಭಾಗವಹಿಸಿದ್ದ ಸದಸ್ಯರು ತಮ್ಮ ಅನುಭವ ಮತ್ತು ಅನಿಸಿಕೆಗಳನ್ನು ಹಂಚಿಕೊಂಡರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಪುತ್ತೂರು ರೋಟರಿ ಕ್ಲಬ್ ಅಧ್ಯಕ್ಷರು ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಕೋಶಾಧಿಕಾರಿ ಶಶಿಧರ ಕಿನ್ನಿಮಜಲು ಅವರು ಮಾತನಾಡಿ, ಯುವವಾಹಿನಿಯ ಸಮಾಜಮುಖಿ ಹಾಗೂ ಸಂಘಟನಾ ಚಟುವಟಿಕೆಗಳನ್ನು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಕೃಷ್ಣಕುಮಾರ್ ಅಲೆಕ್ಕಾಡಿ, ಮಾಜಿ ಅಧ್ಯಕ್ಷ ಎನ್.ಎಸ್.ಡಿ. ವಿಠಲದಾಸ್ ಹಾಗೂ ಯುವವಾಹಿನಿ ಸುಳ್ಯ ಘಟಕದ ಕಾರ್ಯದರ್ಶಿ ರಂಜಿತ್ ಕಲ್ಲೋಣಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಮಹೇಶ್ ಕಲ್ಪಣೆ ವಹಿಸಿದ್ದರು. ಮಾಜಿ ಅಧ್ಯಕ್ಷ ಹರೀಶ್ ಕಾವಿನಮೂಲೆ ಸ್ವಾಗತಿಸಿದರು. ಕಾರ್ಯಕ್ರಮವನ್ನು ಮಾಜಿ ಅಧ್ಯಕ್ಷ ಚಂದ್ರಶೇಖರ್ ಹೈದಂಗೂರು ಅವರು ನಿರೂಪಿಸಿದರು.

ಕುಟುಂಬ ಸದಸ್ಯರ ಸಮ್ಮಿಲನ, ವಿದ್ಯಾರ್ಥಿಗಳ ಸಾಧನೆಗೆ ಗೌರವ ಹಾಗೂ ಸಂಘಟನೆಯ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಿದ ಈ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜುಲೈ 21 ಬೆಳಗ್ಗೆ ಗಂಟೆ 10.30ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಗಾಣದಪಡ್ಪು, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕ

ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!