Yuvavahini

JUN 18, 2026 6.00 PM IST

ಸಾಯಿ ನಾಮಸ್ಮರಣೆಯಲ್ಲಿ ತಲ್ಲೀನರಾದ ಭಕ್ತರು : ಯುವವಾಹಿನಿ ಮಾಣಿ ಘಟಕದ ವತಿಯಿಂದ “ಸಾಯಿ ಭಕ್ತಿ ಸುಧೆ”

ಶಂಭೂರಿನ ದಕ್ಷಿಣ ಶ್ರೀ ಶಿರ್ಡಿ ಸಾಯಿಬಾಬಾ ಮಂದಿರದಲ್ಲಿ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ದಿನಾಂಕ 18-06-2026ರಂದು ಸಂಜೆ 6.00 ಗಂಟೆಯಿಂದ ರಾತ್ರಿ 9.00 ಗಂಟೆಯವರೆಗೆ “ಸಾಯಿ ಭಕ್ತಿ ಸುಧೆ” ಕಾರ್ಯಕ್ರಮವು ಭಕ್ತಿಭಾವದಿಂದ ನೆರವೇರಿತು.

ಕಾರ್ಯಕ್ರಮದ ಆರಂಭದಲ್ಲಿ ಮಂದಿರದ ಅರ್ಚಕರಾದ ಶ್ರೀ ಕೇಶವ ಶಾಂತಿ ಹಾಗೂಆಡಳಿತ ಮುಖ್ಯಸ್ಥರು ಸುರಜ್ ಸಾಯಿಅವರ ಮಾರ್ಗದರ್ಶನ ಹಾಗೂ ಸಮ್ಮುಖದಲ್ಲಿ ಯುವವಾಹಿನಿ (ರಿ.) ಮಾಣಿ ಘಟಕದ ಪದಾಧಿಕಾರಿಗಳು, ಸದಸ್ಯರು ಹಾಗೂ ಭಜನಾ ತಂಡದ ಸದಸ್ಯರು ಮಂದಿರದ ಪರಿಸರದಲ್ಲಿ ಎರಡು ಸಂಪಿಗೆ ಗಿಡಗಳನ್ನು ನೆಡುವುದರ ಮೂಲಕ “ಯುವ ವೃಕ್ಷೋತ್ಸವ” ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಿದರು. ಪರಿಸರ ಸಂರಕ್ಷಣೆ ಮತ್ತು ಆಧ್ಯಾತ್ಮಿಕತೆಯ ಸುಂದರ ಸಮನ್ವಯವನ್ನು ಸಾರಿದ ಈ ಕಾರ್ಯವು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಬಳಿಕ “ಭಜನೆಯ ಭಕ್ತಿಯಲ್ಲಿ ಒಂದಾಗೋಣ, ಭಕ್ತಿಯ ಬೆಳಕಿನಲ್ಲಿ ಬದುಕನ್ನು ಸಾರ್ಥಕಗೊಳಿಸೋಣ” ಎಂಬ ಮಹೋದ್ದೇಶದೊಂದಿಗೆ “ಸಾಯಿ ಭಕ್ತಿ ಸುಧೆ” ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸುಮಾರು ಮೂರು ಗಂಟೆಗಳ ಕಾಲ ನಡೆದ ಈ ಭಕ್ತಿ ಸುಧೆಯಲ್ಲಿ ಭಕ್ತರು ಸಾಯಿ ನಾಮಸ್ಮರಣೆಯಲ್ಲಿ ತಲ್ಲೀನರಾಗಿ, ಭಜನೆಗಳ ಮೂಲಕ ಸಾಯಿಬಾಬರನ್ನು ಭಕ್ತಿಪೂರ್ವಕವಾಗಿ ಸ್ಮರಿಸಿದರು. ಮಂದಿರದ ವಾತಾವರಣ ಭಕ್ತಿಯ ಅಲೆಗಳಿಂದ ತುಂಬಿ ತುಳುಕುತ್ತಿದ್ದು, ಭಜನೆಯ ನಾದವು ಎಲ್ಲರ ಮನಸ್ಸಿಗೆ ಆಧ್ಯಾತ್ಮಿಕ ಶಾಂತಿ, ನೆಮ್ಮದಿ ಹಾಗೂ ದೈವಿಕ ಅನುಭವವನ್ನು ನೀಡಿತು.

ಈ ಸಂದರ್ಭದಲ್ಲಿ ಮಾತನಾಡಿದ ಮಂದಿರದ ಅರ್ಚಕರಾದ ಶ್ರೀ ಕೇಶವ ಶಾಂತಿ ಅವರು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯು ಇಂದು ಹೆಮ್ಮರವಾಗಿ ಬೆಳೆದು ವಿವಿಧ ಘಟಕಗಳ ಮೂಲಕ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಅಮೂಲ್ಯ ಸೇವೆ ಸಲ್ಲಿಸುತ್ತಿರುವುದನ್ನು ಶ್ಲಾಘಿಸಿದರು. “ವಿದ್ಯೆ – ಉದ್ಯೋಗ – ಸಂಪರ್ಕ” ಎಂಬ ಧ್ಯೇಯವಾಕ್ಯದೊಂದಿಗೆ ಯುವವಾಹಿನಿ ಸಮಾಜಮುಖಿ ಕಾರ್ಯಗಳನ್ನು ಯಶಸ್ವಿಯಾಗಿ ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಜನಪರ ಹಾಗೂ ಮಾನವೀಯ ಸೇವೆಗಳನ್ನು ಮಾಡುವ ಶಕ್ತಿ ಮತ್ತು ಆಶೀರ್ವಾದವನ್ನು ಶ್ರೀ ಸಾಯಿನಾಥರು ನೀಡಲಿ ಎಂದು ಹಾರೈಸಿದರು.

ಭಕ್ತಿ, ಸೇವೆ ಮತ್ತು ಸಮಾಜಮುಖಿ ಚಟುವಟಿಕೆಗಳ ಮೂಲಕ ಜನರ ಹೃದಯದಲ್ಲಿ ವಿಶೇಷ ಸ್ಥಾನ ಪಡೆದಿರುವ ಯುವವಾಹಿನಿಯ ಪ್ರತಿಯೊಂದು ಕಾರ್ಯಕ್ಕೂ ಶ್ರೀ ಸಾಯಿಬಾಬರ ಅನುಗ್ರಹ ಮತ್ತು ಮಾರ್ಗದರ್ಶನ ಸದಾ ಇದೆ ಎಂಬ ಭಾವನೆ ಕಾರ್ಯಕ್ರಮದಾದ್ಯಂತ ವ್ಯಕ್ತವಾಯಿತು.

ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಮಾಣಿ ಘಟಕದ ಅಧ್ಯಕ್ಷರಾದ ಗಣೇಶ್ ಸಾಯಿ ಕೊಡಾಜೆ, ಕಾರ್ಯದರ್ಶಿ ವಿಶ್ವನಾಥ ಪೂಜಾರಿ, ಉಪಾಧ್ಯಕ್ಷರಾದ ಸತೀಶ್ ಕೊಪ್ಪರಿಗೆ, ಕೋಶಾಧಿಕಾರಿ ತ್ರಿವೇಣಿ ರಮೇಶ್, ಮಾಜಿ ಅಧ್ಯಕ್ಷರಾದ ಹರೀಶ್ ಪೂಜಾರಿ ಬಾಕಿಲ, ರಮೇಶ್ ಪೂಜಾರಿ ಮುಜಲ, ಜಯಂತ ಬರಿಮಾರು, ನಾಗೇಶ್ ಪೂಜಾರಿ ಕೊಂಕಣಕೊಡಿ, ಪದಾಧಿಕಾರಿಗಳು, ಸದಸ್ಯರು ಹಾಗೂ ಯುವವಾಹಿನಿಯ ಭಜನಾ ತಂಡದ ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜುಲೈ 21 ಬೆಳಗ್ಗೆ ಗಂಟೆ 10.30ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಗಾಣದಪಡ್ಪು, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!