ಮಂಗಳೂರು: ದಿನಾಂಕ: 15-06-2026 ರಂದು ಸೋಮವಾರ ಸಂಜೆ 5.30 ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ಯುವವಾಹಿನಿ (ರಿ.) ಕೂಳೂರು ಘಟಕ ಇವರ ಸಹಯೋಗದೊಂದಿಗೆ ನಡೆಯಿತು. ಕೂಳೂರು ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಸದಸ್ಯರ ತಂಡವು ಭಕ್ತಿ ಭಾವದಿಂದ ಭಜನೆಯನ್ನು ಗೋಕರ್ಣನಾಥ ಹಾಗೂ ನಾರಾಯಣ ಗುರುಗಳಿಗೆ ಸಮರ್ಪಿಸಿದರು.

ಸಂಜೆ 7 ಗಂಟೆಗೆ ಸರಿಯಾಗಿ ಕ್ಷೇತ್ರದ ನಾರಾಯಣ ಗುರುಗಳಿಗೆ ಪೂಜೆ ಸಲ್ಲಿಸಿ ಅಂದಿನ ಭಜನಾ ತಂಡದ ಸದಸ್ಯರಿಗೆ ಗೌರವ ಸಲ್ಲಿಸಲಾಯಿತು. ಸಾಪ್ತಾಹಿಕ ಭಜನಾ ಸಂಕೀರ್ತನೆಯ ಸಂಯೋಜಕರಾದ ಮಂಗಳೂರು ಘಟಕದ ಅಧ್ಯಕ್ಷರು ಹರೀಶ್ ಕೆ. ಸುವರ್ಣ, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.


