Yuvavahini

JUN 17, 2026 11.00 AM IST

ಯುವವಾಹಿನಿ (ರಿ.) ವಿಟ್ಲ ಘಟಕದ ವತಿಯಿಂದ

ಭೂಸೇನೆಗೆ ಆಯ್ಕೆಯಾದ ಆರು ಯುವಕರಿಗೆ ಗೌರವ ಸನ್ಮಾನ

ವಿಟ್ಲ :“ದೇಶ ಸೇವೆಯೇ ಈಶ ಸೇವೆ” ಎಂಬ ಉದಾತ್ತ ಧ್ಯೇಯದೊಂದಿಗೆ ಭಾರತೀಯ ಭೂಸೇನೆಗೆ ಆಯ್ಕೆಯಾದ ವಿಟ್ಲ ಪರಿಸರದ ಆರು ಮಂದಿ ಸಾಧಕ ಯುವಕರಿಗೆ ಯುವವಾಹಿನಿ (ರಿ.) ವಿಟ್ಲ ಘಟಕದ ವತಿಯಿಂದ ದಿನಾಂಕ 17-06-2026ರಂದು ಬಿಲ್ಲವ ಸಂಘದ ವಿಟ್ಲ ದೇಯಿ ಬೈದಿತಿ ಸಭಾಭವನದಲ್ಲಿ ಗೌರವ ಸನ್ಮಾನ ಕಾರ್ಯಕ್ರಮ ನಡೆಯಿತು.

ಯುವವಾಹಿನಿ ವಿಟ್ಲ ಘಟಕದ ಅಧ್ಯಕ್ಷ ಕೆ.ಟಿ. ಆನಂದ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಮಾರಂಭದಲ್ಲಿ ಬಿಲ್ಲವ ಸಂಘದ ಅಧ್ಯಕ್ಷ ಜಯಪ್ರಕಾಶ್ ಪಾಣೆಮಜಲು, ನಿವೃತ್ತ ಕ್ಯಾಪ್ಟನ್ ಹಾಗೂ ಅಗ್ನಿವೀರ ತರಬೇತಿ ಅಧಿಕಾರಿ ದಾಸಪ್ಪ ನೆಕ್ಕಿಲಾರು, ಬಿಲ್ಲವ ಸಂಘದ ಗೌರವಾಧ್ಯಕ್ಷ ಸಂಜೀವ ಪೂಜಾರಿ ಗಜಾನನ, ಬಿಲ್ಲವ ಮಹಿಳಾ ಘಟಕದ ಅಧ್ಯಕ್ಷೆ ವನಿತಾ ಚಂದ್ರಹಾಸ ಮತ್ತು ವಿಟ್ಲ ಪಟ್ಟಣ ಪಂಚಾಯತ್ ಉಪಾಧ್ಯಕ್ಷೆ ಸಂಗೀತಾ ಜಗದೀಶ್ ಪಾಣೆಮಜಲು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬ್ರಹ್ಮಶ್ರೀ ಸಹಕಾರಿ ಸಂಘದ ಅಧ್ಯಕ್ಷ ಎನ್. ಸಂಜೀವ ಪೂಜಾರಿ ನಿಡ್ಯ ಪ್ರಸ್ತಾವನೆಗೈದರೆ, ಗೌರವನಮನ ಸ್ವೀಕರಿಸಿದ ಯುವಕರನ್ನು ಯುವವಾಹಿನಿ ವಿಟ್ಲ ಘಟಕದ ಕಾರ್ಯದರ್ಶಿ ಧನಲಕ್ಷ್ಮಿ ರಾಜೇಶ್ ಸಭೆಗೆ ಪರಿಚಯಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ದೇಶಸೇವೆಗೆ ಮುಂದಾಗಿರುವ ಯುವಕರು ಸಮಾಜಕ್ಕೆ ಮಾದರಿಯಾಗಿದ್ದು, ಅವರ ಸಾಧನೆ ಇತರ ಯುವಕರಿಗೂ ಪ್ರೇರಣೆಯಾಗಲಿ ಎಂದು ಹಾರೈಸಿದರು. ಗುರುಸ್ತುತಿಯೊಂದಿಗೆ ಆರಂಭವಾದ ಈ ಕಾರ್ಯಕ್ರಮದಲ್ಲಿ ಬಿಲ್ಲವ ಸಂಘ, ಮಹಿಳಾ ಘಟಕ ಹಾಗೂ ಯುವವಾಹಿನಿಯ ಪದಾಧಿಕಾರಿಗಳು, ಸದಸ್ಯರು ಮತ್ತು ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯುವಕರ ಸಾಧನೆಯನ್ನು ಶ್ಲಾಘಿಸಿದರು. ಲಕ್ಷ್ಮಣ ಪೂಜಾರಿ ಕಾರ್ಯಕ್ರಮ ನಿರೂಪಿಸಿದರೆ, ಮಹಿಳಾ ಘಟಕದ ಕಾರ್ಯದರ್ಶಿ ಕವಿತಾ ಪರಮೇಶ್ವರ್ ವಂದನಾರ್ಪಣೆ ಮಾಡಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜುಲೈ 21 ಬೆಳಗ್ಗೆ ಗಂಟೆ 10.30ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಗಾಣದಪಡ್ಪು, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!