Yuvavahini

JUN 16, 2026 7.30 PM IST

ಯುವವಾಹಿನಿ (ರಿ) ಮಂಗಳೂರು ಘಟಕ

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾನೂನು ಅರಿವು ಅಗತ್ಯ : ಅರೋಲಿನ್ ಡಿ’ಸೋಜ”

ಮಂಗಳೂರು : ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮವು ಜೂನ್ 16ರಂದು ನಡೆಯಿತು. ಕಾರ್ಯಕ್ರಮವು ಗುರು ಪೂಜೆಯೊಂದಿಗೆ ಆರಂಭಗೊಂಡು, ಗುರು ಸ್ತುತಿಯ ಬಳಿಕ ಘಟಕದ ಅಧ್ಯಕ್ಷ ಹರೀಶ್ ಕೆ. ಸುವರ್ಣ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಅಧ್ಯಕ್ಷರು ಸಭಿಕರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಅರೋಲಿನ್ ಡಿ’ಸೋಜ ಅವರು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಮಹತ್ವ ಹಾಗೂ ಬಾಲ ಕಾರ್ಮಿಕ ಪದ್ಧತಿ ತಡೆಗೆ ಸಂಬಂಧಿಸಿದ ಕಾನೂನುಗಳ ಕುರಿತು ಮಾಹಿತಿ ನೀಡಿದರು. ಬಾಲ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯ ಪ್ರಕಾರ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಯಾವುದೇ ಉದ್ಯೋಗದಲ್ಲಿ ತೊಡಗಿಸುವುದು ಕಾನೂನುಬಾಹಿರವಾಗಿದ್ದು, ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದರು. 14 ರಿಂದ 18 ವರ್ಷ ವಯಸ್ಸಿನ ಕಿಶೋರರನ್ನು ಅಪಾಯಕಾರಿ ಉದ್ಯೋಗಗಳಲ್ಲಿ ತೊಡಗಿಸುವುದಕ್ಕೂ ಅವಕಾಶವಿಲ್ಲ. ಕುಟುಂಬದ ಸ್ವಂತ ಕೆಲಸಗಳಲ್ಲಿ ಸಹಕರಿಸಬಹುದಾದರೂ, ಅವರ ಶಿಕ್ಷಣಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಮಕ್ಕಳಿಗೆ ಸಂಬಂಧಿಸಿದ ಸಮಸ್ಯೆಗಳು ಅಥವಾ ಶೋಷಣೆ ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಿ ನೆರವು ಪಡೆಯಬಹುದಾಗಿದೆ. ಅಲ್ಲದೆ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಖಿ ಒನ್ ಸ್ಟಾಪ್ ಸೆಂಟರ್ನ 24×7 ಸೇವೆಯನ್ನೂ ಸದುಪಯೋಗಪಡಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪ್ರತಿಯೊಬ್ಬರೂ ಕಾನೂನು ಅರಿವು ಹೊಂದಿ, ತಮ್ಮ ಸುತ್ತಮುತ್ತಲಿನ ಜನರಲ್ಲಿಯೂ ಜಾಗೃತಿ ಮೂಡಿಸುವ ಮೂಲಕ ಸಹಕರಿಸಬೇಕು ಎಂದು ಅವರು ಕರೆ ನೀಡಿದರು. ಈ ಸಂದರ್ಭದಲ್ಲಿ ಅರೋಲಿನ್ ಡಿ’ಸೋಜ ಅವರನ್ನು ಯುವವಾಹಿನಿ ಮಂಗಳೂರು ಘಟಕದ ವತಿಯಿಂದ ಗೌರವಿಸಲಾಯಿತು. ಘಟಕದ ಸದಸ್ಯ ಸತೀಶ್ ಜಿ.ಪಿ. ಧನ್ಯವಾದ ಸಲ್ಲಿಸಿದರು. ಸಭೆಯಲ್ಲಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜುಲೈ 21 ಬೆಳಗ್ಗೆ ಗಂಟೆ 10.30ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಗಾಣದಪಡ್ಪು, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!