Yuvavahini

JUN 18, 2026 3.22 PM IST

ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಯುವ ವೃಕ್ಷೋತ್ಸವ – 2026

ಯುವ ವೃಕ್ಷೋತ್ಸವದ ನಾಲ್ಕನೇ ಹಂತ: ರುದ್ರಭೂಮಿ ಹಾಗೂ ಅಂಗನವಾಡಿಯಲ್ಲಿ ಹಸಿರಿನ ಸಂಕಲ್ಪ

ಮಾಣಿ : ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಯುವ ವೃಕ್ಷೋತ್ಸವ – 2026ರ ನಾಲ್ಕನೇ ಹಂತದ ಅಂಗವಾಗಿ ಕೆದಿಲ ಗ್ರಾಮ ಪಂಚಾಯಿತಿಯ ರುದ್ರಭೂಮಿಯಲ್ಲಿ ವೃಕ್ಷಾರೋಪಣ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಯಿತು.

“ಇಂದು ನೆಡುವ ಗಿಡ ನಾಳೆಯ ಪೀಳಿಗೆಗೆ ನೀಡುವ ಅಮೂಲ್ಯ ಉಡುಗೊರೆ” ಎಂಬ ಸಂದೇಶದೊಂದಿಗೆ ನಡೆದ ಕಾರ್ಯಕ್ರಮದಲ್ಲಿ, “ಅಂತಿಮ ಯಾತ್ರೆಯ ತಾಣವಾಗಿರುವ ರುದ್ರಭೂಮಿಯೂ ಹಸಿರಿನಿಂದ ಕಂಗೊಳಿಸಿದಾಗ, ಅದು ಜೀವನದ ನಿರಂತರತೆಯ ಸಂಕೇತವಾಗುತ್ತದೆ” ಎಂಬ ಪರಿಸರ ಕಾಳಜಿಯ ಸಂದೇಶವನ್ನು ಸಾರಲಾಯಿತು. ಈ ಸಂದರ್ಭದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಸಂಕಲ್ಪ ಕೈಗೊಳ್ಳಲಾಯಿತು.

ಇದೇ ಸಂದರ್ಭದಲ್ಲಿ ಪಾಟ್ರಕೋಡಿ ಅಂಗನವಾಡಿ ಕೇಂದ್ರದಲ್ಲಿಯೂ ಯುವ ವೃಕ್ಷೋತ್ಸವವನ್ನು ಆಚರಿಸಿ, ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಗಿಡಗಳನ್ನು ನೆಡಲಾಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷರಾದ ಗಣೇಶ್ ಸಾಯಿ ಕೊಡಾಜೆ, ಕೋಶಾಧಿಕಾರಿಯಾದ ತ್ರಿವೇಣಿ ರಮೇಶ್, ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ಸತೀಶ್ ಪೂಜಾರಿ, ಸಂಘಟನಾ ಕಾರ್ಯದರ್ಶಿ ಬಾಲಕೃಷ್ಣ ಕೆರೆಕೋಡಿ, ನಿತೀನ್ ಅಂಗರಾಜೆ, ಯಶೋಧ ಪೆರ್ನೆ, ಕೆದಿಲ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿಗಳು, ಅಂಗನವಾಡಿ ಕೇಂದ್ರದ ಶಿಕ್ಷಕಿ ಮತ್ತು ಸಹಾಯಕಿಯರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಕೈಜೋಡಿಸಿದರು. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಹಸಿರು ಭವಿಷ್ಯ ನಿರ್ಮಾಣಕ್ಕಾಗಿ ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕೆಂದು ಭಾಗವಹಿಸಿದವರು ಅಭಿಪ್ರಾಯಪಟ್ಟರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜುಲೈ 21 ಬೆಳಗ್ಗೆ ಗಂಟೆ 10.30ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಗಾಣದಪಡ್ಪು, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!