Yuvavahini

JUN 13, 2026 9.00 PM IST

ಯುವವಾಹಿನಿ ಮುಲ್ಕಿ ಘಟಕದ

ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ

ಮುಲ್ಕಿ : ಯುವವಾಹಿನಿ (ರಿ.) ಮುಲ್ಕಿ ಘಟಕದ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜೂನ್ 13, 2026ರಂದು ಸಂಜೆ 6 ಗಂಟೆಗೆ ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ನಡೆಯಿತು.

ಬ್ರಹ್ಮಶ್ರೀ ನಾರಾಯಣಗುರು ದೇವರ ಪೂಜೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಘಟಕದ ಸದಸ್ಯೆ ರಾಜೇಶ್ವರಿ ನಿತ್ಯಾನಂದ ಪ್ರಾರ್ಥನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮುಲ್ಕಿ ನಗರ ಪಂಚಾಯತ್‌ನ ಮಾಜಿ ಅಧ್ಯಕ್ಷ ಸತೀಶ್ ಅಂಚನ್ ಮಾತನಾಡಿ, ಯುವ ಸಮಾಜವು ಶೈಕ್ಷಣಿಕ, ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಂಘಟನಾತ್ಮಕವಾಗಿ ಬೆಳೆಯಲು ಯುವವಾಹಿನಿ ಪೂರಕ ಶಕ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಿದರು. ಯುವವಾಹಿನಿ ಮುಲ್ಕಿ ಘಟಕದ ಅಧ್ಯಕ್ಷ ವಿನಯ್ ಕುಮಾರ್ ಮಟ್ಟು ಅಧ್ಯಕ್ಷತೆ ವಹಿಸಿ, ನೂತನ ಅಧ್ಯಕ್ಷೆ ಚರಿಷ್ಮಾ ಶ್ರೀನಿವಾಸ್ ಮತ್ತು ತಂಡ ಪ್ರತಿಜ್ಞಾವಿಧಿ ಸ್ವೀಕರಿಸಿದರು ಮುಲ್ಕಿ ನಾರಾಯಣಗುರು ಶಿಕ್ಷಣ ಸಂಸ್ಥೆಯ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿಭಾಗಗಳಲ್ಲಿ ಸಾಧನೆಗೈದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಡು ನೂತನ ಕಾರ್ಯಕಾರಿ ಸಮಿತಿ ಸದಸ್ಯರಿಗೆ ಪ್ರತಿಜ್ಞಾವಿಧಿ ಬೋಧಿಸಿ, ಯುವವಾಹಿನಿಯ ತತ್ವ ಹಾಗೂ ಆದರ್ಶಗಳು ಯುವಜನರಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವುದರ ಜೊತೆಗೆ ಸಮಾಜಮುಖಿ ಚಿಂತನೆಗಳನ್ನು ರೂಪಿಸುತ್ತವೆ ಎಂದು ಹೇಳಿದರು.

ವೇದಿಕೆಯಲ್ಲಿ ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಉಪಾಧ್ಯಕ್ಷೆ ಸೀತಾ ಜಿ. ಕೋಟ್ಯಾನ್, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುಶಾಂತ್ ಕರ್ಕೇರ ಮೂಡಬಿದ್ರೆ, ನೂತನ ಕಾರ್ಯದರ್ಶಿ ವೇದಾ ಜಯ ಕುಬೇರ್ ಹಾಗೂ ಕೋಶಾಧಿಕಾರಿ ಭವಿಷ್ ಬಿ. ಸಾಲ್ಯಾನ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಅಧ್ಯಕ್ಷ ವಿನಯ್ ಕುಮಾರ್ ಮಟ್ಟು ಸ್ವಾಗತಿಸಿದರು. ಕಾರ್ಯದರ್ಶಿ ಪ್ರೇರಣಾ ಡಿ. ವಾರ್ಷಿಕ ವರದಿ ವಾಚಿಸಿದರು. ಮಾಜಿ ಅಧ್ಯಕ್ಷ ಸತೀಶ್ ಕಿಲ್ಪಾಡಿ ಕಾರ್ಯಕ್ರಮ ನಿರೂಪಿಸಿದರು. ಪ್ರೇರಣಾ ಡಿ. ವಂದನಾರ್ಪಣೆಗೈದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜುಲೈ 21 ಬೆಳಗ್ಗೆ ಗಂಟೆ 10.30ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಗಾಣದಪಡ್ಪು, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!