ಬೆಂಗಳೂರು : ಬಿ ಕೆ ಹರಿಪ್ರಸಾದ್ ಅವರು ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ, ದಿನಾಂಕ 14.06.2026 ಯುವವಾಹಿನಿ ಕೇಂದ್ರ ಸಮಿತಿಯ ಸುಮಾರು 50 ಸದಸ್ಯರ ತಂಡವು ಬೆಂಗಳೂರಿನ ಅವರ ನಿವಾಸಕ್ಕೆ ಭೇಟಿ ನೀಡಿ ಆತ್ಮೀಯವಾಗಿ ಅಭಿನಂದನೆ ಸಲ್ಲಿಸಿತು.

ಈ ಸಂದರ್ಭದಲ್ಲಿ ಯುವವಾಹಿನಿಯ ಸದಸ್ಯರು ಬಿ ಕೆ ಹರಿಪ್ರಸಾದ್ ಅವರಿಗೆ ಶುಭ ಹಾರೈಸಿ, ಅವರ ಮುಂದಿನ ರಾಜಕೀಯ ಹಾಗೂ ಸಾಮಾಜಿಕ ಕಾರ್ಯಚಟುವಟಿಕೆಗಳಿಗೆ ಯಶಸ್ಸನ್ನು ಕೋರಿದರು. ಹರಿಪ್ರಸಾದ್ ಅವರು ಯುವವಾಹಿನಿಯ ಸಮಾಜಮುಖಿ ಚಟುವಟಿಕೆಗಳನ್ನು ಶ್ಲಾಘಿಸಿ, ಸಂಸ್ಥೆಯ ಕಾರ್ಯಗಳಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.

ಭೇಟಿಯ ವೇಳೆ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಕೋಶಾಧಿಕಾರಿ, ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.


